KEAಯಿಂದ ಇಂದು ನಡೆದ ವಿವಿಧ ನೇಮಕಾತಿ ಪರೀಕ್ಷೆಗ ಕೀ ಉತ್ತರ ಪ್ರಕಟ

ಗ್ರಾಮ ಆಡಳಿತ — ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ : ಪ್ರಮಾಣ ಪತ್ರಗಳ ಪರಿಶೀಲನೆಗೆ ಸೂಚನೆ

ಬೆಂಗಳೂರು: ಉಳಿಕೆ ಮೂಲ ವೃಂದದ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ನೇಮಕಾತಿಗೆ‌ ಇಂದು KEA ಲಿಖಿತ ಪರೀಕ್ಷೆಯ ನಡೆಸಿತ್ತು. ಇಂತಹ ವಿವಿಧ ಪತ್ರಿಕೆಗಳ ಕೀ ಉತ್ತರಗಳನ್ನು (Key Answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examinations Authority- KEA) ಪ್ರಕಟಿಸಿದೆ. ಪರೀಕ್ಷೆ ಮುಗಿದ ನಾಲ್ಕು ಗಂಟೆಯಲ್ಲೇ ಕೀ ಉತ್ತರವನ್ನು ಕೆಇಎ(KEA) ಬಿಟ್ಟಿರುವುದೂ ದಾಖಲೆಯೇ ಆಗಿದೆ.

ಪ್ರಾಂಶುಪಾಲರ ಹುದ್ದೆಯ ಸಾಮಾನ್ಯ ಅಧ್ಯಯನ ವಿಷಯ-2ರ ಕೀ ಉತ್ತರ(Key Answers) ಪ್ರಕಟಿಸಿದ್ದು, ಆಕ್ಷೇಪಣೆಗಳು ಏನಾದರು ಇದ್ದಲ್ಲಿ ನ.24ರಂದು ಬೆಳಿಗ್ಗೆ 10.30ರೊಳಗೆ ನಿಗದಿತ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಹಾಗೆಯೇ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ‌ ಇಂದು ನಡೆದ ಸಾಮಾನ್ಯ ಜ್ಞಾನ ಮತ್ತು ನಿರ್ದಿಷ್ಟ ಪತ್ರಿಕೆಗಳಾದ ಕನ್ನಡ ಮತ್ರು ವಿಜ್ಞಾನ ವಿಷಯ ಗಳ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ನ.25ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ. ಕಾರಾಗೃಹ ಹುದ್ದೆಗಳ ಲಿಖಿತ ಪರೀಕ್ಷೆ ನ.21ರಂದು ನಡೆದಿದ್ದು, ಅದರ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ನ.24ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಒಟ್ಟಾರೆಯಾಗಿ ಕೆಇಎ(KEA) ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ನೇಮಕಾತಿಗೆ‌ ಇಂದು ನಡೆದ ಲಿಖಿತ ಪರೀಕ್ಷೆ ನಡೆಸಿ 4 ಗಂಟೆಯಲ್ಲೇ ಕೀ ಉತ್ತರವನ್ನು ಪ್ರಕಟಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ.

💬 ಕಾಮೆಂಟ್ • Comments (0)

💬 ಓದುಗರ ಕಾಮೆಂಟ್‌ಗಳು • Reader Comments (0)

ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)

Share it :

Leave a Reply

Your email address will not be published. Required fields are marked *