ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ: ಈಶ್ವರ ಖಂಡ್ರೆ

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವ ಹಾಗೂ ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಂಪುಟಕ್ಕೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ಮುಖಂಡ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಮೇಲೆ ಮತ್ತೊಮ್ಮೆ ವಿಶ್ವಾಸವಿಟ್ಟು ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ […]

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಜಿ. ಪರಮೇಶ್ವರ್ ಏಕೈಕ ಡಿಸಿಎಂ

ಬೆಂಗಳೂರು: ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಒಟ್ಟು 13 ಮಂದಿ ಹಿರಿಯ ನಾಯಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸಸ್ಪೆನ್ಸ್‌ಗೆ ತೆರೆ: ಡಾ. ಜಿ. ಪರಮೇಶ್ವರ್ ಏಕೈಕ ಉಪಮುಖ್ಯಮಂತ್ರಿ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ಪಬ್ಲಿಕ್‌ […]

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ, ಡಿಕೆಶಿಯಿಂದಲೂ ಅಭಿವೃದ್ಧಿ ಅಸಾಧ್ಯ: ಬಿವೈ ವಿಜಯೇಂದ್ರ

ಬೀದರ್: ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಪರಿಣಾಮ ಒಂದು ಕಡೆ ಆಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಇಂದು ಉತ್ತರ ನೀಡಿದ ಅವರು, ಅಧಿಕಾರದ ಮದ ನೆತ್ತಿಗೇರಿದಾಗ ಹೀಗೆಲ್ಲ ಮಾಡಿಸುತ್ತದೆ ಎಂದು ಟೀಕಿಸಿದರು. ಆಳಂದದಲ್ಲಿ ಕೇಸುಗಳನ್ನು ಹಿಂಪಡೆದಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡಿ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಡಿ.ಕೆ.ಶಿವಕುಮಾರ್ […]

ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಹೊಸ ಶೈಕ್ಷಣಿಕ ಸಾಲು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ವಿದ್ಯಾರ್ಥಿಗಳಿಗೆ ರಿಯಾಯಿತಿ ಹಾಗೂ ಉಚಿತ ಬಸ್ ಪಾಸುಗಳನ್ನು ವಿತರಿಸುವ ಪ್ರಮುಖ ಪ್ರಕಟಣೆಯನ್ನು ಹೊರಡಿಸಿದೆ. 2026-27ನೇ ಸಾಲಿನ 1 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 30) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಜೂನ್ 1 ರಿಂದ ಪಾಸ್ ವಿತರಣೆ ಆರಂಭ ಪಾಸ್‌ಗಾಗಿ ಇಂದಿನಿಂದ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮುಂಬರುವ ಜೂನ್ 1 […]

ಮುಗಿದ ಶಾಸಕಾಂಗ ಸಭೆ, ಅಧಿಕಾರ ಗ್ರಹಣಕ್ಕೆ ಸಜ್ಜಾದ ಡಿಕೆಶಿ: ಜೂನ್ 3ರ ಪ್ರಮಾಣ ವಚನಕ್ಕೆ ರಾಜ್ಯಪಾಲರಿಗೆ ಆಹ್ವಾನ

ಬೆಂಗಳೂರು: ಕರ್ನಾಟಕದಲ್ಲಿ ಹೊಸ ಸರ್ಕಾರದ ಉದಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ರಾಜಭವನಕ್ಕೆ ಧಾವಿಸಿ ರಾಜ್ಯಪಾಲರನ್ನು ಭೇಟಿಯಾದರು. ಈ ಮೂಲಕ ರಾಜ್ಯದಲ್ಲಿ ಹೊಸ ಆಡಳಿತದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಅಧಿಕೃತವಾಗಿ ಹೆಜ್ಜೆ ಇಟ್ಟಿದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್‌ನ ಹಿರಿಯ ಶಾಸಕರ ಬೆಂಬಲವಿರುವ ಸಹಿ ಮಾಡಿದ ಒಮ್ಮತದ ಪತ್ರವನ್ನು ಹಸ್ತಾಂತರಿಸಲಾಯಿತು. ಇದೇ ವೇಳೆ, ಮುಂಬರುವ ಜೂನ್ 3ರಂದು ಆಯೋಜಿಸಲಾಗಿರುವ ನೂತನ […]

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಮಹತ್ವದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಭೆಯ ಆರಂಭ ಮತ್ತು ಹೈಕಮಾಂಡ್ ನಿರ್ಣಯ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಂಡಿದ್ದ ಶಾಸಕಾಂಗ ಪಕ್ಷದ ಸಭೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆರಂಭಿಕ ಚಾಲನೆ […]

ಹಂಪಿಯಲ್ಲಿ ಸ್ಟಾರ್ ಹೋಟೆಲ್ ಹೆಸರಲ್ಲಿ ಪ್ರವಾಸಿಗರ ಸುಲಿಗೆಗೆ ಇಳಿದ ಹೋಟೆಲ್: ₹20ರ ನೀರಿನ ಬಾಟಲಿ ರೂ.25+GSTಗೆ ಮಾರಾಟ!

