ರಾಜ್ಯದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಅಂತಿಮ ಮೀಸಲಾತಿ ಅಧಿಸೂಚನೆ ಪ್ರಕಟ

ನಿಗಮ — 2 ವರ್ಷ ಪೂರೈಸಿದ ನಿಗಮ-ಮಂಡಳಿ ಸದಸ್ಯರಿಗೆ ಗೇಟ್‌ಪಾಸ್!  ನಿರ್ದೇಶಕರು, ಸದಸ್ಯರು ಪದಮುಕ್ತ

ಬೆಂಗಳೂರು: ರಾಜ್ಯ ಸರ್ಕಾರ ಜಿ.ಪಂ. ತಾಪಂ ಕ್ಷೇತ್ರಗಳ ಮೀಸಲು ಅಂತಿಮ ಮೀಸಲಾತಿ ಪಟ್ಟಿಯಶ್(Reservation List) ಅಧಿಸೂಚನೆ ಪ್ರಕಟಿಸಿದ್ದು, ಜನವರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ನಿನ್ನೆ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು.

2022ರಲ್ಲಿಯೇ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲವು ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಹಾಗೂ ಕೆಲವು ಗ್ರಾಮ ಪಂಚಾಯತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾಗಿತ್ತು. ಹೀಗಾಗಿ ವಿಳಂಬವಾಯಿತು ಎಂದು ತಿಳಿಸಿದರು.

ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸಿದ್ದು, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿ ಚುನಾವಣೆ ನಡೆಸಲಿದೆ. ಬಹುತೇಕ ಜನವರಿಯಲ್ಲಿ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಪಕ್ಷ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸಂಪೂರ್ಣ ಸಜ್ಜಾಗಿದೆ ಎಂದರು.

https://erajyapatra.karnataka.gov.in/ ನಲ್ಲಿ ಎಲ್ಲ ಅಧಿಸೂಚನೆಗಳೂ ಲಭ್ಯವಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
💬 ಕಾಮೆಂಟ್ • Comments (0)

💬 ಓದುಗರ ಕಾಮೆಂಟ್‌ಗಳು • Reader Comments (0)

ಇನ್ನೂ ಯಾವುದೇ ಕಾಮೆಂಟ್ ಇಲ್ಲ. ಮೊದಲ ಕಾಮೆಂಟ್ ನೀವೇ ಬರೆಯಿರಿ! (Be the first to comment.)

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others