ಮಂಡ್ಯದಲ್ಲಿ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ; ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಮಹೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರು ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿರುವ ರೋಮಾಂಚನಕಾರಿ ಘಟನೆ ನಡೆದಿದೆ. ಸ್ಥಳ ಮಹಜರು ನಡೆಸುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಈ ಕ್ರಮ ಕೈಗೊಂಡಿದ್ದಾರೆ. ಹಲಗೂರು ಸಮೀಪದ ಹುಲ್ಲೇಗಾಲದ ಬಳಿ ಈ ಫೈರಿಂಗ್ ನಡೆದಿದ್ದು, ಆರೋಪಿ ಸಿದ್ದರಾಜು ಅಲಿಯಾಸ್ ‘ಸೀಜರ್ ಸಿದ್ದು’ ಕಾಲಿಗೆ ಗುಂಡೇಟು ಬಿದ್ದಿದೆ. ಮೊಬೈಲ್ ಮೆಸೇಜ್ ಗಲಾಟೆ: ಹತ್ಯೆಗೆ […]
ಶಿವಮೊಗ್ಗದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಡಿಡಿಯಾಗಿ ಸಿ.ಎಸ್ ಷಡಕ್ಷರಿ ಅಧಿಕಾರ ಸ್ವೀಕಾರ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿಯವರು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಪನಿರ್ದೇಶಕರಾಗಿ (Deputy Director) ಇಲ್ಲಿ ಇಂದು ಅಧಿಕೃತವಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಇದೇ ವರ್ಷ ಜೂನ್ 18 ರಂದು (ಇಂದು) ಅವರು ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರ ಕಚೇರಿಯ ತಮ್ಮ ಕರ್ತವ್ಯದಿಂದ ಬಿಡುಗಡೆ ಹೊಂದಿದ್ದರು. ಅಲ್ಲಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ ಅವರು, ತಮ್ಮ ನೂತನ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರಿಗಳು ಹಾಗೂ ಗಣ್ಯರಿಂದ […]
ವಚನಾನಂದ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್: ಜೂನ್.30ಕ್ಕೆ ಜಾಮೀನು ರದ್ದು ಅರ್ಜಿಯ ತೀರ್ಪು ಮುಂದೂಡಿದ ಕೋರ್ಟ್

ದಾವಣಗೆರೆ: ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಜ್ಞಾನಾನಂದಪೀಠದ ವಚನಾನಂದ ಸ್ವಾಮೀಜಿಯವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಜೂನ್ 30ಕ್ಕೆ ಕಾಯ್ದಿರಿಸಿದೆ. ಸ್ವಾಮೀಜಿಗೆ ಕಳೆದ ಮೇ 2 ರಂದು ಮಂಜೂರಾಗಿದ್ದ ಜಾಮೀನನ್ನು ರದ್ದುಪಡಿಸಬೇಕೆಂದು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಸಂತ್ರಸ್ತರ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೂನ್ 11 ರಂದೇ ಇದರ ಸಂಪೂರ್ಣ ವಿಚಾರಣೆ ಮುಗಿದಿದ್ದು, ಇಂದು ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಬೇಕಿತ್ತು. ಆದರೆ, […]
ತಮಿಳುನಾಡು ಜೊತೆ ಯಾವಾಗ ಬೇಕಾದರೂ ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, “ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯಕ್ಕಿಂತ […]
ತಮಿಳುನಾಡಿನ ಕೊಯಮತ್ತೂರಿನಲ್ಲಿ 19 ವರ್ಷದ ನೀಟ್ ಅಭ್ಯರ್ಥಿ ಆತ್ಮಹ*ತ್ಯೆ

