ಸಾವಿನ ವದಂತಿಯಿಂದ ಆತಂಕ; ಆಂಜನೇಯನ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ನಟ ದೊಡ್ಡಣ್ಣ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದವು. ಈ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ದೊಡ್ಡಣ್ಣ ಅವರು ತಮ್ಮ ಕುಟುಂಬದವರೊಂದಿಗೆ ಮಹಾಲಕ್ಷ್ಮಿ ಲೇಔಟ್‌ನ ಪ್ರಸಿದ್ಧ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಡೆದಿದ್ದೇನು? ಶುಕ್ರವಾರ ಬೆಳಗ್ಗೆ ಕಿಡಿಗೇಡಿಗಳ ಗುಂಪೊಂದು ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಆಪ್ತರು ಹಾಗೂ […]
ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್ ಆಹ್ವಾನ

ಬೆಂಗಳೂರು: ನಗರದ ಉಪನಗರ ರೈಲು ಸೇವೆಗಳ ಕಾರ್ಯಾಚರಣೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿರುವ ಸೋಲದೇವನಹಳ್ಳಿ ರೈಲು ನಿರ್ವಹಣಾ ಘಟಕದ (Train Maintenance Depot) ನಿರ್ಮಾಣಕ್ಕಾಗಿ ಬೆಂಗಳೂರು ಇಂಟಿಗ್ರೇಟೆಡ್ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸಸ್ (Bi-RIDE) ಟೆಂಡರ್ ಆಹ್ವಾನಿಸಿದೆ. ಬೆಂಗಳೂರು ಉಪನಗರ ರೈಲು ಯೋಜನೆಯ (BSTP) ಮಹತ್ವದ ಮೈಲಿಗಲ್ಲಾಗಿರುವ ಈ ನಿರ್ವಹಣಾ ಘಟಕದ ಟೆಂಡರ್‌ಗೆ ಜಿಎಸ್‌ಟಿ (GST) ಹೊರತುಪಡಿಸಿ ₹200.03 ಕೋಟಿ ನಿಗದಿಪಡಿಸಲಾಗಿದೆ. ಹಾಗೆಯೇ, ಈ ಟೆಂಡರ್ ಕಾಮಗಾರಿಗೆ ಬಿಡ್ ಸಲ್ಲಿಸಲು ಆಗಸ್ಟ್ 12, 2026 ಕಡೆಯ ದಿನಾಂಕವಾಗಿದೆ. ಚೆನ್ನೈನ ಇಂಟೆಗ್ರಲ್ […]
ಶೀಘ್ರವೇ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭ; ಸಾರಿಗೆ ಸಚಿವ ಭೈರತಿ ಸುರೇಶ್

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ […]
2027ರ ಏಕದಿನ ವಿಶ್ವಕಪ್ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ನಿಗದಿ: ಆಫ್ರಿಕಾ ಖಂಡದಲ್ಲಿ ಜಾಗತಿಕ ಟೂರ್ನಿ!

ದುಬೈ: ವಿಶ್ವದಾದ್ಯಂತ ಇರುವ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ (ICC ODI World Cup) ಮಹಾಸಮರಕ್ಕೆ ತಾತ್ಕಾಲಿಕ ದಿನಾಂಕಗಳು ನಿಗದಿಯಾಗಿವೆ. ಪ್ರತಿಷ್ಠಿತ ಈ ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ಜಂಟಿಯಾಗಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ದೇಶಗಳಲ್ಲಿ ನಡೆಯಲಿದೆ ಎಂದು ‘ಇಎಸ್‌ಪಿಎನ್ ಕ್ರಿಕ್‌ಇನ್ಫೋ’ ವರದಿ ಮಾಡಿದೆ. ಕಳೆದ ಮೇ ತಿಂಗಳಲ್ಲಿ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ (ICC) ಬೋರ್ಡ್ ಸಭೆಯಲ್ಲಿ ಈ ದಿನಾಂಕಗಳ ಕುರಿತು ಸಹಮತ […]
ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯಷ್ಟೇ, ಸ್ಥಗಿತವಿಲ್ಲ: MLC ದಿನೇಶ್ ಗೂಳಿಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು […]
ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸರ್ಕಾರಕ್ಕೆ ಸಚಿವ ಎಂ.ಬಿ.ಪಾಟೀಲ ಪತ್ರ

ಬೆಂಗಳೂರು: ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ಉಡಾನ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು. ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಸಂಬಂಧವಾಗಿ ಅವರು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತು. ಇದಾದ ಮೇಲೆ ಇಂಡಿಗೋ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ […]
ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ!

