ರಿಯಲ್ ಎಸ್ಟೇಟ್ ಸಿಎಂ ಡಿಕೆಶಿ ಅವರಿಗೆ ಬರಗಾಲದ ಬಗ್ಗೆ ಏನೂ ಗೊತ್ತಿಲ್ಲ: ಆರ್ ಅಶೋಕ್

ಬೆಂಗಳೂರು: ಬರಗಾಲದ ಬಗ್ಗೆ ಸರ್ಕಾರದ ನಿಜವಾದ ಆರ್ಥಿಕ ಬದ್ಧತೆ ಏನು ಎಂಬುದು ಜನರಿಗೆ ತಿಳಿಯಬೇಕು. ರಾಜ್ಯದ ಹಣಕಾಸಿನ ಪರಿಸ್ಥಿತಿ, ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಇರುವ ಬಾಕಿ, ಸರ್ಕಾರದ ಸಾಲದ ಹೊರೆ ಹಾಗೂ ಗ್ಯಾರಂಟಿಗಳ ಹಣಕಾಸಿನ ಪರಿಣಾಮ ಸೇರಿದಂತೆ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೆರವು ಕೇಳುವುದರಲ್ಲಿ ತಪ್ಪಿಲ್ಲ. ಆದರೆ ರಾಜ್ಯ ಸರ್ಕಾರ ಮೊದಲು ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಪರಿಹಾರ ಬಿಡುಗಡೆ ಮಾಡಿ, ನಂತರ ಕೇಂದ್ರದಿಂದ ಹೆಚ್ಚುವರಿ ನೆರವು ಕೇಳಬೇಕು ಎಂದರು. ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾದರೆ, ‘ನಾವು ರಾಜ್ಯದಿಂದ ಇಷ್ಟು ಹಣ ಬಿಡುಗಡೆ ಮಾಡಿದ್ದೇವೆ, NDRF ನಿಯಮಗಳ ಪ್ರಕಾರ ಕೇಂದ್ರದಿಂದ ಇಷ್ಟು ನೆರವು ಬೇಕು’ ಎಂದು ಕೇಳುವ ಸ್ಥಿತಿಯಲ್ಲಿ ಸರ್ಕಾರ ಇರಬೇಕು ಸರ್ಕಾರ ಡೆಫಿಸಿಟ್ ಬಜೆಟ್ ಮಂಡಿಸಿದೆ. ಖಜಾನೆಯ ಸ್ಥಿತಿ ಏನು, ಎಷ್ಟು ಬಾಕಿ ಇದೆ, ಯಾವ ಇಲಾಖೆಗೆ ಎಷ್ಟು ಹಣ ನೀಡಬೇಕಿದೆ ಎಂಬುದನ್ನು ಸರ್ಕಾರವೇ ಜನರ ಮುಂದೆ ಇಡಬೇಕು.ಎಂದು ಹೇಳಿದರು.

ಬರಗಾಲದ ಬಗ್ಗೆ ಸರ್ಕಾರದ ನಿಜವಾದ ಆರ್ಥಿಕ ಬದ್ಧತೆ ಏನು ಎಂಬುದು ಜನರಿಗೆ ತಿಳಿಯಬೇಕು. ರಾಜ್ಯದ ಹಣಕಾಸಿನ ಪರಿಸ್ಥಿತಿ, ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಇರುವ ಬಾಕಿ, ಸರ್ಕಾರದ ಸಾಲದ ಹೊರೆ ಹಾಗೂ ಗ್ಯಾರಂಟಿಗಳ ಹಣಕಾಸಿನ ಪರಿಣಾಮ ಸೇರಿದಂತೆ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

. ಕೇಂದ್ರ ಸರ್ಕಾರದ ನೆರವು ಕೇಳುವುದರಲ್ಲಿ ತಪ್ಪಿಲ್ಲ. ಆದರೆ ರಾಜ್ಯ ಸರ್ಕಾರ ಮೊದಲು ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಪರಿಹಾರ ಬಿಡುಗಡೆ ಮಾಡಿ, ನಂತರ ಕೇಂದ್ರದಿಂದ ಹೆಚ್ಚುವರಿ ನೆರವು ಕೇಳಬೇಕು ಎಂದರು. ಸರ್ಕಾರ ಡೆಫಿಸಿಟ್ ಬಜೆಟ್ ಮಂಡಿಸಿದೆ. ಖಜಾನೆಯ ಸ್ಥಿತಿ ಏನು, ಎಷ್ಟು ಬಾಕಿ ಇದೆ, ಯಾವ ಇಲಾಖೆಗೆ ಎಷ್ಟು ಹಣ ನೀಡಬೇಕಿದೆ ಎಂಬುದನ್ನು ಸರ್ಕಾರವೇ ಜನರ ಮುಂದೆ ಇಡಬೇಕು.ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾದರೆ, ‘ನಾವು ರಾಜ್ಯದಿಂದ ಇಷ್ಟು ಹಣ ಬಿಡುಗಡೆ ಮಾಡಿದ್ದೇವೆ, NDRF ನಿಯಮಗಳ ಪ್ರಕಾರ ಕೇಂದ್ರದಿಂದ ಇಷ್ಟು ನೆರವು ಬೇಕು’ ಎಂದು ಕೇಳುವ ಸ್ಥಿತಿಯಲ್ಲಿ ಸರ್ಕಾರ ಇರಬೇಕು ಎಂದು ಹೇಳಿದರು.

