ಮಳೆಯಬ್ಬರಕ್ಕೆ ರಾಜ್ಯದ ಕೆಲವು ಭಾಗಗಳಲ್ಲಿ ಜಲಾಶಯದ ಒಳಹರಿವು ಹೆಚ್ಚಳ – ಇಲ್ಲಿದೆ ನೋಡಿ ಮಾಹಿತಿ

ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು. ಜಿಲ್ಲೆಗಳಲ್ಲಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಹೌದು ಇತ್ತ ಹಾಸನ ಜಿಲ್ಲೆಯಲ್ಲಿ ವರಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಬಾರಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಇತ್ತ ಪಕ್ಕದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ.

ಹಾಸನ ಜಿಲ್ಲೆಯ, ಬೇಲೂರು, ತಾಲೂಕಿನಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುತ್ತಿದ್ದು, ಮುಂಜಾಗ್ರತೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಲೂರು ತಾಲೂಕಿನ, ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು, ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶಿದ್ದಾರೆ. ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಮಂಗಳವಾರ, ಇಂದು ರಜೆ ನೀಡಿದ್ದರಿಂದ ಶನಿವಾರ ಪೂರ್ತಿ ದಿನ ಶಾಲೆ ನಡೆಸುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ.

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಸದ್ಯ 2898.40 ಅಡಿಗಳಷ್ಟಿರುವ ನೀರಿದೆ. ಕಾವೇರಿಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಹೇಮಾವತಿ ಜಲಾಶಯವೂ ಒಂದಾಗಿದೆ.

ಇನ್ನು ಮಂಡ್ಯದಲ್ಲಿ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ, ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಏರಿಕೆಯಾಗಿದೆ.

. ಜಲಾಶಯದ ಒಟ್ಟು ಸಾಮರ್ಥ್ಯ 49.452 ಟಿಎಂಸಿ ಆಗಿದ್ದು, ಸದ್ಯ 12.485 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಹೆಚ್ಚಾಗುವ ಸಾಧ್ಯತೆಯಿದೆ.

ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಡ್ಯಾಂಗೆ ಸದ್ಯ 7,531 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನಿನ್ನೆ ಬೆಳಗ್ಗೆ ಕೇವಲ 5,734 ಕ್ಯೂಸೆಕ್ ಇದ್ದ ಒಳಹರಿವು, ಈಗ ಸುಧಾರಿಸಿರುವುದು ರೈತರಲ್ಲಿ ಸಂತಸ ತಂದಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post