ಬೆಂಗಳೂರು: ನಾನು ಹೆಚ್ಚು ಓದಿಲ್ಲ, ಆದರೆ ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ, ಶಾಸಕ, ಮಂತ್ರಿ, ಉಪಮುಖ್ಯಮಂತ್ರಿಯಾಗಿ ಅನುಭವ ಇದೆ. ನೀವು ಶ್ರಮಜೀವಿ, ಸರ್ಕಾರದ ನಾಡಿ ಮಿಡಿತ ಇಟ್ಟುಕೊಂಡು, ಜನ ಮತ್ತು ಸರ್ಕಾರದ ಸೇತುವೆಯಾಗಿದ್ದೀರಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಾತನಾಡಿದ ಅವರು, ನಾವು ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ ಎಂದು ಕರೆ ಕೊಟ್ಟರು. ಅಂಬೇಡ್ಕರ್ ಅವರು ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂದು ಹೇಳಿದ್ದಾರೆ. ನೀವು ಸಾಕಷ್ಟು ವಿದ್ಯೆ, ಅನುಭವ ಹೊಂದಿದ್ದೀರಿ.
ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ
ಕೆಂಗಲ್ ಹನುಮಂತಯ್ಯ ಅವರು ಜೈಲಿನ ಖೈದಿಗಳಿಂದ ವಿಧಾನಸೌಧ ಕಟ್ಟಿಸಿದರು. ಆಗ ಕೆಲವು ಖೈದಿಗಳು ಹನುಮಂತಯ್ಯ ಅವರ ಮೇಲೆ ಚಪ್ಪಲಿ ಎಸೆದಿದ್ದರು. ವಿಶ್ವೇಶ್ವರಯ್ಯ ಅವರು 1 ರೂ.ಗೆ ಕೆಲಸ ಮಾಡುತ್ತಿದ್ದರು ಎಂಬ ಇತಿಹಾಸ ಇದೆ. ನಾನು ಈ ಹಿಂದಿನವರ ಕೆಲಸಗಳನ್ನು ಟೀಕೆ ಮಾಡುವುದಿಲ್ಲ. ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ ಎಂದರು.
ನಮ್ಮನ್ನು ಸೇರಿದಂತೆ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು 5.50 ಲಕ್ಷ ಸರ್ಕಾರಿ ನೌಕರರಿಗೆ ಮಾತ್ರ. ನಾವು ನಮಗೆ ಸಿಕ್ಕ ಅವಕಾಶ ಬಳಸಿಕೊಳ್ಳಬೇಕು. ಕೆಂಗಲ್ ಹನುಮಂತಯ್ಯ ಅವರ ಕಾಲದಿಂದ ಇಲ್ಲಿಯವರೆಗೆ ಎಲ್ಲ ಸಿಎಂಗಳು ತಮ್ಮದೇ ರೀತಿಯಲ್ಲಿ, ತಮ್ಮದೇ ಅನುಭವ ಸಿದ್ಧಾಂತದ ಮೇಲೆ ಆಡಳಿತ ಮಾಡಿದ್ದಾರೆ ಎಂದರು.
ಇನ್ನು ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುವ ವಿಚಾರ ಮಾತನಾಡಿ,ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಹೇಳಿದ್ದೇವೆ. ಬೆಳೆಗೂ ತೊಂದರೆ ಆಗಬಾರದು. ಕಾವೇರಿ ಮಾತ್ರವಲ್ಲ ಎಲ್ಲಾ ಡ್ಯಾಂ ನೀರು ಗಮನದಲ್ಲಿಟ್ಟುಕೊಂಡು ಬೆಳೆ ಬಗ್ಗೆ ತೀರ್ಮಾನ ಮಾಡಿ ಅಂತ ಹೇಳಿದ್ದೇವೆ ಎಂದು ತಿಳಿಸಿದರು.
ನಾನು ಪಾರದರ್ಶಕವಾಗಿ ಇದ್ದೇನೆ. ಮಾಧ್ಯಮಗಳಲ್ಲಿ ನೀವು ತೋರುಸ್ತೀರಾ ಅಂತ ಮಾಡೋರು ಯಾರು ಹೋಗೊಲ್ಲ. ನೀರು ಹಿಡಿದಿಟ್ಟುಕೊಳ್ಳಲು ಆಗೊಲ್ಲ. ತಾಳ್ಮೆಯಿಂದ ಇರಿ. ನಿಮಗೋಸ್ಕರವೇ ನಾವು ಇರೋದು. ಜನ ಅಧಿಕಾರ ಕೊಟ್ಟಿರೋದು ರೈತರನ್ನು ಬದುಕಿಸಲು. ಯಾವ ರೈತರಿಗೆ ತೊಂದರೆ ಮಾಡೋ ಇಷ್ಟ ಇಲ್ಲ. ತಾಳ್ಮೆಯಿಂದ ಇರಿ. ಸೌಹಾರ್ದಯಿಂದ ಇರಿ. ಪ್ರಕೃತಿ ನಮ್ಮನ್ನ ಬದುಕಿಸುತ್ತದೆ ಎಂದು ಮನವಿ ಮಾಡಿದರು
ರೈತರನ್ನು ಕಾಪಾಡಬೇಕು. ಕೋರ್ಟ್ ಆದೇಶ ಕೂಡಾ ಪಾಲನೆ ಮಾಡಬೇಕು. ಇವೆರಡನ್ನು ಗಮನದಲ್ಲಿಟ್ಟುಕೊಂಡು ನಮ್ಮ ನೀರಾವರಿ ಸಚಿವರು ಮಾತಾಡ್ತೀವಿ ಎಂದರು12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶ ಬಗ್ಗೆ ಗಮನಕ್ಕೆ ಬಂದಿದೆ. ನಮ್ಮ ಒಳಹರಿವು ಎಷ್ಟಿದೆ ಅಂತ ನೋಡ್ತಾ ಇದ್ದೀನಿ. ನಮ್ಮ ಪರಿಸ್ಥಿತಿ ನೋಡಿಕೊಂಡು ನಮ್ಮ ರೈತರನ್ನ ಕಾಪಾಡೋ ಕರ್ತವ್ಯ ಇದೆ ಎಂದರು.





