ವಿಧಾನಸಭಾ ಮತದಾರರ ಪಟ್ಟಿಯಿಂದ ಅಪಾರ ಸಂಖ್ಯೆಯ ಹಿಂದೂ ಮತದಾರರನ್ನು ಹೊರಗಿಡಲಾಗಿದೆ : ಯೋಗಿ ಆದಿತ್ಯನಾಥ್

ಲಕ್ನೋ: ವಿಧಾನಸಭಾ ಮತದಾರರ ಪಟ್ಟಿಯಿಂದ ಅಪಾರ ಸಂಖ್ಯೆಯ ಹಿಂದೂ ಮತದಾರರನ್ನು ಹೊರಗಿಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ದೇಶಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಅಧಿಕ ಹಿಂದೂ(Hindu) ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ವಿಧಾನಸಭಾ ಮತದಾರರ ಪಟ್ಟಿಯಿಂದ ಅಪಾರ ಸಂಖ್ಯೆಯ ಹಿಂದೂ ಮತದಾರರನ್ನು ಹೊರಗಿಡಲಾಗಿದೆ ಎಂದು ದೂರಿದ್ದಾರೆ. ತಮ್ಮ ವಾದಕ್ಕೆ ಬೆಂಬಲವಾಗಿ ಅವರು ಹಲವು ಅಂಕಿಅಂಶಗಳನ್ನು ಮಂಡಿಸಿದ್ದಾರೆ:

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನಾತ್ಮಕ ಮಾರ್ಗಸೂಚಿ ಹಾಗೂ ಚುನಾವಣಾ ಕಾರ್ಯತಂತ್ರ ರೂಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಡ್ರಾಫ್ಟ್ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರನ್ನು ಗುರುತಿಸಿ ಅಂತಿಮ ಪಟ್ಟಿಗೆ ಸೇರ್ಪಡೆಗೊಳಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಅವರು ಕರೆ ನೀಡಿದ್ದಾರೆ.
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ ಮುಖ್ಯಮಂತ್ರಿಗಳು, ಪ್ರತಿಯೊಂದು ಮತಗಟ್ಟೆಯ ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು ಮತ್ತು ಹೆಸರು ಬಿಟ್ಟುಹೋದ ಅರ್ಹ ಮತದಾರರ ನೋಂದಣಿಗೆ ನೆರವಾಗಬೇಕು ಎಂದರು.

ಇದಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (BLO) ಸಮನ್ವಯ ಸಾಧಿಸಿ ವಿಶೇಷ ಅಭಿಯಾನ ಆರಂಭಿಸಲು ಹಾಗೂ ಈ ಕಾರ್ಯದ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಲು ನಿರ್ದೇಶಿಸಿದರು. ಜತೆಗೆ ಪಕ್ಷದ ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಕೂಡ ಈ ಜವಾಬ್ದಾರಿಯನ್ನು ಹೊರಬೇಕು ಎಂದು ಯೋಗಿ ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು ಸಾರ್ವಜನಿಕರೂ ಪರಿಶೀಲಿಸಿಕೊಳ್ಳಬೇಕೆಂದು ಮನವಿ ಮಾಡಿದ ಅವರು, ಹೆಸರು ಬಿಟ್ಟುಹೋಗಿದ್ದರೆ ತಕ್ಷಣ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.

ಪಂಚಾಯಿತಿ ಚುನಾವಣಾ ಪಟ್ಟಿಯಲ್ಲಿರುವ ಸುಮಾರು 66 ಲಕ್ಷ ಜನರ ಹೆಸರುಗಳು ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ.ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸುಮಾರು 55 ಲಕ್ಷ ಫಲಾನುಭವಿಗಳು ಮತದಾರರಾಗಿ ನೋಂದಣಿಯಾಗಿಲ್ಲ.18 ರಿಂದ 19 ವರ್ಷದೊಳಗಿನ ಸುಮಾರು 4.5 ಲಕ್ಷ ಯುವಕರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದ್ದಾರೆ.

Share it :

Leave a Reply

Your email address will not be published. Required fields are marked *