ಪ್ರಿಯಾಂಕ್ ಖರ್ಗೆ ಝೀರೋ ಟ್ರಾಫಿಕ್‌ ಕುರಿತು ಬಿಸಿ ಪಾಟೀಲ್ ವ್ಯಂಗ್ಯ – ಇದನ್ನೊಮ್ಮೆ ಓದಿ

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಆರೋಪಿಸಿದ್ದಾರೆ.

ಇದರ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿ.ಸಿ. ಪಾಟೀಲ್, ಮಂಗಳವಾರ ಬೆಳಗ್ಗೆ ಸುಮಾರು 5.30ರ ವೇಳೆಗೆ ಬೆಂಗಳೂರಿನಿಂದ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದಾಗ ಸಂಚಾರ ಪೊಲೀಸರು ರಸ್ತೆಯನ್ನು ತಡೆದು ‘ಝೀರೋ ಟ್ರಾಫಿಕ್’ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು ಎಂದು ಹೇಳಿದ್ದಾರೆ.

ಯಾರು ತೆರಳುತ್ತಿದ್ದಾರೆ ಎಂದು ಪೊಲೀಸರನ್ನು ಪ್ರಶ್ನಿಸಿದಾಗ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದ್ದರು.

ಸಾಕಷ್ಟು ಪ್ರಯಾಣಿಕರು ಫ್ಲೈಟ್ ತಪ್ಪಿ ಹೋಗುತ್ತೆ ಅಂತ ಪರದಾಡ್ತಾ ಇದ್ರು ಇದು ಎಐಸಿಸಿ ಅಧ್ಯಕ್ಷ ರ ಮಗ ಎನ್ನುವುದಕ್ಕೆ ವಿಶೇಷ ಸೌಲಭ್ಯವೇ ಇನ್ನು ಮುಂದಾದರೂ ಮುಖ್ಯಮಂತ್ರಿಗಳು ಇಂತಹ ಗೃಹ ಮಂತ್ರಿ ಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಕಾನೂನು ಬದ್ಧವಾಗಿ ನಡೆದುಕೊಳ್ಳಲು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದಿದ್ದರು ಅಂತ ಹೇಳ್ತಾರೆ ಹಾಗಾಯ್ತು ಈ ರಾಜ್ಯದ ಗೃಹಮಂತ್ರಿ ಕತೆ ಎಂದು ವ್ಯಂಗ್ಯವಾಡಿದ್ದಾರೆ. ಇದರಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ಏರ್ಪೋರ್ಟ್ ಹೋಗುವಂತ ಪ್ರಯಾಣಿಕರು ಪರದಾಡುವಂತಾಯಿತು ಎಂದರು.

ಹೋಂ ಮಿನಿಸ್ಟ್ರಿಗೆ ಜೀರೋ ಟ್ರಾಫಿಕ್ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಮತ್ತು ನನಗೆ ಗೊತ್ತಿರುವ ವಿಷಯ ಇದು ಯಾವಾಗಿನಿಂದ ಬಂತು ಎಂದು ಹೇಳಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others