ಮಂಡ್ಯ: ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮಳೆಯ ಅಭಾವದಿಂದಾಗಿ ಸಕ್ಕರೆ ನಾಡಿನ ಜೀವನಾಡಿ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಒಣಗುತ್ತಿದ್ದು, ಬರಿದಾಗುವ ಹಂತ ತಲುಪಿದೆ. ಜೂನ್ ತಿಂಗಳು ಆರಂಭವಾದರೂ ವರುಣದೇವ ಕೃಪೆ ತೋರದಿರುವುದು ಕೃಷಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ದಾಖಲೆಯ ರಣ ಬಿಸಿಲಿನ ಬೆನ್ನಲ್ಲೇ ಮುಂಗಾರು ಮಳೆಯೂ ಕೈಕೊಟ್ಟಿರುವುದರಿಂದ ಜಲಾಶಯದ ಒಳಹರಿವು ಸಂಪೂರ್ಣವಾಗಿ ಕುಸಿದಿದೆ. ಸದ್ಯ ಹನಿ ಹನಿಯಾಗಿ ನೀರು ಖಾಲಿಯಾಗುತ್ತಿರುವುದು ರೈತರ ನಿದ್ದೆ ಗೆಡಿಸಿದೆ. ಬಂಡೆಗಳು, […]
ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ನಾಮಪತ್ರ ವಾಪಸ್ ಪಡೆಯಲು ನಿಗದಿಪಡಿಸಲಾಗಿದ್ದ ಕಡೆಯ ದಿನವಾದ ಇಂದು, ಕಣದಲ್ಲಿದ್ದ ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣಾಧಿಕಾರಿಗಳು ಅಂತಿಮಗೊಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅಧಿಕೃತವಾಗಿ ಸಂಸತ್ ಪ್ರವೇಶಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ನಾಲ್ಕೂ ಜನ ನಾಯಕರ ಅವಿರೋಧ ಆಯ್ಕೆಯನ್ನು ಪ್ರಕಟಿಸಿ, ಅವರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಮೇಲ್ಮನೆ ಪ್ರವೇಶಿಸಿದ ನೂತನ ಸದಸ್ಯರು: ಟ್ವಿಸ್ಟ್ ಕೊಟ್ಟ […]
ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿಯ ವಿದ್ಯುತ್ ಮಾರಾಟ: ಕರ್ನಾಟಕ ಇಂಧನ ಇಲಾಖೆ ಭರ್ಜರಿ ಲಾಭ- ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಕರ್ನಾಟಕ ರಾಜ್ಯವು ವಿದ್ಯುತ್ ವಲಯದಲ್ಲಿ ಅಭೂತಪೂರ್ವ ಆರ್ಥಿಕ ಯಶಸ್ಸು ಸಾಧಿಸಿದೆ. ಕಳೆದ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ಹೆಚ್ಚುವರಿ ವಿದ್ಯುತ್ತನ್ನು ರಾಷ್ಟ್ರೀಯ ಗ್ರಿಡ್‌ಗೆ ಮಾರಾಟ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ₹423 ಕೋಟಿ ಆದಾಯ ಹರಿದುಬಂದಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಎರಡನೇ ಬಾರಿಗೆ ಇಂಧನ ಖಾತೆ ವಹಿಸಿಕೊಂಡ ಸಚಿವರು, ಬೆಸ್ಕಾಂ ಪ್ರಧಾನ ಕಚೇರಿಯಲ್ಲಿ ಉನ್ನತಾಧಿಕಾರಿಗಳ ಪ್ರಥಮ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ […]
ದೇಶದ ಉಕ್ಕು ವಲಯದಲ್ಲಿ ಹೊಸ ಕ್ರಾಂತಿ: ಐಐಟಿ ರೂರ್ಕಿ ಮತ್ತು ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ನಡುವೆ ಐತಿಹಾಸಿಕ ಒಪ್ಪಂದ!

ಬೆಂಗಳೂರು: ಭಾರತದ ಉತ್ಪಾದನೆ ಮತ್ತು ಉಕ್ಕಿನ ತಂತ್ರಜ್ಞಾನವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ದೇಶದ ಎರಡು ಪ್ರಮುಖ ಸಂಸ್ಥೆಗಳು ಮಹತ್ವದ ಹೆಜ್ಜೆ ಇಟ್ಟಿವೆ. ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ದೈತ್ಯ ಎನಿಸಿಕೊಂಡಿರುವ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ (AM/NS India) ಮತ್ತು ದೇಶದ ಹೆಮ್ಮೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ‘ಐಐಟಿ ರೂರ್ಕಿ’ (IIT Roorkee) ಜಂಟಿ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯನ್ನು (Innovation) ಅಭಿವೃದ್ಧಿಪಡಿಸುವುದು ಈ ಸಹಭಾಗಿತ್ವದ ಮುಖ್ಯ ಉದ್ದೇಶವಾಗಿದೆ. ಕೈಗಾರಿಕಾ […]