ರಾಜ್ಯದಲ್ಲಿ ಮುಂದಿನ 3 ದಿನ ಮಳೆ ರೌದ್ರಾವತಾರ: ಕೆಲವು ಕಡೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಎಚ್ಚರಿಸಲಾಗಿದೆ.

ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿರುವುದು ಬೆಳಕಿಗೆ ಬಂದಿದೆ

ಇಂದು ಬೆಂಗಳೂರು ನಗರದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ನಡುವೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆ.24ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆ.22 ಮತ್ತು 25ರಂದು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಸೆ.24ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಸೆ.26ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು, ಮಿಂಚು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಸೆ.23ರಂದು ಉತ್ತರ ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಸೆ.23 ಮತ್ತು 24ರಂದು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ

ಹವಾಮಾನ ಇಲಾಖೆಯ ವರದಿ ಪ್ರಕಾರ, ಸೆಪ್ಟೆಂಬರ್ 24ರಂದು ಕರಾವಳಿ ಕರ್ನಾಟಕದಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಅಥವಾ ಆರೆಂಜ್ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post