ಏಷ್ಯನ್ ಗೇಮ್ಸ್ ಸಾಧಕರಿಗೆ ಸಿಎಂ ಭರ್ಜರಿ ಸನ್ಮಾನ : ಚಿನ್ನ ಗೆದ್ದವರಿಗೆ 1 ಕೋಟಿ ರೂ. ಬಹುಮಾನ

ಬೆಂಗಳೂರು: 2026ರ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದು ದೇಶ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್‌ ಅವರು ವಿಧಾನಸೌಧದಲ್ಲಿ ಸನ್ಮಾನಿಸಿ, ಆತ್ಮೀಯವಾಗಿ ಅಭಿನಂದಿಸಿದ್ದಾರೆ.

ಕ್ರೀಡಾಪಟುಗಳ ಸುದೀರ್ಘ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು, ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಿದೆ.

ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್‌ ಅವರು ವಿಧಾನಸೌಧದಲ್ಲಿ ಸನ್ಮಾನಿಸಿ ಅಭಿನಂದಿಸಿರಿವ ಮಾಹಿತಿ ಬೆಳಕಿಗೆ ಬಂದಿದೆ.

ಈ ಬಾರಿ ಎಂಟು ಮಂದಿಗೆ ಈ ನಗದು ಪುರಸ್ಕಾರ ಸಿಗಲಿದ್ದು, ಜೊತೆಗೆ ಈ ಎಂಟು ಪದಕ ವಿಜೇತರಿಗೆ ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಿದ್ದಕ್ಕಾಗಿ, ಪದಕ ಸಾಧನೆಗೆ ನೀಡಲಾಗುವ ನಗದು ಪುರಸ್ಕಾರದ ಹೆಚ್ಚುವರಿಯಾಗಿ ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು.

20 ಕ್ರೀಡಾಪಟುಗಳಿಗೆ ಲಕ್ಷ ರೂ.
ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.

ರಾಜ್ಯದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವುದೇ ಮಹತ್ವದ ಸಾಧನೆಯಾಗಿದ್ದು, ಪದಕ ಗಳಿಸಿದವರ ಜೊತೆಗೆ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ 35 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 15 ಲಕ್ಷ ರೂ. ನಗದು ಪುರಸ್ಕಾರ ನೀಡಲಾಗುತ್ತಿತ್ತು. ಪರಿಷ್ಕೃತ ಮೊತ್ತದ ಪ್ರಕಾರ, ಚಿನ್ನದ ಪದಕ ವಿಜೇತರಿಗೆ 1 ಕೋಟಿ ರೂ, ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂ ಮತ್ತು ಕಂಚಿನ ಪದಕ ಗೆದ್ದರೆ 50 ಲಕ್ಷ ರೂ. ನಗದು ಪುರಸ್ಕಾರ ನೀಡಲಾಗುವುದು.

ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಅರ್ಹ ಹಾಗೂ ಆಸಕ್ತ ಪದಕ ವಿಜೇತ ಕ್ರೀಡಾಪಟುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇರ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರುವ ಸಾಧಕರಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ನೀಡುವ ಮೂಲಕ ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಡಾ. ಜಿ. ಪರಮೇಶ್ವರ್‌ ಅವರು ತಿಳಿಸಿದರು.

ಕ್ರೀಡಾಪಟುಗಳ ಸಾಧನೆಗೆ ತಕ್ಕ ಗೌರವ ನೀಡುವ ಹಾಗೂ ಮುಂದಿನ ಕ್ರೀಡಾಪಟುಗಳಿಗೆ ಇನ್ನಷ್ಟು ಪ್ರೇರಣೆ ನೀಡುವ ಉದ್ದೇಶದಿಂದ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಜಿ. ಪರಮೇಶ್ವರ್‌ ತಿಳಿಸಿದರು.

ಏಷ್ಯನ್ ಗೇಮ್ಸ್‌ನಲ್ಲಿ ರಾಜ್ಯದ ಕ್ರೀಡಾಪಟುಗಳು ತೋರಿದ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ಉದ್ದೇಶದಿಂದ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ. ಜಿ. ಪರಮೇಶ್ವರ್‌ ತಿಳಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post