K.J. George – ಮಲೆನಾಡು ಪ್ರವಾಸೋದ್ಯಮ ಸಾಮರ್ಥ್ಯ ಸಮಗ್ರವಾಗಿ ಅಭಿವೃದ್ಧಿ : ಕೆ.ಜೆ. ಜಾರ್ಜ್‌

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಕರ್ನಾಟಕದ ಪ್ರವಾಸೋದ್ಯಮದ ಪ್ರಮುಖ ಆಸ್ತಿಗಳಾಗಿವೆ. ಇಲ್ಲಿನ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸ್ಥಳೀಯ ಅಗತ್ಯತೆಗಳು ಮತ್ತು ಜನಪ್ರತಿನಿಧಿಗಳ ಸಲಹೆಗಳನ್ನು ಒಳಗೊಂಡ ಸಮಗ್ರ ನೀತಿ ಅಗತ್ಯವಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಅವರು ಸಭೆ ನಡೆಸಿದರು. ಸಭೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದಾಗುವವರಿಗೆ ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅಗತ್ಯವನ್ನು ಜನಪ್ರತಿನಿಧಿಗಳು ಪ್ರಸ್ತಾಪಿಸಿದರು.

ಮುಂದಿನ ಹಂತದಲ್ಲಿ ಕರಡು ನೀತಿಯ ಕುರಿತು ಮತ್ತಷ್ಟು ಸಮಾಲೋಚನೆ ನಡೆಸಿ ಅಂತಿಮ ರೂಪ ನೀಡಲಾಗುವುದು. ಮಂಗಳೂರಿನಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ನೀತಿಗೆ ಸಂಬಂಧಿಸಿದ ಅಂತಿಮ ನಿರ್ಧಾರ ಕೈಗೊಳ್ಳುವ ಕುರಿತು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು

ಇಂದು ನಡೆದ ಸಭೆಯಲ್ಲಿ ಹಲವು ಪ್ರಮುಖ ಸಲಹೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ನೀತಿಯಲ್ಲಿ ಅಳವಡಿಸಲಾಗುವುದು. ಸೆಪ್ಟೆಂಬರ್‌ 7ರೊಳಗೆ ಕರಡು ನೀತಿಯನ್ನು ಸಿದ್ಧಪಡಿಸುವ ಗುರಿ ಹೊಂದಿದ್ದೇವೆ,” ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ವ್ಯಕ್ತವಾದ ಸಲಹೆಗಳನ್ನು ಪರಿಗಣಿಸಿ ಕರಡು ನೀತಿಯನ್ನು ಸಿದ್ಧಪಡಿಸಲಾಗುವುದು ಎಂದು ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಇನ್ನು ಇದೆ ಸಭೆಯಲ್ಲಿ ಶಾಸಕ ವಿ.ಸುನಿಲ್‌ ಕುಮಾರ್‌ ಅವರು ಕರಾವಳಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ ನೀಡಲು ಸಿಂಗಲ್‌ ವಿಂಡೋ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು. ವಿವಿಧ ಅನುಮತಿಗಳು ಮತ್ತು ಇಲಾಖೆಗಳ ಸಮನ್ವಯಕ್ಕೆ ಸರಳ ವ್ಯವಸ್ಥೆ ರೂಪಿಸುವುದು ಹೊಸ ಹೂಡಿಕೆಗಳನ್ನು ಆಕರ್ಷಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕಡಲತೀರ, ಧಾರ್ಮಿಕ ಹಾಗೂ ಸಾಂಸ್ಕೃತಿಕ ತಾಣಗಳು, ಪ್ರಕೃತಿ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿವೆ. ಈ ಸಾಮರ್ಥ್ಯವನ್ನು ಬಳಸಿಕೊಂಡು ಸ್ಥಳೀಯ ಆರ್ಥಿಕತೆ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ನೀತಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others