ಬೆಂಗಳೂರು: ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ, ಮಧು ಪಾಲೇಗೌಡ ಎಂ.ಪಿ. ಅವರನ್ನು ಹಿರಿಯೂರು ಉಪಚುನಾವಣೆಯ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ.
ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸಲ್ಲಿಸಿರುವ ಸೇವೆ ಹಾಗೂ ಪಕ್ಷ ಸಂಘಟನೆಯಲ್ಲಿ ತೋರಿರುವ ಕಾರ್ಯದಕ್ಷತೆಯನ್ನು ಪರಿಗಣಿಸಿ ಈ ಜವಾಬ್ದಾರಿ ನೀಡಲಾಗಿದೆ. ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನಿರ್ದೇಶನ ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಸ್. ಮಂಜುನಾಥ್ ಅವರು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕಗೊಂಡಿರುವ ಮಧು ಪಾಲೇಗೌಡ ಅವರು ಕೂಡಲೇ ಜವಾಬ್ದಾರಿ ವಹಿಸಿಕೊಂಡು, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕಾರ್ಯಕರ್ತರನ್ನು ಸಂಘಟಿಸಿ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಸೂಚಿಸಲಾಗಿದೆ.







ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)