ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹ*ತ್ಯೆ!

ಮುಂಬೈ: ಹಿಂದಿ ಕಿರುತೆರೆಯ ಖ್ಯಾತ ಯುವ ನಟಿ ಸಂಚಿತಾ ಉಗಲೆ (Sanchita Ugale) ಅವರು ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಅವರ ಅಭಿಮಾನಿಗಳಲ್ಲಿ ಹಾಗೂ ಇಡೀ ಚಿತ್ರರಂಗದಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಘಟನೆಯ ವಿವರ: ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಅವರು ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಇದೇ ಸಂದರ್ಭವನ್ನು ಬಳಸಿಕೊಂಡ ನಟಿ ಸಂಚಿತಾ, […]
ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು […]
ಬೆಂಗಳೂರಲ್ಲಿ ಜ್ಯೂವೆಲರಿ ಶಾಪಿಗೆ ನುಗ್ಗಿ 30 ಸೆಕೆಂಡಿನಲ್ಲೇ 30 ಗ್ರಾಂ ಬಂಗಾರ ರಾಬರಿ: ಮೂವರು ಅರೆಸ್ಟ್

ಬೆಂಗಳೂರು ಗ್ರಾಮಾಂತರ: ಸಿನೆಮಾ ಶೈಲಿಯಲ್ಲಿ ಚಾಕು ಹಿಡಿದು ಜ್ಯುವೆಲರಿ ಶಾಪ್‌ಗೆ ನುಗ್ಗಿ, ಕೇವಲ 30 ಸೆಕೆಂಡ್‌ಗಳಲ್ಲಿ ದರೋಡೆ ನಡೆಸಿ ಪರಾರಿಯಾಗಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ನೆಲಮಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಎಂಬಲ್ಲಿ ಕಳೆದ ಮೇ 30 ರಂದು ಈ ಭೀಕರ ದರೋಡೆ ಪ್ರಕರಣ ನಡೆದಿತ್ತು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅಂಗಡಿ ಮಾಲೀಕರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನಾಭರಣ ದೋಚಿದ್ದರು. ಸಿಸಿಟಿವಿಯಲ್ಲಿ ಸೆರೆಯಾಗಿತ್ತು 30 ಸೆಕೆಂಡ್‌ನ ದರೋಡೆ! ಮೇ 30 […]
ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ಬಿಡದಿ ಟೌನ್ ಶಿಫ್ ಯೋಜನೆ ಮಾಡಿದ್ದಾರೆ: HDK ಕಿಡಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಸರಕಾರಿ ರಿಯಲ್ ಎಸ್ಟೇಟ್ ಯೋಜನೆಯಾಗಿದೆ. ಇದು ಸಂಪೂರ್ಣವಾಗಿ ಹಣ ಲೂಟಿ ಮಾಡುವ ಯೋಚನೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಬಿಡದಿ ಟೌನ್‌ಶಿಪ್ ನಾಡಿನ ಹಿತಾಸಕ್ತಿ ಅಡಗಿಲ್ಲ. ಭೂ ಮಾಫಿಯ ಹಾಗೂ ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ಇದನ್ನು ರೂಪಿಸಲಾಗಿದೆ. ಹೀಗಾಗಿ ಇದನ್ನು ನಾನು ಸರಕಾರಿ ರಿಯಲ್ ಎಸ್ಟೇಟ್ ದಂಧೆ ಎಂದು ಕರೆಯುತ್ತೇನೆ ಎಂದು ಹೇಳಿದರು. ರಸ್ತೆಗಳಲ್ಲಿ ಮೊಣಕಾಲುದ್ದ […]
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮೇಜರ್ ಸರ್ಜರಿ: ಹೊಸದಾಗಿ ಅರ್ಜಿ ಸಲ್ಲಿಕೆ ಕಡ್ಡಾಯ; ಯಾರಿಗೆ ಸಿಗುತ್ತೆ? ಯಾರಿಗೆ ಕಟ್?

