ಮಂಗಳೂರು: ರಾಜ್ಯದ ಕೆಲವು ಭಾಗಗಲ್ಲಿ ಭಾರೀ ಮಳೆಯಾಗಿದ್ದು ಮಳೆಯ ಪರಿಣಾಮಕ್ಕೆ ಜನ ಹೈರಾಣಾಗಿದ್ದಾರೆ. ಇನ್ನು ದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಭೂಕುಸಿತ ಮತ್ತು ಪ್ರವಾಹದ ಭೀತಿಯನ್ನು ಹೆಚ್ಚಿಸಿದೆ.ಹಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.
ಬೆಂಗಳೂರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





