C T Ravi: ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಗೊಂದಲ ವಿಚಾರ- ಪ್ರಿಯಾಂಕ್‌ ರಾಜೀನಾಮೆಗೆ ಸಿ.ಟಿ ರವಿ ಪಟ್ಟು

ಬೆಂಗಳೂರು: ಮೊನ್ನೆಯಷ್ಟೇ ದೆಹಲಿಯಲ್ಲಿ ನೀಟ್‌ ಪರೀಕ್ಷೆಯಲ್ಲಿ ಆದಂತಹ ಎಡವಟ್ಟಿಗೆ ವಿದ್ಯಾರ್ಥಿಗಳು ಧರಣಿ ಮಾಡಿ, ಪ್ರತಿಭಟನೆಯಲ್ಲಿ ಸಾಧನೆಯನ್ನು ಕಂಡರು. ಇದರ ನಂತರ ನಮ್ಮ ರಾಜ್ಯದಲ್ಲಿ ಒಂದಲ್ಲಾ ಒಂದು ವಿಚಾರಕ್ಕೆ ಸಮಸ್ಯೆ ಎದುರಾಗುತ್ತಲೇ ಇರುತ್ತದೆ.

ಇತ್ತೀಚಿಗೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ (X)ನಲ್ಲಿ ಪೋಸ್ಟ್ ಮಾಡಿರುವ ಅವರು, OMR ಶೀಟ್ ಗೊಂದಲ ಮತ್ತು ಅಸಮರ್ಥ ವ್ಯವಸ್ಥೆಯಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ, ಇದರಿಂದ ರಾಜ್ಯದ ಮಕ್ಕಳಿಗೆ ಕಷ್ಟ ಆಗಿದೆ ಈ ಕಾರಣಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು, ಇದಕ್ಕೆ ಇವರೇ ಕಾರಣ ಎಂದು ಆರೋಪಿಸಿದ್ದಾರೆ.

ಗೊಂದಲ ಉಂಟಾದ ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಯಾವುದೇ ವಿಳಂಬ ಮಾಡದೆ ಮರು ಪರೀಕ್ಷೆ ನಡೆಸಬೇಕು. ಜೊತೆಗೆ, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮತ್ತು ತಪ್ಪು ಮಾಡಿದವರು ಯಾರೇ ಆಗಿರಲಿ ಅವರಿಗೆ ಸರೆ ಮನೆಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳು ರಾಜ್ಯದ ಯುವಕರಿಗೆ ನ್ಯಾಯ ಒದಗಿಸಬೇಕು. ಈ ಗೊಂದಲಕ್ಕೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು. ಬೇರೆ ರಾಜ್ಯದಲ್ಲಿ ಸಮಸ್ಯೆಯಾದರೆ ಬೇಗ ಹೋಗುತ್ತಿರಾ? ನಮ್ಮ ರಾಜ್ಯದಲ್ಲಿ ಈಗ ಸಮಸ್ಯೆಗೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಭ್ಯರ್ಥಿಗಳು ನಡೆಸಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನೀಡಿರುವ ಇನ್ನೊಂದು ಸರ್ಟಿಫಿಕೇಟ್. ರಾಜ್ಯದ ಗೃಹ ಸಚಿವರು ಬೇರೆಯವರಿಗೆ ಸರ್ಟಿಫಿಕೇಟ್ ಕೊಡುತ್ತಾ, ತನ್ನ ಇಲಾಖೆಯ ಕೆಲಸವನ್ನು ಕಡೆಗಣಿಸಿದ್ದರಿಂದ ಇಂತಹ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇವರ ಹೇಳಿಕೆ ಕೈ ಸರ್ಕಾರ ಏನು ಹೇಳುತ್ತದೆ ಎಂದು ಕಾದುನೋಡಬೇಕಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others