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯ ಉಚಿತ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮಹತ್ವದ ಸುದ್ದಿಯೊಂದಿದೆ. ಈ ಯೋಜನೆಗಳಲ್ಲಿ ಸೃಷ್ಟಿಯಾಗಿರುವ ನಕಲಿ ಫಲಾನುಭವಿಗಳ ಜಾಲಕ್ಕೆ ಮುಕ್ತಿ ಹಾಡಲು ಸರ್ಕಾರ ಸಜ್ಜಾಗಿದ್ದು, ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್ರಚಿಸಲು ತೀರ್ಮಾನಿಸಿದೆ. ಇನ್ಮುಂದೆ ಈ ಸೌಲತ್ತುಗಳು ಮುಂದುವರಿಯಬೇಕಾದರೆ ಹಾಲಿ ಗ್ರಾಹಕರು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಕ್ರಮಗಳನ್ನು ತಡೆದು ಪಾರದರ್ಶಕತೆ ತರುವ ನಿಟ್ಟಿನಲ್ಲಿ ಮರು ಅರ್ಜಿ ಸಲ್ಲಿಸುವವರಿಗೆ ಹೊಸದಾಗಿ ‘ಗ್ಯಾರಂಟಿ ಕಾರ್ಡ್’ ವಿತರಿಸಲು ಮುಖ್ಯಮಂತ್ರಿ ಡಿ.ಕೆ. […]
ಈ ವರ್ಷ ನೇರಳೆ ಹಣ್ಣುಗಳ ವಿಪರೀತ ಫಸಲು – ಇದು ಏನನ್ನು ಸೂಚಿಸುತ್ತದೆ? ಇಲ್ಲಿದೆ ಮಾಹಿತಿ

ಈ ವರ್ಷ ಮಾರುಕಟ್ಟೆಯಲ್ಲಿ ಕಾಣುತ್ತಿರುವಷ್ಟು ನೇರಳೆ ಹಣ್ಣುಗಳನ್ನು ನಾನು ಕಳೆದ ಮೂರು ದಶಕಗಳಲ್ಲಿ ಎಂದೂ ನೋಡಿಲ್ಲ. ನೇರಳೆ ಹಣ್ಣುಗಳು ಅಕ್ಷರಶಃ ರಾಶಿ ರಾಶಿಯಾಗಿ ಬಿದ್ದಿವೆ. ಕಳೆದ ವರ್ಷ ತೀರಾ ಕಡಿಮೆ ಫಲ ಬಿಟ್ಟಿದ್ದ ಮರಗಳೂ ಈಗ ನೇರಳೆ ಹಣ್ಣಿನಿಂದ ತುಂಬಿ ನೆಲದ ಮೇಲೆ ಸುರಿಯುತ್ತಿವೆ. ಫಲ ಬಿಟ್ಟಿದ್ದ ಮರಗಳಲ್ಲಂತೂ ಹಣ್ಣಿನ ಸುರಿಮಳೆಯೇ ಆಗಿದೆ. ಇದು ನಿಖರವಾಗಿ ಏನಾಗುತ್ತಿದೆ? ನಮ್ಮ ಅಜ್ಜಿ ಯಾವಾಗಲೂ ಹೇಳುತ್ತಿದ್ದರು:“ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು ಹೀಗೆ ರಾಶಿ ರಾಶಿಯಾಗಿ ಬೀಳುತ್ತದೆಯೋ, ಆ ವರ್ಷ ಬರಗಾಲ […]
ರಾಜ್ಯದಲ್ಲಿ ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ ಕಡ್ಡಾಯ

