ನನ್ನ ಮುಂದೆ ಇಂಥ ಭಾಷೆ ಬಳಸಬೇಡಿ: ಕೇಂದ್ರ ಸಚಿವ ಸಿಂಧಿಯಾ ಹೀಗೆ ಹೇಳಿದ್ದೇಕೆ ಗೊತ್ತಾ?

ಗುಣ: ರಸ್ತೆಗಳ ಸಮಸ್ಯೆ ಬಗೆಹರಿಯದಿದ್ದರೆ ಇನ್ನು ಮುಂದೆ ನಿಮಗೆ ಮತ ಹಾಕುವುದಿಲ್ಲ ಎಂದು ನಾಗರಿಕರು ಹೇಳಿದ್ದಾರೆ. ಅಲ್ಲದೇ ತಮ್ಮ ನೋವಿಗೆ ಸ್ಪಂದನೆ ಮಾಡದೆ ಇದ್ದರೆ ಮತ ಹಾಕುವುದಕ್ಕೆ ಬರಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ,

ಇದಕ್ಕೆ ಕಾರಣ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯ ಪ್ರದೇಶದ ಗುಣ ಜಿಲ್ಲೆಗೆ ಭೇಟಿ ನೀಡಿದ್ದರು ಈ ಸಮಯದಲ್ಲಿ ಗುಲಾಬ್‌ಗಂಜ್ ಪ್ರದೇಶದ ನಿವಾಸಿಗಳು ಅವರನ್ನು ಭೇಟಿಯಾಗಿ ಸ್ಥಳೀಯ ರಸ್ತೆಗಳ ದುಸ್ಥಿತಿ ಹಾಗೂ ಇದರಿಂದ ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ರಸ್ತೆಗಳ ಸಮಸ್ಯೆ ಬಗೆಹರಿಯದಿದ್ದರೆ ಇನ್ನು ಮುಂದೆ ನಿಮಗೆ ಮತ ಹಾಕುವುದಿಲ್ಲ ಎಂದು ನಾಗರಿಕರು ಹೇಳಿದ್ದಾರೆ. ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಸಿಂಧಿಯಾ, ನನ್ನೊಂದಿಗೆ ಈ ಭಾಷೆಯನ್ನು ಎಂದಿಗೂ ಬಳಸಬೇಡಿ ಎಂದು ಹೇಳಿದ್ದು, ಕೆಲ ಕ್ಷಣ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಸ್ಥಳೀಯ ನಿವಾಸಿಗಳ ಪ್ರಕಾರ, ರಸ್ತೆಗಳ ಹದಗೆಟ್ಟ ಸ್ಥಿತಿಯಿಂದಾಗಿ ಈ ಪ್ರದೇಶದ ಜನರು ದೀರ್ಘಕಾಲದಿಂದ ತೀವ್ರ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಸಚಿವರ ಮಧ್ಯಪ್ರವೇಶದಿಂದ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.

ಆದಾಗ್ಯೂ, ಬಳಿಕ ಸಿಂಧಿಯಾ ಅವರು ನಿವಾಸಿಗಳ ಅಹವಾಲುಗಳನ್ನು ಆಲಿಸಿ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. ನಂತರ ಹಲವು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆಗಳ ಕುರಿತು ಮಾತುಕತೆ ಮುಂದುವರಿಯಿತು.ಸಿಂಧಿಯಾ ಅವರ ಖಡಕ್ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ..

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others