ಬೆಂಗಳೂರಿನಲ್ಲಿ ವರುಣಾರ್ಭಟ: ೩ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಬೆಂಗಳೂರು ಇದೀಗ ಮಳೆಯಿಂದ ತಂಪಾಗಿದೆ. ಎರಡ್ಮೂರು ದಿನಗಳಿಂದ ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ.

ಮಳೆಯ ಪರಿಣಾಮ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಗುಡುಗು-ಮಿಂಚು ಸಹಿತ ಸುರಿದ ಬಿರುಸಿನ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ನಗರದ ಆಟೋಮ್ಯಾಟಿಕ್ ವೆದರ್ ಸ್ಟೇಷನ್ ಕೇಂದ್ರದಲ್ಲಿ ಅತ್ಯಧಿಕ 53 ಮಿ.ಮೀ ಮಳೆ ದಾಖಲಾಗಿದೆ

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others