Sonam Wangchuk : 26 ದಿನ ಉಪವಾಸದ ನಂತ್ರ ನನ್ನ ಪ್ರಾಮಾಣಿಕತೆಯನ್ನ ಸಾಬೀತುಪಡಿಸಬೇಕೇ?– ಟೀಕೆಗಳಿಗೆ ತಿರುಗೇಟು ಕೊಟ್ಟ ವಾಂಗ್ಚುಕ್

ನವದೆಹಲಿ: ದೆಹಲಿಯ ಜಂತರ್‌ ಮಂತರ್‌ ಪ್ರತಿಭಟನೆ ಜಗತ್ತನ್ನು ಸೆಳೆದಿದೆ. ಈ ಧರಣಿಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು,ಯುವಕರು,ಮಧ್ಯವಯಸ್ಸಿನವರು,ಕೆಲ ಅಧಿಕಾರಿಗಳು ಭಾಗಿಯಾಗಿದ್ದಾರೆ. ದೇಶದ ಪ್ರತಿಭಾಗದಲ್ಲಿ ಸಿಜೆಪಿಗೆ ಬೆಂಬಲ ಸಿಗುತ್ತಿದೆ. ಆದರೆ ಈ ವಿಚಾರವನ್ನು ನುಂಗಲಾರದೆ ಬಿಜೆಪಿ ಕೆಲ ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಧರಣಿ ಮಾಡುತ್ತಿರುವ ಯುವಕರು ದೇಶದ್ರೋಹಿಗಳು ಎಂದು ಕರೆಯುತ್ತಿದ್ದಾರೆ. ಇತ್ತ ಧರಣಿಯ ಪ್ರಮುಖ ಸ್ಥಾನ ಹೊಂದಿದ ಸೋನಂ ವಾಂಗ್ಚುಕ್ ಅವರ ಬಗ್ಗೆ ಟೀಕೆಗಳ ಸುರಿ ಮಳೆ ಸುರಿಯುತ್ತಲೇ ಇವೆ ಈ ಕಾರಣಕ್ಕೆ ಇವರು ಇದೀಗ ಪ್ರತಿಕ್ರಿಯೆ ಕೊಟ್ಟಿದ್ದಾರೆ.

26 ದಿನಗಳ ಕಾಲ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸಿದ ಬಳಿಕ ಅದನ್ನು ಅಂತ್ಯಗೊಳಿಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕೇಳಿಬಂದ ಟೀಕೆಗಳಿಗೆ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ತೀಕ್ಷ್ಣವಾಗಿ ಉತ್ತರ ನೀಡಿದ್ದಾರೆ.

ʻ26 ದಿನಗಳ ಉಪವಾಸದ ಬಳಿಕವೂ ನನ್ನ ಪ್ರಾಮಾಣಿಕತೆಯನ್ನ ಸಾಬೀತುಪಡಿಸಬೇಕೇ?ʼ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ತಮ್ಮ 22 ನಿಮಿಷಗಳ ಸಂಪೂರ್ಣ ವಿಡಿಯೊವನ್ನು ವೀಕ್ಷಿಸಿ ನಂತರವೇ ಅಭಿಪ್ರಾಯ ರೂಪಿಸಬೇಕೆಂದು ಜನರಿಗೆ ಮನವಿ ಮಾಡಿದ್ದಾರೆ. ತಮ್ಮ ಸಂದೇಶವನ್ನು ಹೆಚ್ಚು ಜನರಿಗೆ ತಲುಪಿಸುವಂತೆ ಸಹ ಬೇಡಿಕೆ ಇಟ್ಟಿದ್ದಾರೆ.

