ರಮೇಶ್ ಜಾರಕಿಹೊಳಿ ಬಂದು ಊಟ ಮಾಡಿ ಹೋದ್ರು ; ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಮೇಶ್ ಜಾರಕಿಹೊಳಿ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು ಈ ವಿಚಾರವಾಗಿ ಇದೀಗ ಮಾಜಿ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ರಮೇಶ್ ಜಾರಕಿಹೊಳಿ ಅವರೊಂದಿಗೆ ಭೇಟಿ ಸೌಜನ್ಯದ ಭೇಟಿಯಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಬಂದಿದ್ದು ಉಭಯಕುಶಲೋಪರಿಗೆ, ಬಂದು ಊಟ ಮಾಡಿ ಹೋದ್ರು ಅಷ್ಟೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ರಮೇಶ್‌ ಜಾರಕಿಹೊಳಿ ಮಾತನಾಡಿ, ಸ್ಟಿಂಗ್‌ ಆಪರೇಷನ್‌ ಸದ್ದು ಮಾಡುತ್ತಿರುವ ಈ ಸಂದರ್ಭದಲ್ಲಿ ಇಬ್ಬರ ಭೇಟಿ ಕುತೂಹಲ ಮೂಡಿಸಿದೆ. ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದ ಜಾರಕಿಹೊಳಿ, ಇದೊಂದು ಸೌಜನ್ಯದ ಹಾಗೂ ಖಾಸಗಿ ಭೇಟಿ. ಮಾರುವೇಷದ ಕಾರ್ಯಾಚರಣೆ ಮೊದಲಾದವುಗಳ ಕುರಿತು ನಾನು ಈಗ ಮಾತನಾಡುವುದಿಲ್ಲ. ನಾನು ಬೇರೆ ವಿಷಯ ಚರ್ಚಿಸಲು ಬಂದಿದ್ದೆ ಎಂದರು.

ಮುಜರಾಯಿ ಸಚಿವ ಕೆ.ಎಸ್.ಬಸವಂತಪ್ಪ ಅವರೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಜೊತೆಗಿದ್ದರು.

ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತರಬಾರದಿತ್ತು. ಧೈರ್ಯವಾಗಿ ಎದುರಿಸಿ ಫೈಟ್ ಮಾಡಬೇಕಿತ್ತು ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಯಾವ ಪಕ್ಷದಲ್ಲಿದ್ದರೂ ಅವರು ನಮ್ಮ ನಾಯಕರು. ನಾನು ಈಗ ಆ ಸ್ಟಿಂಗ್ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ. ನಾನು ಬೇರೆಯದೇ ವಿಚಾರವಾಗಿ ಅವರನ್ನು ಮಾತನಾಡಿಸಲು ಬಂದಿದ್ದೆ. ಇದು ಖಾಸಗಿ ಭೇಟಿ ಎಂದು ಸ್ಪಷ್ಟಪಡಿಸಿ ಅಲ್ಲಿಂದ ತೆರಳಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post