ಕೆಲ ಪಕ್ಷಗಳ ತಂತ್ರದ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ – ಎಂ.ಕೆ ಸ್ಟಾಲಿನ್

M.K. Stalin

ಚೆನ್ನೈ: ಆಡಳಿತಾರೂಢ ಟಿವಿಕೆ ಸ್ವತಂತ್ರವಾಗಿ ಆಡಳಿತ ನಡೆಸಲು ಪೂರ್ಣ ಜನಾದೇಶ ಹೊಂದಿಲ್ಲ. ಅಗತ್ಯ 118 ಬಹುಮತದ ಪೈಕಿ 108 ಸ್ಥಾನಗಳನ್ನ ಮಾತ್ರ ಗಳಿಸಿದೆ ಎಂದು ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್‌ ಹೇಳಿದರು.

ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್‌ ಅವರು, ವಿಜಯ್‌ ಸರ್ಕಾರದ ಪತನದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.

ಈ ಚುನಾವಣೆಯಲ್ಲಿ ಜನ ಡಿಎಂಕೆ ಸರ್ಕಾರ ರಚಿಸಬೇಕೆಂದೇ ಮತ ಚಲಾಯಿಸಿದ್ದರು. ಆದ್ರೆ ನಮ್ಮ ಮೈತ್ರಿಕೂಟದ ಭಾಗವಾಗಿದ್ದ ಕೆಲ ಪಕ್ಷಗಳ ತಂತ್ರ ಹಾಗೂ ಅವರ ಜೊತೆಗಿನ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಸಿಎಂ ಜೋಸೆಫ್‌ ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ 5 ವರ್ಷಗಳ ವರೆಗೆ ಉಳಿಯುವುದಿಲ್ಲ. 3 ರಿಂದ 6 ತಿಂಗಳಲ್ಲಿ ಪತನವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

5 ವರ್ಷಗಳ ಕಾಲ ಕಾಯುವ ಅಗತ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಇದೊಂದು ಅಲುಗಾಡುವ ಸೆಟಪ್, ಈ ವಾಹನ ಯಾವ ಜಂಕ್ಷನ್ ಅಥವಾ ತಿರುವಿನಲ್ಲಿ ತನ್ನ ಸಮತೋಲನ ಕಳೆದುಕೊಂಡು ಹಠಾತ್ ಸ್ಥಗಿತಗೊಳ್ಳುತ್ತೋ ಗೊತ್ತಿಲ್ಲ. ಆದ್ದರಿಂದ ಚುನಾವಣೆಗಳು ಯಾವುದೇ ಸಮಯದಲ್ಲಿ ಬರಬಹುದು ಎಂದರು.

ಮುಂದಿನ 3 ರಿಂದ 6 ತಿಂಗಳ ಒಳಗೆ ಪತನಗೊಳ್ಳಬಹುದು ಎಂದು ಹೇಳಿದ್ದು, ವಿಜಯ್‌ ಅವರ ಸರ್ಕಾರ ಮೈತ್ರಿ ಪಕ್ಷಗಳ ಬೆಂಬಲದಿಂದಷ್ಟೇ ಬದುಕುಳಿದಿದೆ. ಈ ಸರ್ಕಾರ 5 ವರ್ಷ ಪೂರ್ಣಗೊಳ್ಳುವುದಿಲ್ಲ. ವಿಜಯ್ ಅವದ್ದು ಅಲ್ಪಸಂಖ್ಯಾತ ಸರ್ಕಾರವಾಗಿದೆ ಎಂದು ತಿಳಿಸಿದರು.

ಇವರ ಹೇಳಿಕೆಗೆ ಸಿಎಂ ವಿಜಯ್‌ ಏನು ಹೇಳುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post