ಸಿಎಂ ಡಿಕೆಶಿ ಬೆಳಗಾವಿಗೆ ಬರುವ ಮುನ್ನ, ಮಹಾರಾಷ್ಟ್ರದಲ್ಲಿ ಮಿಂಚಿನ ಬೆಳವಣಿಗೆಯಾಗಿದೆ: ಫಡ್ನವಿಸ್‌

Devendra Fadnavis

ಬೆಳಗಾವಿ: ಸಿಎಂ ಡಿಕೆಶಿ ಬೆಳಗಾವಿಗೆ ಬರುವ ಮುನ್ನ, ಮಹಾರಾಷ್ಟ್ರದಲ್ಲಿ ಮಿಂಚಿನ ಬೆಳವಣಿಗೆಯಾಗಿದೆ ಎಂದು ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

ಸಿಎಂ ದೇವೇಂದ್ರ ಫಡ್ನವಿ ನೇತೃತ್ವದಲ್ಲಿ ಮಹಾರಾಷ್ಟ್ರ ಗಡಿ ಉನ್ನತ ಮಟ್ಟದ ಸಮಿತಿ ಸಭೆಯನ್ನ ಮಹಾರಾಷ್ಟ್ರ ಸರ್ಕಾರ ಕೈಗೊಂಡಿದ್ದು, ಈ ಸಭೆಯಲ್ಲಿ ಸಿಎಂ ದೇವೇಂದ್ರ ಫಡ್ನವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಮುಂಬೈನ ರಾಜಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ಮಾಜಿ ಸಿಎಂ ಶರದ್‌ ಪವಾರ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಸುನೇತ್ರಾ ಪವಾರ್, ನಿತೇಶ್‌ ರಾಣಾ ಸೇರಿ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ.

ಒಕ್ಕೂಟ ವ್ಯವಸ್ಥೆ ಧಿಕ್ಕರಿಸಿ ಕರ್ನಾಟಕದ ಗಡಿ ಪ್ರದೇಶದ ಮರಾಠಿ ಭಾಷಿಕರಿಗೆ ವಿವಿಧ ಯೋಜನೆ ಘೋಷಣೆ ಮಾಡಿದೆ. ಮಹಾರಾಷ್ಟ್ರ ಗಡಿ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರ ಗಡಿಭಾಗದ ಮರಾಠಿ ಭಾಷಿಕರ ಬೆನ್ನಿಗೆ ನಿಲ್ಲುವುದು, ಈಗಾಗಲೇ ಗಡಿ ಭಾಗದ ಮರಾಠಿ ಭಾಷಿಕರಿಗೆ ಶಿಕ್ಷಣದಲ್ಲಿ ಮೀಸಲಾತಿ, ಆರೋಗ್ಯ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದೆ.

ಸುಪ್ರೀಂ ಕೋರ್ಟ್‌ನಲ್ಲಿರುವ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದ ವಿಚಾರಣೆ ಆರಂಭವಾಗಬೇಕಿದೆ, ಈ ದಿಸೆಯಲ್ಲಿ ಪ್ರಯತ್ನಿಸಲು ಉನ್ನತ ಅದಿಕಾರಿಗಳ ಸಮಿತಿ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.ಮಹಾʼ ಸಿಎಂ ದೇವೆಂದ್ರ ಫಡ್ನವಿಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾಡದ್ರೋಹಿ ಎಂಇಎಸ್ ಮುಖಂಡರೂ ಸಹ ಭಾಗಿಯಾಗಿದ್ದರು. ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರ ವಿವಾದಾತ್ಮಕ ನಿರ್ಧಾರ ತೆಗೆದುಕೊಂಡಿದೆ.

ಇತ್ತ ಕೇಂದ್ರ ಗೃಹಸಚಿವ ಅಮಿತ್ ಶಾ ನೇತೃತ್ವದಲ್ಲಿ ಗಡಿ ವಿವಾದ ಸಂಬಂಧ ಸಭೆ ನಿಗದಿಯಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ತೀವ್ರಗೊಳಿಸಲು ಗಡಿ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಇದೇ ಸಭೆಯಲ್ಲಿ, ಬೆಳಗಾವಿ ಗಡಿ ಭಾಗದಲ್ಲಿ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ಎಂಇಎಸ್‌ಗೆ ಸದಾ ಬೆಂಬಲವಿದೆ ಎಂದು ಸಮಿತಿ ತಿಳಿಸಿದೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others

Latest Post