ವಿಶ್ವ ಪಾರಂಪರಿಕ ತಾಣ, ಕಲೆ, ಸಾಹಿತ್ಯ ಮತ್ತು ಧಾರ್ಮಿಕ ನಂಬಿಕೆಗಳ ಪವಿತ್ರ ಕೇಂದ್ರವಾದ ಹಂಪಿ ಎಂದ ತಕ್ಷಣ ನಮಗೆ ನೆನಪಾಗುವುದು ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸ ಮತ್ತು ಅಲ್ಲಿನ ದೇವಸ್ಥಾನಗಳು. ದೇಶ-ವಿದೇಶಗಳಿಂದ ನಿತ್ಯ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಈ ಐತಿಹಾಸಿಕ ತಾಣಕ್ಕೆ ಭೇಟಿ ನೀಡುತ್ತಾರೆ. ಆದರೆ, ಇತ್ತೀಚೆಗೆ ಇಲ್ಲಿ ನಡೆದ ಒಂದು ಘಟನೆ “ಪವಿತ್ರ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ನಿರಂತರವಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆಯೇ?” ಎಂಬ ಗಂಭೀರ ಪ್ರಶ್ನೆಯನ್ನು ಸಾರ್ವಜನಿಕ ವಲಯದಲ್ಲಿ ಹುಟ್ಟುಹಾಕಿದೆ. ಘಟನೆಯ […]

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 30,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಭರ್ತಿಯಾಗುವವರೆಗೆ ಅಥವಾ ಮುಂದಿನ ವರ್ಷದ ಮಾರ್ಚ್‌ (2027) ವರೆಗೆ ಶೈಕ್ಷಣಿಕ ವ್ಯವಸ್ಥೆಯನ್ನು ಸರಿದೂಗಿಸಲು ಒಟ್ಟು 40,000 ಅತಿಥಿ ಶಿಕ್ಷಕರನ್ನು ಬಳಸಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿತ್ತು. ಇದರ ಮೊದಲ ಹಂತವಾಗಿ, ಸದ್ಯ ಖಾಲಿ ಇರುವ ಪಿ.ಎಸ್.ಟಿ ಹಾಗೂ ಜಿ.ಪಿ.ಟಿ ವೃಂದದ 33,708 ಹುದ್ದೆಗಳ ಪೈಕಿ 30,337 ಜಾಗಗಳಿಗೆ ಜಿಲ್ಲೆ ಮತ್ತು ತಾಲ್ಲೂಕುವಾರು ಹಂಚಿಕೆ ಮಾಡಲಾಗುತ್ತಿದೆ. ಆಯ್ಕೆಯಾಗುವ ಶಿಕ್ಷಕರು ಜೂನ್ 1, 2026 ರಿಂದಲೇ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದ್ದಾರೆ. ಮುಖ್ಯ ಶಿಕ್ಷಕರಿಗೇ ಆಯ್ಕೆಯ ಹೊಣೆ; […]

ಭೀಮಾತೀರದಲ್ಲಿ ರಕ್ತದೋಕುಳಿ: ಆಸ್ತಿ ವಿವಾದಕ್ಕೆ ಆರು ಜನರನ್ನು ಗುಂಡಿಕ್ಕಿ ಹ*ತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿಸಿದ್ದು, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಗುಂಡಿಕ್ಕಿ ಹ*ತ್ಯೆ ಮಾಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ದಾಳಿಕೋರರ ಕ್ರೌರ್ಯಕ್ಕೆ ಇಡೀ ಗ್ರಾಮವೇ ನಡುಗಿದ್ದು, ಭೀಮಾತೀರದಲ್ಲಿ ಮತ್ತೆ ಹಳೇ ಹಗೆತನ ಹಾಗೂ ರಕ್ತಪಾತದ ನೆರಳು ಆವರಿಸುವಂತೆ ಮಾಡಿದೆ. ಮೃ*ತರ ವಿವರ: ಗುಂಡಿನ ದಾಳಿಗೆ ಬಲಿಯಾದವರನ್ನು ಗೋವಿಂದಪುರ ಗ್ರಾಮದ ಒಂದೇ ಕುಟುಂಬದ ಸದಸ್ಯರು ಹಾಗೂ ಅವರ ಆಪ್ತರು […]

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

ಬೆಂಗಳೂರು: ತಂತ್ರಜ್ಞಾನ ಮತ್ತು ‘ಕೃತಕ ಬುದ್ಧಿಮತ್ತೆ’ (ಎಐ) ಬಳಕೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತಲೂ ವೇಗವಾಗಿ ಮುನ್ನುಗ್ಗುತ್ತಿದೆ. ‘ICRIER-ಪ್ರೊಸಸ್ ಸೆಂಟರ್’ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯಾಸ್ ಡಿಜಿಟಲ್ ಎಕಾನಮಿ’ (ಸೈಡ್‌ 2026) ವರದಿಯು, ಭಾರತದ ಈ ಅದ್ಭುತ ಡಿಜಿಟಲ್ ಕ್ರಾಂತಿಯನ್ನು ಜಗತ್ತಿಗೆ ಪರಿಚಯಿಸಿದೆ. ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಐದನೇ ಸ್ಥಾನ ಜಾಗತಿಕ ಜಿಡಿಪಿಯಲ್ಲಿ ಶೇ. 96ರಷ್ಟು ಪಾಲು ಹೊಂದಿರುವ ವಿಶ್ವದ 71 ದೇಶಗಳ ಡಿಜಿಟಲ್ ಬೆಳವಣಿಗೆಯನ್ನು ಈ ವರದಿಯಲ್ಲಿ ಪರಾಮರ್ಶೆ ಮಾಡಲಾಗಿದೆ. 2025ರಲ್ಲಿ ಜಾಗತಿಕ ಡಿಜಿಟಲ್ […]