ತಮ್ಮ ಪ್ರಮುಖ ಬೇಡಿಕೆಗಳಲ್ಲಿ ಹಲವು ವಿಷಯಗಳಿಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಭರವಸೆ ದೊರೆತ ಹಿನ್ನೆಲೆಯಲ್ಲಿ ಉಪವಾಸವನ್ನು ಕೊನೆಗೊಳಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.ಯಾರ ಹೆಸರನ್ನೂ ಉಲ್ಲೇಖಿಸದೆ ಮಾತನಾಡಿದ ವಾಂಗ್ಚುಕ್, ಕೇಂದ್ರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ತಾವು 26 ದಿನಗಳ ಕಾಲ ಮಾಡಿದ ವೈಯಕ್ತಿಕ ತ್ಯಾಗವನ್ನು ಕಡೆಗಣಿಸುತ್ತಿವೆ.

ಈ ನಡುವೆ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಕೂಡ ಸಾರ್ವಜನಿಕರಿಗೆ ಭಾವನಾತ್ಮಕ ಮನವಿ ಮಾಡಿದ್ದು, ವಾಂಗ್ಚುಕ್ ಅವರ ನಿರ್ಧಾರವನ್ನು ತಕ್ಷಣವೇ ಟೀಕಿಸಬೇಡಿ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ವಾಂಗ್ಚುಕ್, ಕೇಂದ್ರ ಸರ್ಕಾರದೊಂದಿಗೆ ಯಾವುದೇ `ಒಪ್ಪಂದ’ ಮಾಡಿಕೊಂಡು ಉಪವಾಸ ಕೈಬಿಟ್ಟಿಲ್ಲ ಎಂದು ಸೋನಂ ಸ್ಪಷ್ಟಪಡಿಸಿದ್ದಾರೆ. ತಮ್ಮ ಉಪವಾಸ ಅಂತ್ಯವನ್ನು ರಾಜಕೀಯ ಊಹಾಪೋಹಗಳ ಮೂಲಕ ಅರ್ಥೈಸಬಾರದು ಎಂದರಲ್ಲದೇ, ಸರ್ಕಾರದೊಂದಿಗೆ ಡೀಲ್‌ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ನನಗೆ ನಿರಾಸೆ ಉಂಟು ಮಾಡಿವೆ ಎಂದು ತಿಳಿಸಿದ್ದಾರೆ.

26 ದಿನಗಳ ಕಾಲ ದೊಡ್ಡ ಉದ್ದೇಶಕ್ಕಾಗಿ ಉಪವಾಸ ಮಾಡಿದ ವ್ಯಕ್ತಿಯನ್ನು ಟೀಕಿಸುವ ಮೊದಲು, ಅಷ್ಟೊಂದು ತ್ಯಾಗ ಮಾಡುವ ಧೈರ್ಯ ನಿಮ್ಮಲ್ಲಿದೆಯೇ ಎಂಬುದನ್ನು ಯೋಚಿಸಿ ಎಂದು ಅವರು ಬರೆದಿದ್ದಾರೆ.ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಹೀತಾಂಜಲಿ, 26 ದಿನಗಳ ಉಪವಾಸದ ಪರಿಣಾಮ ವಾಂಗ್ಚುಕ್ 11 ಕೆಜಿ ತೂಕ ಕಳೆದುಕೊಂಡಿದ್ದು, ಸ್ನಾಯುಗಳೂ ಕ್ಷೀಣಿಸಿವೆ ಎಂದು ತಿಳಿಸಿದ್ದಾರೆ. ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.

ವಾಂಕ್ಚುಕ್‌ ಅವರು ಇಂದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನಿಷ್ಠ ಒಂದು ದಿನವಾದರೂ ಅವರಿಗೆ ಕರುಣೆ ತೋರಿಸಿ. ನಮ್ಮ ನಿರೀಕ್ಷೆಗಳು ಮತ್ತು ರಾಜಕೀಯ ಲೆಕ್ಕಾಚಾರಗಳನ್ನು ಅವರ ಮೇಲೆ ಹೊರಿಸಬೇಡಿ ಎಂದು ತಿಳಿಸಿದ್ದಾರೆ.

Share it :

One Response

Leave a Reply

Your email address will not be published. Required fields are marked *

Get free tips and resources right in your inbox, along with 10,000+ others