ಸಿನಿ ಪ್ರೀಯರಿಗೆ ರಾಜ್ ಬಿ ಶೆಟ್ಟಿ ಸಿಹಿ ಸುದ್ದಿ ಕೊಡುತ್ತಲೇ ಇರುತ್ತಾರೆ ಮತ್ತು ಅವರ ಚಿತ್ರಕ್ಕೆ ಅಭಿಮಾನಿಗಳ ಸಂಖ್ಯೆಯೂ ಸಾಗರದಷ್ಟಿದೆ. ಹೀಗಿರುವಾಗ ಕರಾವಳಿ ಚಿತ್ರದ ಮೂಲಕ ಮತ್ತೆ ಎಂಟ್ರಿಯಾಗಿದ್ದಾರೆ.
ಕಂಬಳದ ಕಥೆ ಹೊಂದಿರುವ ‘ಕರಾವಳಿ’ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ನಟನೆ ಮಾಡಿದ್ದಾರೆ, ಇತ್ತೀಚೆಗೆ ಬಿಡುಗಡೆ ಆಗಿರುವ ಈ ಸಿನಿಮಾಗೆ ಜನರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.. ಗುರುದತ್ ಗಾಣಿಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕರಾವಳಿ ಭಾಗದ ಕಥೆಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.
ವೀಕೆಂಡ್ನಲ್ಲಿ ಹಲವು ಕಡೆಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಹಲವು ಚಿತ್ರಮಂದಿರಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದೆ. ರಾಜ್ ಬಿ. ಶೆಟ್ಟಿ ಅವರು ಹೋದಲ್ಲೆಲ್ಲ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. 2ನೇ ದಿನ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ತಿಳಿಸಲು ‘ಕರಾವಳಿ’ ಚಿತ್ರತಂಡ ಸಂತಸವನ್ನು ವ್ಯಕ್ತಪಡಿಸಿದೆ. ಸಿನಿಮಾ ಹೇಗಿದೆ ಎಂಬ ವಿಮರ್ಶೆಯನ್ನು ಅಭಿಮಾನಿಗಳು ಹಂಚಿಕೊಂಡಿದ್ದಾರೆ.
ಈ ಸಿನಿಮಾ ಬಿಡುಗಡೆಗೂ ಮುನ್ನ ನಟ ಪ್ರಜ್ವಲ್ ದೇವರಾಜ್ ವಿಷಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿಕೊಂಡಿತ್ತು. ಟ್ರೈಲರ್ ಲಾಂಚ್ ವೇಳೆ ಪ್ರಜ್ವಲ್ ದೇವರಾಜ್ ಗೈರುಹಾಜರಿ, ಸಂಭಾವನೆ ಬಾಕಿ ಹಾಗೂ ಅವರ ಧ್ವನಿಗೆ ಬೇರೆ ಕಲಾವಿದರಿಂದ ಡಬ್ಬಿಂಗ್ ಮಾಡಿಸಿದ ವಿಚಾರವಾಗಿ ಅಭಿಮಾನಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು.
ಸದ್ಯ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಹಾಗೂ ರಮೇಶ್ ಇಂದಿರ ಸೇರಿದಂತೆ ಪ್ರಮುಖ ತಾರಾಗಣದ ಅದ್ಭುತ ನಟನೆ ಮತ್ತು ಗುರುದತ್ ಗಾಣಿಗ ಅವರ ನಿರ್ದೇಶನವು ವಿವಾದಗಳನ್ನೆಲ್ಲ ಬದಿಗೊತ್ತಿ ಚಿತ್ರವನ್ನು ಯಶಸ್ಸಿನತ್ತ ಮುನ್ನಡೆಸುವಂತೆ ಇದೆ.
ಬಿಡುಗಡೆಯಾದ ಮೊದಲ ದಿನ ಕೇವಲ 68 ಲಕ್ಷ ರೂಪಾಯಿ ಗಳಿಸಿದ್ದ ಈ ಚಿತ್ರ, ಆ ಬಳಿಕ ಪ್ರೇಕ್ಷಕರಿಂದ ಸಿಕ್ಕ ಪಾಸಿಟಿವ್ ವಿಮರ್ಶೆಗಳ ಬೆಂಬಲದೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸುತ್ತಿದೆ. ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ಕರಾವಳಿ’ ಬಾಕ್ಸ್ ಆಫೀಸ್ನಲ್ಲಿ ಮೊದಲ ದಿನ ಸಾಧಾರಣ ಕಲೆಕ್ಷನ್ ಮಾಡಿತ್ತು.
ಆದರೆ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ.ಸದ್ಯ ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾದ ಒಟ್ಟಾರೆ ಗಳಿಕೆ ಹೆಚ್ಚುತ್ತಿದೆ. ಸಿನಿಮಾದ ಒಟ್ಟೂ ಗಳಿಕೆ ನಾಲ್ಕು ಕೋಟಿ ರೂಪಾಯಿ ಸಮೀಪಕ್ಕೆ ಬಂದು ತಲುಪಿದೆ ಎನ್ನಲಾಗಿದೆ.
ಚಿತ್ರದ ದಿನಾವಾರು ಕಲೆಕ್ಷನ್ ನೋಡುವುದಾದರೆ, ಮೊದಲ ದಿನ 0.68 ಕೋಟಿ ರೂಪಾಯಿ ಗಳಿಸಿದ್ದ ಸಿನಿಮಾ, ಎರಡನೇ ದಿನ ಅಂದರೆ ಶನಿವಾರದಂದು 1.14 ಕೋಟಿ ರೂಪಾಯಿ ಬಾಚಿಕೊಂಡಿತು. ಇನ್ನು ಮೂರನೇ ದಿನ ಭಾನುವಾರದ ವೀಕೆಂಡ್ ಲಾಭ ಸಂಪೂರ್ಣವಾಗಿ ಪಡೆದುಕೊಂಡ ಚಿತ್ರ 1.64 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಗಿದೆ.
ಈ ಮೂಲಕ ಚಿತ್ರದ ಭಾರತದ ನೆಟ್ ಕಲೆಕ್ಷನ್ 3.46 ಕೋಟಿ ರೂಪಾಯಿಗೆ ತಲುಪಿದೆ. ಇಂಡಿಯಾ ಗ್ರಾಸ್ ಕಲೆಕ್ಷನ್ ಬರೋಬ್ಬರಿ 3.88 ಕೋಟಿ ರೂಪಾಯಿ ದಾಟಿದೆ ಎಂದು ಸ್ಯಾಸ್ನಿಲ್ಕ್ ವರದಿ ಮಾಡಿದೆ. ಇತ್ತ ಅಭಿಮಾನಿಗಳು ಸಹ ರಾಜ್ ಬಿ. ಶೆಟ್ಟಿಯವರು ಇನ್ನಷ್ಟು ಸಿನೆಮಾ ಮಾಡಿಲಿ, ಅವರು ಉನ್ನತ ಮಟ್ಟದಲ್ಲಿ ಬೆಳಯಲಿ ಎಂದು ಶುಭ ಹಾರೈಸಿದ್ದಾರೆ.