ವಿಶೇಷ ಅಧಿವೇಶನದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಮಂಡಿಸಲಿದೆ. ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಮುಖ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ಜನರ ಜೀವನ, ಕೃಷಿ, ಮೂಲಸೌಕರ್ಯ ಮತ್ತು ಬದುಕಿಗೆ ಅತಿಯಾದ ನಿರ್ಬಂಧಗಳು ಬರುವಂತಾಗಬಾರದು. ಸ್ಥಳೀಯ ಜನರ ಬದುಕು ಮತ್ತು ಪರಿಸರ, ಇವೆರಡನ್ನೂ ಸಮತೋಲನದಲ್ಲಿ ನೋಡಬೇಕು ಎಂದರು.

ವಿಶೇಷ ಅಧಿವೇಶನದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಮಂಡಿಸಲಿದೆ. ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಮುಖ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ಜನರ ಜೀವನ, ಕೃಷಿ, ಮೂಲಸೌಕರ್ಯ ಮತ್ತು ಬದುಕಿಗೆ ಅತಿಯಾದ ನಿರ್ಬಂಧಗಳು ಬರುವಂತಾಗಬಾರದು. ಸ್ಥಳೀಯ ಜನರ ಬದುಕು ಮತ್ತು ಪರಿಸರ, ಇವೆರಡನ್ನೂ ಸಮತೋಲನದಲ್ಲಿ ನೋಡಬೇಕು ಎಂದರು. ಬರಗಾಲ ಮತ್ತು ಕಸ್ತೂರಿರಂಗನ್ ವರದಿಯಂತಹ ಮಹತ್ವದ ಎರಡು ವಿಚಾರಗಳನ್ನು ಕೇವಲ ಮೂರು ದಿನಗಳಲ್ಲಿ ಸಮಗ್ರವಾಗಿ ಚರ್ಚಿಸಲು ಸಾಧ್ಯವಿಲ್ಲ. ಆದ್ದರಿಂದ ಸೋಮವಾರ ನಡೆಯಲಿರುವ ಬಿಸಿನೆಸ್ ಅಡ್ವೈಸರಿ ಕಮಿಟಿ ಸಭೆಯಲ್ಲಿ ಕನಿಷ್ಠ ಒಂದು ವಾರ ಅಧಿವೇಶನ ನಡೆಸಬೇಕು ಎಂದು ಬಿಜೆಪಿ ಒತ್ತಾಯಿಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಕೇವಲ ಘೋಷಣೆಗಳಲ್ಲೇ ಕಾಲ ಕಳೆಯುತ್ತಿದೆ. ಸೆ.21ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನಕ್ಕೂ ಮುನ್ನವೇ ಸರ್ಕಾರ ತನ್ನ ಬದ್ಧತೆಯನ್ನು ಕಾರ್ಯರೂಪದಲ್ಲಿ ತೋರಿಸಬೇಕು ಎಂದರು.

ಕೋಟೆ ಕೊಳ್ಳೆ ಹೊಡೆದು ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತಾಗಿದೆ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ. ಬರಗಾಲ ಬಂದು ತಿಂಗಳುಗಳೇ ಕಳೆದಿವೆ. ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದಾರೆ. ನಾವು ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಕ್ಷೇತ್ರಗಳಿಗೆ ತಲಾ 10 ಕೋಟಿ ಬಿಡುಗಡೆ ಮಾಡಿ, ತುರ್ತು ಬೋರ್‌ವೆಲ್ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇವೆ. ಆದರೆ ಸರ್ಕಾರ ಈವರೆಗೆ ಸಮರ್ಪಕ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ಒಂದು ಕಡೆ ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸಲಾಗುತ್ತಿದೆ. ಮತ್ತೊಂದು ಕಡೆ ಬರಪೀಡಿತ ರೈತರಿಗೆ ತಕ್ಷಣದ ಪರಿಹಾರ ನೀಡಲು ಹಣವಿಲ್ಲ. ಇದು ಅಭಿವೃದ್ಧಿಯ ಸರ್ಕಾರವಲ್ಲ, ಘೋಷಣೆಗಳ ಸರ್ಕಾರ. ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆಯಲು ಮುಂದಾಗಿರುವುದನ್ನು ಉಲ್ಲೇಖಿಸಿದ ಅವರು, ಚರ್ಚೆ ಮಾಡುವುದು ಸ್ವಾಗತಾರ್ಹ.

ಆದರೆ ಚರ್ಚೆಗೂ ಮುನ್ನ ರೈತರಿಗೆ ಮತ್ತು ಜನರಿಗೆ ಸರ್ಕಾರದ ಬಳಿ ಹಣವಿದೆ, ಸರ್ಕಾರ ಕೆಲಸ ಮಾಡುತ್ತಿದೆ ಎಂಬ ವಿಶ್ವಾಸ ಮೂಡಬೇಕು. ಕನಿಷ್ಠ ಕುಡಿಯುವ ನೀರಿಗಾಗಿ ತಲಾ 10 ಕೋಟಿ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others