ಚೆನ್ನೈ: ನೀಟ್ (NEET) ಪರೀಕ್ಷೆಯ ವಿವಾದ ಹಾಗೂ ಮರುಪರೀಕ್ಷೆಯ ಒತ್ತಡಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ ಆಕಾಂಕ್ಷಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ರಾಜ್ಯದಲ್ಲಿ ನೀಟ್ ಪರೀಕ್ಷೆ ವಿರುದ್ಧದ ಹೋರಾಟವನ್ನು ಮತ್ತೆ ಕಿಡಿಕಾರಿಸಿದೆ. ಮೃತ ವಿದ್ಯಾರ್ಥಿನಿಯನ್ನು ಅನುಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದು, ಈ ವರ್ಷ ಮೂರನೇ ಬಾರಿಗೆ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣವೇನು? ಇತ್ತೀಚೆಗೆ ನಡೆದ […]
ಭಾರತದಲ್ಲಿ AI ಕ್ರಾಂತಿ: ಉದ್ಯೋಗ ಕಡಿತವಲ್ಲ, ಕೆಲಸದ ಸ್ವರೂಪವೇ ಬದಲು

ಬೆಂಗಳೂರು: ತಂತ್ರಜ್ಞಾನ ಲೋಕದಲ್ಲಿ ದಿನದಿಂದ ದಿನಕ್ಕೆ ಸಂಭವಿಸುತ್ತಿರುವ ಆವಿಷ್ಕಾರಗಳು ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗಳನ್ನು ತರುತ್ತಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI – Artificial Intelligence) ತಂತ್ರಜ್ಞಾನದ ಪ್ರಭಾವದಿಂದಾಗಿ, ಜಾಗತಿಕ ಮಟ್ಟಕ್ಕಿಂತಲೂ ಅತ್ಯಂತ ವೇಗವಾಗಿ ಭಾರತದ ಆರಂಭಿಕ ಹಂತದ (Entry-level) ಉದ್ಯೋಗಗಳು ಬದಲಾಗುತ್ತಿವೆ. ಪ್ರಮುಖ ಐಟಿ ದೈತ್ಯ ಸಂಸ್ಥೆ ‘ಕಾಗ್ನಿಜೆಂಟ್’ ಮತ್ತು ಜಾಗತಿಕ ಶಿಕ್ಷಣ ಸಂಸ್ಥೆ ‘ಪಿಯರ್ಸನ್’ ಜಂಟಿಯಾಗಿ ನಡೆಸಿ ಬಿಡುಗಡೆ ಮಾಡಿರುವ ನೂತನ ಅಧ್ಯಯನ ವರದಿ ಈ ಆಘಾತಕಾರಿ ಹಾಗೂ ಆಶಾದಾಯಕ ಅಂಶಗಳನ್ನು ಬಹಿರಂಗಪಡಿಸಿದೆ. […]
ಬಿಗ್ ಬಾಸ್ ಕನ್ನಡ 13: ಸಾಮಾನ್ಯರಿಗೂ ಇದೆ ಸುವರ್ಣಾವಕಾಶ; ಆಡಿಷನ್ ವಿಡಿಯೊ ಸಲ್ಲಿಸಲು ಜೂನ್.21 ಕೊನೆಯ ದಿನ!

ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಅಂಗಳದಲ್ಲಿ ಹೊಸದೊಂದು ಸಂಚಲನ ಶುರುವಾಗಿದೆ. ಈ ಬಾರಿಯ ಸೀಸನ್ ಕೇವಲ ಸೆಲೆಬ್ರಿಟಿಗಳಿಗಷ್ಟೇ ಸೀಮಿತವಾಗಿರದೆ, ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಯೊಳಗೆ ಅಡಿಯಿಡುವ ಅಪರೂಪದ ವೇದಿಕೆಯನ್ನು ಕಲ್ಪಿಸಿಕೊಟ್ಟಿರುವುದು ಇಡೀ ಶೋನ ಕುತೂಹಲವನ್ನು ದುಪ್ಪಟ್ಟುಗೊಳಿಸಿದೆ. ಜೂನ್ 21ರೊಳಗೆ ಅರ್ಜಿ ಸಲ್ಲಿಸಿ: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲು ಬಯಸುವ ಆಸಕ್ತ ಜನಸಾಮಾನ್ಯರಿಗೆ ವಾಹಿನಿಯು ವಿಡಿಯೊ ಕಳುಹಿಸಲು ಕಡೆಯ ದಿನಾಂಕವನ್ನು ನಿಗದಿಪಡಿಸಿದೆ. ಆಡಿಷನ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು ಜೂನ್ […]
ರಾಯಚೂರಲ್ಲಿ 15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗಲೇ ಶಿಕ್ಷಣ ಇಲಾಖೆಯ ಎಫ್ ಡಿ ಎ ಲೋಕಾಯುಕ್ತ ಬಲೆಗೆ

