ಬೆಂಗಳೂರಿನಲ್ಲಿ ನೀಟ್ ಅಕ್ರಮ ಖಂಡಿಸಿ CJP ಧರಣಿ : ನಟ ಪ್ರಕಾಶ್ ರಾಜ್ ಭಾಗಿ

ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಕ್ರೋಜ್‌ ಪಕ್ಷ ಬೃಹತ್ ಪ್ರತಿಭಟನೆ ನಡೆಸಿತು. ಮೊನ್ನೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಯಶಸ್ವಿಯಾಗಿದ್ದರು ಇದರ ಬೆನ್ನಲ್ಲೇ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಯುವಕರು, ವಿದ್ಯಾರ್ಥಿಗಳು ಹಾಗೂ ಆಕ್ರೋಶಗೊಂಡಿದ್ದರು, ಭ್ರಷ್ಟಾಚಾರ ಮತ್ತು ಪರೀಕ್ಷೆ ಅಕ್ರಮಗಳಿಂದ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಈ ಮಹತ್ವದ ಹೋರಾಟಕ್ಕೆ ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಅವರು ಭೌತಿಕವಾಗಿ ಭಾಗವಹಿಸುವ ಮೂಲಕ ಬೆಂಬಲ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಅವರು, “ಇದು ಕೇವಲ ಒಂದು ಪರೀಕ್ಷೆಯ ಅಕ್ರಮವಲ್ಲ, ದೇಶದ ಯುವ ಪೀಳಿಗೆಯ ಭವಿಷ್ಯಕ್ಕೆ ಮಾಡುತ್ತಿರುವ ದ್ರೋಹ. ಇಂತಹ ಅನ್ಯಾಯಗಳ ವಿರುದ್ಧ ಪ್ರತಿಯೊಬ್ಬ ನಾಗರಿಕನೂ ಧ್ವನಿ ಎತ್ತಬೇಕಿದೆ” ಎಂದು ತಿಳಿಸಿದ್ದಾರೆ. ಈ ಯುವಕರ ಧರಣಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತಿದೆಯೋ ಕಾದುನೋಡಬೇಕಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others