ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂವಾದ ಮತ್ತು ರಾಜತಾಂತ್ರಿಕತೆಯ (Dialogue and Diplomacy) ಮೂಲಕ ಮಾತ್ರ ಬಗೆಹರಿಸಿಕೊಳ್ಳಬಹುದು ಎಂದು ಪುನರುಚ್ಚರಿಸಿದ್ದಾರೆ
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಫೋನ್ ಕಾಲ್‌ನಲ್ಲಿ ಮಾತುಕತೆ ನಡೆಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಜೊತೆಗೆ ಸಂಘರ್ಷ ನಿಲ್ಲಿಸಿ ಶಾಂತಿ ಸ್ಥಾಪನೆಗೆ ಮನವಿ ಮಾಡಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಕೊನೆಗೊಳಿಸಲು ಶಾಂತಿಯುತ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಭಾರತವು ಮತ್ತೊಮ್ಮೆ ಒತ್ತಿಹೇಳಿದ್ದಾರೆ.
ಅಲ್ಲದೇ ಉಭಯ ದೇಶಗಳ ಜನರ ಪರಸ್ಪರ ಹಿತಾಸಕ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಭಾರತ-ಉಕ್ರೇನ್ ದ್ವಿಪಕ್ಷೀಯ ಸಹಕಾರವನ್ನ ಇನ್ನಷ್ಟು ಬಲಪಡಿಸುವ ಕ್ರಮಗಳ ಬಗ್ಗೆಯೂ ಇಬ್ಬರೂ ನಾಯಕರು ಚರ್ಚಿಸಿದರು ಎಂದು ಪ್ರಧಾನ ಮಂತ್ರಿಗಳ ಕಚೇರಿ (PMO) ತಿಳಿಸಿದೆ.
2022ರ ಫೆಬ್ರವರಿಯಲ್ಲಿ ಆರಂಭವಾದ ಈ ಸಂಘರ್ಷ ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲು ಭಾರತ ಸಿದ್ಧವಾಗಿದೆ. ಸಂಘರ್ಷವನ್ನ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ, ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಝೆಲೆನ್ಸ್ಕಿ ಮಾಹಿತಿ ಹಂಚಿಕೊಂಡರು.
ಯುದ್ಧಕ್ಕೆ ಅಂತ್ಯಹಾಕಲು ಮಾತುಕತೆಯೊಂದೇ ದಾರಿ ಎಂದು ಪ್ರಧಾನಿ ಮೋದಿ ಒತ್ತಿಹೇಳಿದ್ದಾರೆ.ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಎಲ್ಲ ಪ್ರಯತ್ನಗಳಿಗೂ ಭಾರತ ಸಂಪೂರ್ಣ ಬೆಂಬಲ ಮತ್ತು ಅಗತ್ಯ ನೆರವು ನೀಡಲು ಸಿದ್ಧವಿದೆ ಎಂದು ಮೋದಿ ತಿಳಿಸಿದ್ದಾರೆ.
- ದ್ವಿಪಕ್ಷೀಯ ಬಾಂಧವ್ಯ: ಇದೇ ವೇಳೆ ಉಭಯ ನಾಯಕರು ಭಾರತ-ಉಕ್ರೇನ್ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಕೂಡ ಚರ್ಚಿಸಿದ್ದಾರೆ.






ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)