ಬೆಂಗಳೂರು: ರಾಜ್ಯದ ಜನಪ್ರಿಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗಳನ್ನು ರದ್ದು ಮಾಡುವುದಿಲ್ಲ. ಆದರೆ, ಅನರ್ಹರನ್ನು ಕೈಬಿಟ್ಟು ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪಿಸಲು ಈ ಎರಡೂ ಗ್ಯಾರಂಟಿಗಳಿಗೆ ಸಾರ್ವಜನಿಕರು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಸಿಎಂ ಪ್ರಕಟಿಸಿದ್ದಾರೆ. ವಿವಿಧ ಜಿಲ್ಲೆಗಳ ಡಿಸಿ, ಎಸ್‌ಪಿ ಹಾಗೂ ಜಿಪಂ ಸಿಇಒಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ […]
ಬೆಂಗಳೂರಲ್ಲಿ ವರುಣನ ಆರ್ಭಟ: ಮುಂದಿನ 3 ಗಂಟೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾರಾಂತ್ಯದ ಸಂಜೆ ವರುಣನ ಅಬ್ಬರ ಜೋರಾಗಿದೆ. ನಗರದ ಹಲವು ಭಾಗಗಳಲ್ಲಿ ದಿಢೀರನೆ ಧಾರಾಕಾರ ಮಳೆ ಸುರಿದಿದ್ದು, ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ವಾಹನ ಸವಾರರು ರಸ್ತೆಯಲ್ಲೇ ಸಿಲುಕಿಕೊಳ್ಳುವಂತಾಗಿದೆ. ಮೆಟ್ರೋ ಸಿಟಿಯಾದ್ಯಂತ ವರುಣನ ದರ್ಶನ: ನಗರದ ಪಶ್ಚಿಮ ಮತ್ತು ಉತ್ತರ ಭಾಗಗಳಾದ ಮಲ್ಲೇಶ್ವರ, ರಾಜಾಜಿನಗರ, ಯಶವಂತಪುರ, ವಿಜಯನಗರ, ಪೀಣ್ಯ ಹಾಗೂ ಜಾಲಹಳ್ಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಕೆಲವೇ ನಿಮಿಷಗಳ ಮಳೆಗೆ ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಪ್ರಮುಖ […]
ಪತ್ನಿ ನೀಡುವ ಪೊಲೀಸ್ ದೂರು ‘ಕ್ರೌರ್ಯ’ ಎನಿಸುವುದಿಲ್ಲ; ಸುಳ್ಳು ಎಂದು ಸಾಬೀತಾಗುವುದು ಅತ್ಯಗತ್ಯ: ಮದ್ರಾಸ್ ಹೈಕೋರ್ಟ್

ವೈವಾಹಿಕ ವಿವಾದಗಳು ಮತ್ತು ವಿಚ್ಛೇದನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಒಂದು ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. “ಪತ್ನಿಯು ತನ್ನ ಪತಿ ಅಥವಾ ಆತನ ಕುಟುಂಬದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ತಕ್ಷಣ, ಅದನ್ನು ಪತಿಯ ವಿರುದ್ಧ ಎಸಗಿದ ‘ವೈವಾಹಿಕ ಕ್ರೌರ್ಯ’ (Marital Cruelty) ಎಂದು ಪರಿಗಣಿಸಲು ಸಾಧ್ಯವಿಲ್ಲ. ಆ ದೂರು ಕಾನೂನುಬದ್ಧವಾಗಿ ಸುಳ್ಳು ಎಂದು ಸಾಬೀತಾದರೆ ಮಾತ್ರ ಅದನ್ನು ಕ್ರೌರ್ಯ ಎಂದು ಕರೆಯಬಹುದು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಆರ್. ಸುಬ್ರಮಣಿಯನ್ ಮತ್ತು […]
ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಥ್ ನೇಮಕ

ನವದೆಹಲಿ: ಭಾರತೀಯ ಭೂಸೇನೆಯ ಮುಂದಿನ ಮುಖ್ಯಸ್ಥರಾಗಿ (Chief of the Army Staff) ಲೆಫ್ಟಿನೆಂಟ್ ಜನರಲ್ ಧೀರಜ್ ಸೇಥ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. ಪ್ರಸ್ತುತ ಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30 ರಂದು ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಧೀರಜ್ ಸೇಥ್ ಅವರು ನಿಯೋಜನೆಗೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಕ್ಷಣಾ ಸಚಿವಾಲಯವು, ಪ್ರಸ್ತುತ ವೈಸ್ ಚೀಫ್ ಆಗಿ ಕಾರ್ಯನಿರ್ವಹಿಸುತ್ತಿರುವ ಲೆಫ್ಟಿನೆಂಟ್ ಜನರಲ್ […]