ಬೆಂಗಳೂರು: ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ ಗಳ ಪ್ರವೇಶ (ಪಿಜಿಸಿಇಟಿ) ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ.




