ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರು ಇದರ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದರ ನಂತರ ಇದೀಗ ಸಚಿವ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಪ್ರಧಾನಿ ಮೋದಿ ಅವರು ನನ್ನ ಮೇಲೆ ನಂಬಿಕೆ ಇಟ್ಟಿದ್ದು, ನಾನು ಜವಾಬ್ದಾರಿಯುತವಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡ ನಂತರ ಮಾತನಾಡಿದ ಅವರು, ಈ ಇಲಾಖೆಯಲ್ಲಿ ನಮ್ರತೆ ಮತ್ತು ಪ್ರಾಮಾಣಿಕತೆಯಿಂದ ನಾನು ಈ ಜವಾಬ್ದಾರಿಯನ್ನು ಪೂರೈಸುವ ಕೆಲಸ ಮಾಡುತ್ತೇನೆ. ಮೋದಿ ಅವರ ನಿರೀಕ್ಷೆಗಳನ್ನು ಪೂರೈಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ಸಂಪೂರ್ಣ ಸಮರ್ಪಣೆ, ಈ ಅವಕಾಶ ನೀಡಿದ್ದಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದು ಮೋದಿಯನ್ನು ನೆನೆಸಿಕೊಂಡರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. 37 ದಿನಗಳ ಪ್ರತಿಭಟನೆಗೆ ಮಣಿದ ಪ್ರಧಾನ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಕೆಂದ್ರ ಶಿಕ್ಷಣ ಸಚಿವರಾಗಿ ಜೋಶಿ ನೇಮಕಗೊಂಡಿದ್ದಾರೆ.
ನಮ್ರತೆ ಮತ್ತು ಜವಾಬ್ದಾರಿಯಿಂದ ನಾನು ಈ ಕರ್ತವ್ಯವನ್ನು ಪೂರೈಸುತ್ತೇನೆ ಪ್ರಧಾನಿಯವರು ನನ್ನ ಮೇಲೆ ನಂಬಿಕೆ ಇಟ್ಟು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ.ಎಂದು ಅವರು ಹೇಳಿದ್ದಾರೆ.
ಈ ಮಹತ್ವದ ಜವಾಬ್ದಾರಿಯನ್ನು ನನಗೆ ನೀಡಿದ್ದಕ್ಕಾಗಿ ಮತ್ತು ನನ್ನ ಮೇಲೆ ಅಪಾರ ವಿಶ್ವಾಸವನ್ನು ತೋರಿಸಿದ್ದಕ್ಕಾಗಿ ನಾನು ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತೇನೆ. ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಪ್ರಾಮಾಣಿಕತೆ ಬಗ್ಗೆ ಮಾತನಾಡಿದರು.





