ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ರಾಕಿಂಗ್ ಸ್ಟಾರ್ ಯಶ್ ಭೇಟಿ: ‘ಟಾಕ್ಸಿಕ್’ ರಿಲೀಸ್ ಮುನ್ನ ವಿಶೇಷ ಪೂಜೆ ಸಲ್ಲಿಕೆ!

ಧರ್ಮಸ್ಥಳ: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆಗೂ ಮುನ್ನ ಸ್ಯಾಂಡಲ್‌ವುಡ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಮಂಜುನಾಥ ಸ್ವಾಮಿಗೆ ವಿಶೇಷ ಪ್ರಾರ್ಥನೆ ಗೀತೂ ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ಮತ್ತು ಬಿಡುಗಡೆಯ ಸಿದ್ಧತೆಗಳ ನಡುವೆ ಕ್ಷೇತ್ರಕ್ಕೆ ಆಗಮಿಸಿದ ಯಶ್, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದರು. ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ನೆರೆದಿದ್ದ ಅಭಿಮಾನಿಗಳು ಯಶ್ ಧರ್ಮಸ್ಥಳಕ್ಕೆ ಆಗಮಿಸಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ದೇವಾಲಯದ ಆವರಣದಲ್ಲಿ ಜಮಾಯಿಸಿ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡರು. ಅಭಿಮಾನಿಗಳತ್ತ ಕೈಬೀಸಿ ನಗುಮುಖದಿಂದಲೇ ಯಶ್ ಸ್ಪಂದಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others