ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕು- ಮಲೆನಾಡು ಜಿಲ್ಲೆಗಳಿಗೆ ಹಳದಿ ಅಲರ್ಟ್

ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಮಳೆ ಕೆಲವು ಭಾಗಗಳಲ್ಲಿ ನಿಲ್ಲದಂತೆ ಆಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಬೆಳಕಿಗೆ ಬಂದಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಯೂ ಸಹ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.

ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘುವಾದ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಈ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಪ್ರಯಾಣಿಸುವವರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕಾಗಿ ವಿನಂತಿ ಎಂದು ಹವಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.

ಇದೇ ವೇಳೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others