DK Shivakumar: ಸಂಪುಟ ವಿಸ್ತರಣೆ ಮುಂದೂಡಲು ಇಷ್ಟವಿಲ್ಲ,ಅಂತಿಮ ತೀರ್ಮಾನ ಹೈಕಮಾಂಡ್ ಲೆಕ್ಕಾಚಾರ-ಸಿಎಂ ಡಿಕೆಶಿ

ಬೆಂಗಳೂರು: ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ಒಂದೆರಡು ದಿನ ಮುಂದೂಡಿಕೆಯಾಗಿದ್ದು, ಬುಧವಾರವೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇತ್ತು.

ಆದರೆ ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸುವ ಸಾಧ್ಯತೆ ಇದೆಹೈಕಮಾಂಡ್ ನಾಯಕರ ಲಭ್ಯತೆ ಕೊರತೆಯಿಂದ ಪ್ರಕ್ರಿಯೆ ಮುಂದಕ್ಕೆ ಹೋಗಿದೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಿಂದ ಇಂದು ಬೆಂಗಳೂರಿಗೆ ಮರಳಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಧನದ ಬೆಳವಣಿಗೆಯಿಂದ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ ಎಂದಿದ್ದಾರೆ.

. ಕೆಲವು ಸುತ್ತಿನ ಮಾತುಕತೆಗಳೂ ನಡೆದಿದ್ದವು. ಆದರೆ, ಕೊನೆಯ ಕ್ಷಣದಲ್ಲಿ ಬೆಳವಣಿಗೆಗಳು ಬದಲಾಗಿವೆ. ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಸಭೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ಸಭೆ ನಡೆಸುವ ಯೋಜನೆ ಹೊಂದಿದ್ದರು. ಆದರೆ ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಟ್ ಅಕ್ರಮದ ವಿರುದ್ಧದ ಪ್ರತಿಭಟನೆಗೆ ತೆರಳಿದ್ದರಿಂದ ಹೈಕಮಾಂಡ್‌ನ ಸಂಪೂರ್ಣ ಗಮನ ಆ ಬೆಳವಣಿಗೆಯತ್ತ ಕೇಂದ್ರೀಕೃತವಾಯಿತು ಎಂದರು.

ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಈ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಿ, ನಂತರ ಮತ್ತೊಮ್ಮೆ ದಿನಾಂಕ ನಿಗದಿಪಡಿಸಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಯಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ತಡರಾತ್ರಿವರೆಗೂ ರಾಹುಲ್ ಗಾಂಧಿ ಪೊಲೀಸರ ವಶದಲ್ಲಿದ್ದ ಹಿನ್ನೆಲೆ, ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ನಡೆಯಲಿಲ್ಲ ಎಂದರು.

ಸಂಪುಟ ವಿಸ್ತರಣೆಯನ್ನು ಮುಂದೂಡಲು ಇಷ್ಟವಿಲ್ಲ. ಆದರೂ, ಅಂತಿಮ ತೀರ್ಮಾನವು ಹೈಕಮಾಂಡ್ ಲೆಕ್ಕಾಚಾರದಂತೆ ಆಗಲಿದೆ ಎಂದು ಸಿಎಂ ಡಿಕೆಶಿ ಸ್ಪಷ್ಟಪಡಿಸಿದರು.

. ಸಚಿವ ಸ್ಥಾನಕ್ಕೆ ಅರ್ಹರಾದ ಅನೇಕರು ಇದ್ದು, ಸಾಧ್ಯವಾದಷ್ಟು ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಆಶಯವಿದೆ ಎಂದು ಹೇಳಿದರು.ಸಂಪುಟ ವಿಸ್ತರಣೆ ವೇಳೆ ಹಿರಿಯರು ಮತ್ತು ಕಿರಿಯರಿಗೆ ಸಮಾನ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post