ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ನಡೆದ ಸಂಧಾನದ ಬಳಿಕ, ಸಚಿವ ಕೃಷ್ಣ ಬೈರೇಗೌಡ ಇಂದು ಜಿಬಿಎ ಅಧಿಕಾರಿಗಳ ಸಭೆ ನಡೆಸಿದ್ದರು.
ಮೊದಲ ಸಭೆಯಲ್ಲೇ ಪ್ರಮುಖವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಳ ಚಳಿ ಬಿಡಿಸಿದರು. ಬೆಂಗಳೂರಿನ ರಸ್ತೆ ಮಾಡೋದು ಏನು ರಾಕೆಟ್ ಸೈನ್ಸಾ? ನೆರೆ ರಾಜ್ಯಗಳಲ್ಲಿ ರಸ್ತೆ ಗುಂಡಿಗಳು ಇಲ್ಲದ ರಸ್ತೆಗಳನ್ನು ನೋಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ರಸ್ತೆ ಗುಂಡಿಗಳು ಇಲ್ಲದೇ ರಸ್ತೆ ಮಾಡೋದಕ್ಕೆ ಆಗೋದಿಲ್ವಾ? ಬೆಂಗಳೂರಿನ ರಸ್ತೆ ಮಾಡೋದು ಏನು ರಾಕೆಟ್ ಸೈನ್ಸಾ. ನೆರೆ ರಾಜ್ಯಗಳಲ್ಲಿ ಪಾತ್ ಹೋಲ್ ಇಲ್ಲದ ರಸ್ತೆಗಳನ್ನು ನೋಡಿ. ಸದಾ ಮಳೆ ಬೀಳುವಂತ ರಾಜ್ಯಗಳಲ್ಲೂ ರಸ್ತೆಗಳು ಚೆನ್ನಾಗಿ ಇವೆ. ನಿಮಗೆ ಯಾಕೆ ಉತ್ತಮ ರಸ್ತೆ ಮಾಡೋದಕ್ಕೆ ಆಗುತ್ತಿಲ್ಲ. ನಿಮಗೆ ಏನಾದರೂ ಕಡಿಮೆ ಬಜೆಟ್ ಕೊಟ್ಟಿದ್ದೇವಾ ಎಂದು ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.





