ಬೆಂಗಳೂರು: ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ತೆರೆ ಬಿದ್ದಿದ್ದು, 20 ಮಂದಿ ಶಾಸಕರಿಗೆ ಈ ಬಾರಿ ಮಂತ್ರಿ ಪಟ್ಟ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಅಂತಿಮ ಸಭೆ ನಡೆಸಿ ಪಟ್ಟಿಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಸ್ಫಿಕರ್ ಸ್ಥಾನಕ್ಕೆ ಟಿ.ಬಿ.ಜಯಚಂದ್ರ ಹೆಸರು ಅಂತಿಮಗೊಂಡಿದ್ದು, ಸ್ಪೀಕರ್ ರೇಸ್‌ನಲ್ಲಿ ಆರ್‌ವಿ ದೇಶಪಾಂಡೆ, ದಿನೇಶ್ ಗುಂಡೂರಾವ್ ಹೆಸರು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಹೈಕಮಾಂಡ್ ನಾಯಕರು ಟಿ.ಬಿ.ಜಯಚಂದ್ರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎನ್ನು ಮಾಹಿತಿ ತಿಳಿದು ಬಂದಿದೆ.
ಕಾಂಗ್ರೆಸ್ ಹೈಕಮಾಂಡ್‌ನ ನಾಯಕರು ರಾಜ್ಯಕ್ಕೆ ಆಗಮಿಸಿ ಪಟ್ಟಿಯನ್ನು ನೀಡುತ್ತಾರೆಯೇ ಅಥವಾ ದೆಹಲಿಯಿಂದಲೇ ಅಂತಿಮ ಪಟ್ಟಿ ಕಳುಹಿಸಲಾಗುತ್ತದೆಯೇ ಎಂಬುದೂ ಕುತೂಹಲಕ್ಕೆ ಕಾರಣವಾಗಿದೆ.
ಆದರೆ,ರಾಜಭವನಕ್ಕೆ ಲಿಖಿತ ಮಾಹಿತಿ ಇಲ್ಲ ಸಚಿವರ ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಯಿಂದ ರಾಜಭವನಕ್ಕೆ ಮೌಖಿಕ ಮಾಹಿತಿ ನೀಡಲಾಗಿದೆ. ಆದರೆ, ಇದುವರೆಗೆ ಲಿಖಿತವಾಗಿ ಯಾವುದೇ ಅಧಿಕೃತ ಸೂಚನೆ ಅಥವಾ ದಿನಾಂಕ ರವಾನೆಯಾಗಿಲ್ಲ ಎನ್ನಲಾಗಿದೆ. ಹೀಗಾಗಿ ಪ್ರಮಾಣವಚನ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆಯೂ ಇನ್ನೂ ಸ್ಪಷ್ಟತೆ ಮೂಡಿಲ್ಲ.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನ ಹಂಚಿಕೆ ಮಾಡುವಾಗ ಸಮುದಾಯ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮಾನತೆಗೆ ಆದ್ಯತೆ ನೀಡಲಾಗುತ್ತಿದೆ ಎನ್ನಲಾಗಿದೆ. ಕೆಲ ಸಂಭಾವ್ಯ ಹೆಸರುಗಳ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ಅಂತಿಮ ಒಮ್ಮತ ಮೂಡಿಲ್ಲ ಎನ್ನಲಾಗಿದ್ದು, ಕೊನೆಯ ಕ್ಷಣದಲ್ಲಿ ಅಚ್ಚರಿಯ ಹೆಸರುಗಳು ಪಟ್ಟಿಗೆ ಸೇರುವ ಸಾಧ್ಯತೆಯೂ ಇದೆ.
ಇಂದು ಅಂತಿಮ ಪಟ್ಟಿ ಪ್ರಕಟವಾಗದಿದ್ದರೆ ಸಚಿವ ಸಂಪುಟ ವಿಸ್ತರಣೆ ಮತ್ತೆರಡು ದಿನ ವಿಳಂಬವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
10 ಸಂಭಾವ್ಯ ಸಚಿವರ ಹೆಸರು ಚರ್ಚೆಯಲ್ಲಿ ಇದೆ ಎನ್ನಲಾಗಿದೆ. ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗುತ್ತಿರುವ ಸಂಭಾವ್ಯ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ್, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ರುದ್ರಪ್ಪ ಲಮಾಣಿ, ಎ.ಎಸ್. ಪೊನ್ನಣ್ಣ, ಟಿ. ರಘುಮೂರ್ತಿ, ಅನ್ನಪೂರ್ಣ ತುಕಾರಾಂ, ಕೆ.ಎಸ್. ಬಸವಂತಪ್ಪ ಹಾಗೂ ಶರತ್ ಬಚ್ಚೇಗೌಡ ಅವರ ಹೆಸರುಗಳು ಕೇಳಿಬರುತ್ತಿವೆ. ಇವರಲ್ಲಿ ಕೆಲವರು ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದವರಾಗಿದ್ದು, ಮತ್ತೆ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
.ಒಟ್ಟಿನಲ್ಲಿ, ಹೈಕಮಾಂಡ್‌ನ ಅಂತಿಮ ಪಟ್ಟಿಯತ್ತ ರಾಜ್ಯ ರಾಜಕಾರಣದ ಚಿತ್ತ ನೆಟ್ಟಿದ್ದು, ಪಟ್ಟಿ ರವಾನೆಯಾದ ಬಳಿಕವಷ್ಟೇ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಅಧಿಕೃತವಾಗಿ ಸ್ಪಷ್ಟವಾಗಲಿದೆ.
ಒಟ್ಟಿನಲ್ಲಿ ಚಲುವರಾಯಸ್ವಾಮಿ, ಬಾಲಕೃಷ್ಣ, ರುದ್ರಪ್ಪ ಲಮಾಣಿ, ಎ.ಎಸ್.ಪೊನ್ನಣ್ಣ, ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ನರೇಂದ್ರ ಸ್ವಾಮಿ, ಶಿವರಾಜ್ ತಂಗಡಗಿ, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ್, ಗಾಯತ್ರಿ ಶಾಂತೇಗೌಡ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಬಿ.ನಾಗೇಂದ್ರ, ಅಜಯ್ ಸಿಂಗ್, ಮಂಕಾಳ ವೈದ್ಯ, ಪುಟ್ಟರಂಗ ಶೆಟ್ಟಿ. ಪಟ್ಟಿಯಲ್ಲಿ ಇದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.





