ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತ್ವರಿತ ನ್ಯಾಯಾಲಯಗಳ ಸ್ಥಾಪನೆಯೂ ಮಹತ್ವದ ಹೆಜ್ಜೆಯಾಗಿದ್ದು, ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗೆ ಇದು ನೆರವಾಗಲಿದೆ ಎಂದುಕೇಂದ್ರ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ಅನ್ನು ಲೋಕಸಭೆ ಅಂಗೀಕರಿಸಿದ್ದು, ಇದು ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನ ಮಹತ್ವದ ಹೆಜ್ಜೆಯಾಗಿದೆ ಎಂದು
ತಿಳಿಸಿದ್ದಾರೆ.
ಈ ಮಸೂದೆಯಿಂದ ದೇಶದಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆ ಮತ್ತಷ್ಟು ಬಲಗೊಳ್ಳಲಿದೆ.ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ತಿದ್ದುಪಡಿ ಮಸೂದೆ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಚೌಕಟ್ಟನ್ನು ಒದಗಿಸಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಶಿಕ್ಷೆಯ ನಿಯಮಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ
ಇವರ ನಿರ್ಧಾರ ದೇಶದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಿದೆ.





