JOB ALERT: ಶೀಘ್ರದಲ್ಲೇ ಕೆಇಎಯಿಂದ ಬರೋಬ್ಬರಿ 4,744 ಹುದ್ದೆ ನೇಮಕಕ್ಕೆ ಅಧಿಸೂಚನೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಈ ಹುದ್ದೆಗಳಿಗೆ ‌ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ. ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು ಎಂಬುದರ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪಠ್ಯಕ್ರಮದ ವಿವರಗಳನ್ನು ಕೂಡ ನೀಡಲಾಗಿದೆ. ಒಮ್ಮೆ ನೋಡಿಕೊಂಡು ಅಧ್ಯಯನ ಆರಂಭಿಸಿ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಹಾಗೂ ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ತಾಂತ್ರಿಕ ಹುದ್ದೆಗಳು 261 ಇದ್ದು, ನಂತರದ ದಿನಗಳಲ್ಲಿ ಇನ್ನೂ ಹೊಸ ಇಲಾಖೆ ಮತ್ತು ಹುದ್ದೆಗಳು ಸೇರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others