ಶಿವಮೊಗ್ಗ : KEAಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ(Village Administrative Officer) ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 572 ಗ್ರಾಮ ಆಡಳಿತ ಅಧಿಕಾರಿ(Village Administrative Officer) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(Karnataka Examinations Authority – KEA) ಈಗಾಗಲೇ ಪ್ರಕಟಿಸಲಾಗಿದೆ.
ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 18 ಗ್ರಾಮ ಆಡಳಿತ ಅಧಿಕಾರಿ(Village Administrative Officer) ಹುದ್ದೆಗಳಿಗೆ ಒಟ್ಟು 1111 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1111 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ದಿನಾಂಕ: 07.12.2026 ರಿಂದ 08.12.2026 ರವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಮಯ 11:00 ಘಂಟೆ ಯಿಂದ ಸಂಜೆ 5:00 ಘಂಟೆ ರೂಳಗಾಗಿ ಖುದ್ದಾಗಿ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವುದು, ಗೈರು ಹಾಜರಾದಲ್ಲಿ ಎರಡನೇ ಅವಕಾಶವನ್ನು ನೀಡಲಾಗುವುದಿಲ್ಲ.
ತೃತೀಯ ಲಿಂಗ ಅಭ್ಯರ್ಥಿ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ ಈ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರೆ ಪ್ರವರ್ಗದಡಿ 1:3 ಅನುಪಾತದಂತೆ ಒಟ್ಟು 51 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿ(Village Administrative Officer) ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಒಟ್ಟಾರೆಯಾಗಿ KEAಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ(Village Administrative Officer) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಗೊಂಡಂತ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.






ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)