ರಾಯಚೂರು: ಲಂಚದ ಆಮಿಷಕ್ಕೆ ಬಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (FDA) ಮಹಾಬಲೇಶ್, ಲೋಕಾಯುಕ್ತ ಪೊಲೀಸರು ಹೆಣೆದಿದ್ದ ಪ್ಲಾನ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಗರದ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿರುವ ಡಿಡಿಪಿಐ ಕಚೇರಿಯಲ್ಲಿಯೇ ಈ ಭ್ರಷ್ಟಾಚಾರ ನಿಗ್ರಹ ಕಾರ್ಯಾಚರಣೆ ನಡೆದಿದೆ. ರೂ. 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಅಸಾಮಿ: ಖಾಸಗಿ ಶಾಲೆಯೊಂದರ ನವೀಕರಣದ (Renewal) ಕಡತ ವಿಲೇವಾರಿ ಮಾಡಿಕೊಡಲು ಎಫ್‌ಡಿಎ ಮಹಾಬಲೇಶ್ ಅವರು ದೂರುದಾರರಾದ ಸಿದ್ದಣ್ಣ ಎಂಬುವವರಿಂದ 25,000 ರೂಪಾಯಿ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. […]
ವಿಧಾನ ಪರಿಷತ್ ಚುನಾವಣೆ: ಯತ್ನಾಳ್ ಮತ ರದ್ದುಪಡಿಸಲು ಕೋರಿದ್ದ ಕಾಂಗ್ರೆಸ್ ಅರ್ಜಿ ತಿರಸ್ಕಾರ!

ಬೆಂಗಳೂರು: ವಿಧಾನಪರಿಷತ್ತಿನ 7 ಸ್ಥಾನಗಳಿಗೆ ನಡೆದ ಮತದಾನದ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವೋಟ್ ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ನಡೆಸಿದ್ದ ಪ್ರಯತ್ನ ವಿಫಲವಾಗಿದೆ. ಕೈ ಪಾಳಯ ನೀಡಿದ್ದ ದೂರನ್ನು ಚುನಾವಣಾಧಿಕಾರಿಗಳು ಅಧಿಕೃತವಾಗಿ ತಳ್ಳಿಹಾಕಿದ್ದಾರೆ. ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದಾಗ ಶಾಸಕ ಯತ್ನಾಳ್ ಅವರು ನಿಯಮಾವಳಿಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕರು, ತಕ್ಷಣವೇ ಅವರ ಮತವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ದೂರು ಸಲ್ಲಿಸಿದ್ದರು. ಚುನಾವಣಾಧಿಕಾರಿಗಳ ಸ್ಪಷ್ಟನೆ: ಕಾಂಗ್ರೆಸ್‌ನ ಆಕ್ಷೇಪಣೆಯನ್ನು […]
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಸೋಮಶೇಖರ್ ವೋಟ್; ಹೆಬ್ಬಾರ್ ಕೂಡ ‘ಆತ್ಮಸಾಕ್ಷಿ’ ಮತದಾನ!

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗೆ ತಾವು ಮತ ಹಾಕಿರುವುದಾಗಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಇದೇ ವೇಳೆ ಮತ್ತೊಬ್ಬ ಅತೃಪ್ತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ತಾವು ‘ಆತ್ಮಸಾಕ್ಷಿ ವೋಟ್’ ಚಲಾಯಿಸಿರುವುದಾಗಿ ಪ್ರಕಟಿಸಿದ್ದು, ಕೇಸರಿ ಪಡೆಗೆ ಭಾರಿ ಮುಖಭಂಗ ಉಂಟುಮಾಡಿದ್ದಾರೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್, “ನನ್ನ ವೋಟ್ ಕಾಂಗ್ರೆಸ್ ಪರ ಚಲಾವಣೆಯಾಗಿದೆ. ಈ ನಿರ್ಧಾರವನ್ನು ನಾನು ನನ್ನ […]