ಕೆಸೆಟ್-2026: ಅರ್ಜಿ ಸಲ್ಲಿಕೆ ಆರಂಭ, ಅಕ್ಟೋಬರ್ 11ಕ್ಕೆ ಲಿಖಿತ ಪರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ ‌ 11ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಕೆಸೆಟ್ ಪರೀಕ್ಷೆಯನ್ನು ಒಟ್ಟು 37‌ ವಿಷಯಗಳಿಗೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬೇಕು. ಸೆ.6ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದಕ್ಕಿಂತ ಹೆಚ್ಚು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು, ಯಾವುದಾದರು ಒಂದು ವಿಷಯದಲ್ಲಿ ಮಾತ್ರ ಕೆಸೆಟ್ ಪರೀಕ್ಷೆ ತೆಗೆದುಕೊಳ್ಳಬಹುದು. ಒಮ್ಮೆ ವಿಷಯ ಆಯ್ಕೆ ಮಾಡಿದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಬಹುದು ಎಂದು ಅವರು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others