ಸಿವಿಲ್ ಕಾನ್ ಸ್ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆಗೆ ಜುಲೈ 8ರವರೆಗೆ ಅವಕಾಶ

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ಕಾಲಾವಕಾಶವನ್ನು ಜುಲೈ 8ರ ಸಂಜೆ 4ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ನಂತರ, ಅರ್ಜಿ ತಿದ್ದುಪಡಿಗೆ ಜುಲೈ 10ರಿಂದ 13ರವರೆಗೆ ಸಮಯ ನೀಡಲಾಗುವುದು. ಈ ಮುನ್ನ ಅರ್ಜಿ ಸಲ್ಲಿಸಲು ಜುಲೈ 3ರವರೆಗೆ ಹಾಗೂ ಶುಲ್ಕ ಪಾವತಿಸಲು ಜುಲೈ 4 ಕಡೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others