ಗಾಯದ ಮೇಲೆ ಬರೆ ಎಳೆದಂತೆ, ಪ್ರತಾಪ್ ಸಿಂಹ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ : ಬಿ.ವೈ. ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನಡೆ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದು, ಕಾಂಗ್ರೆಸ್ ಸರ್ಕಾರದ ನಡೆ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವಂತಿದೆ ಎಂದು ಆರೋಪಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗಣಪತಿ ವಿಸರ್ಜನಾ ಶೋಭಾಯಾತ್ರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ, ಶಾಂತಿಗೆ ಭಂಗವಾಗದ ರೀತಿಯಲ್ಲಿ ಯಶಸ್ವಿಯಾಗಿ ನಡೆದಿದೆ. ಆದರೆ, ಗಾಯದ ಮೇಲೆ ಬರೆ ಎಳೆದಂತೆ, ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಹೇಳಿದ್ದಾರೆ.

ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯ ವರ್ತನೆಯಿಂದ ಉದ್ಭವಿಸಿದ ಪರಿಸ್ಥಿತಿಗೆಸರ್ಕಾರವೇ ಪರೋಕ್ಷವಾಗಿ ಪ್ರಚೋದನೆ ನೀಡಿದಂತಾಗಿದೆ ಎಂದು ಆರೋಪಿಸಿದ್ದಾರೆ.

ಮೂಲ ಮಾಹಿತಿ ಇಲ್ಲಿದೆ ನೋಡಿ : ಮೈಸೂರಿನ ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆʻ

ಸಾರ್ವಜನಿಕ ಸೇವಕರು ಹಾಗೂ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ, ವಿವಿಧ ಗುಂಪುಗಳು ಮತ್ತು ಜಾತಿಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡಿದ ಆರೋಪ, ಪ್ರಚೋದನಕಾರಿ ಭಾಷಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ. ಕೂಡಲೇ ಸರ್ಕಾರ ಪ್ರತಾಪ್ ಸಿಂಹ ಅವರ ಮೇಲೆ ದಾಖಲಿಸಿರುವ FIR ಅನ್ನು ರದ್ದುಗೊಳಿಸಿ ಸರ್ಕಾರ ವಿವೇಕ ಮೆರೆಯಲಿ ಎಂದು ಕೆಲವರು ಆಗ್ರಹಿಸಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿಯ ಕೆಲವು ನಾಯಕರು ಪ್ರತಿಕ್ರಯೆ ಕೊಡುತ್ತಿದ್ದಾರೆ. ಅಲ್ಲದೇ ಇದರ ಹಿಂದೆ ಕೈ ಸರ್ಕಾರದ ಕೈವಾಡವಿದೆ ಎಂದು ಹೇಳುತ್ತಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others