ಸತೀಶ್ ಜಾರಕಿಹೊಳಿಗೆ ಕೈ ತಪ್ಪಿತು ಕೆಪಿಸಿಸಿ ಅಧ್ಯಕ್ಷ ಸ್ಥಾನ, ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಸಾಲಿನಲ್ಲಿ ಸತೀಶ್ ಜಾರಕಿಹೊಳಿಗೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗುವುದು, ಸತೀಸ್ ಜಾರಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಜೊತೆಗೆ ಸಚಿವ ಸ್ಥಾನ ಬೇಕು ಪಟ್ಟು ಹಿಡಿದಿದ್ದರು.

ಈ ವಿಚಾರವಾಗಿ, ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದೆ. ಈ ವಿಚಾರ ತಿಳಿದ ರಮೇಶ್ ಜಾರಕಿಹೊಳಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ತನ್ನ ಸಹೋದರನ ಬಗ್ಗೆ ಹೇಳಿಕೆ ನೀಡಿದ್ದಾರೆ, ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ದೇವರು ಒಳ್ಳೆಯದು ಮಾಡಿದ್ದಾನೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗದೇ ಇರುವುದು ಉತ್ತವಾಗಿದೆ, ಕಾರಣ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಆಧ್ಯಕ್ಷ ಆಗದೇ ಇರುವುದು ದೇವರೇ ಒಳ್ಳೆಯದನ್ನ ಮಾಡಿದ್ದಾನೆ. ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿದ್ದರೇ ನಮಗ ತೊಂದರೆ ಆಗುತ್ತಿತ್ತು ಎಂದು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ತನ್ನ ಸಹೋದರನ ಬಗ್ಗೆ ಅಚ್ಚರಿ ಹೇಳಿಕೆ ನೀಡಿರುವುದು ಬಿಜೆಪಿಯವರಿಗೆ ಸಂತೋಷವಾದರೆ, ಕೈ ಪಕ್ಷಕ್ಕೆ ಶಾಕ್ ನೀಡಿದೆ. ಕೈ ಪಕ್ಷದಲ್ಲಿ ಒಳ ಮುನಿಸು ಇಲ್ಲಿಗೆ ನಿಲ್ಲುವಂತೆ ಕಾಣುತ್ತಿಲ್ಲ ಇದೇ ವಿಚಾರ ಇಟ್ಟುಕೊಂಡು ಬಿಜೆಪಿಗರು ಟಾಂಟ್ ನೀಡುತ್ತಲೇ ಇದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others