ಕಾಂಗ್ರೆಸ್‌ನಲ್ಲಿ ಡಿಕೆಶಿ ಆಪರೇಷನ್ ಕ್ಲೀನ್: ಸಭೆಗೆ ಗೈರಾದ ಭಾವನಾ ರಾಮಣ್ಣ ಸೇರಿ 30ಕ್ಕೂ ಹೆಚ್ಚು ನಾಯಕರು ಪಕ್ಷದ ಹುದ್ದೆಗಳಿಂದ ದಿಢೀರ್ ವಜಾ!

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹರಿತವಾದ ಚಾಟಿ ಬೀಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತ ಪ್ರಮುಖ ಸಭೆಗೆ ಗೈರುಹಾಜರಾಗಿ ಬೇಜವಾಬ್ದಾರಿತನ ತೋರಿದ ಕೆಪಿಸಿಸಿ ಪದಾಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹುದ್ದೆಯಿಂದ ಕಿತ್ತೊಗೆಯುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಲಾ ಅವರ ಖಡಕ್ ಸೂಚನೆ ಬೆನ್ನಲ್ಲೇ ಈ ಬೃಹತ್ ಆಪರೇಷನ್ ನಡೆದಿದ್ದು, ಕೈ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. […]
ಚಿನ್ನದ ದರದಲ್ಲಿ ಸಾರ್ವಕಾಲಿಕ ಕುಸಿತ: ಸದ್ಯಕ್ಕೆ ಬಂಗಾರ ಖರೀದಿಸುವುದು ಲಾಭದಾಯಕವೇ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

ಮಧ್ಯಮ ವರ್ಗದ ಜನರಿಗೆ ಮತ್ತು ಆಭರಣ ಪ್ರಿಯರಿಗೆ ಇಲ್ಲಿದೆ ಒಂದು ಬಿಗ್ ಬ್ರೇಕಿಂಗ್ ನ್ಯೂಸ್. ಕಳೆದ ಕೆಲವು ತಿಂಗಳುಗಳಿಂದ ಗಗನಕ್ಕೇರಿ ಆಕಾಶ ನೋಡುತ್ತಿದ್ದ ಚಿನ್ನದ ಬೆಲೆ, ಜಾಗತಿಕ ಮಾರುಕಟ್ಟೆಯ ದಿಢೀರ್ ಬದಲಾವಣೆಯಿಂದಾಗಿ ನೆಲಕಚ್ಚಿದೆ. ಹಳದಿ ಲೋಹದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ ಬರೋಬ್ಬರಿ 2,800 ರೂಪಾಯಿಗಳಷ್ಟು ದಾಖಲೆಯ ಕುಸಿತ ಕಂಡಿದ್ದು, ಸದ್ಯ ಅಪರಂಜಿ ಚಿನ್ನದ (24 ಕ್ಯಾರೆಟ್) ಬೆಲೆ 1,62,000 ರೂಪಾಯಿ ತಲುಪಿದೆ. ಬಂಗಾರದ ದರ ಒಂದೇ ಸಮನೆ ಇಷ್ಟೊಂದು ಕುಸಿಯಲು ಜಾಗತಿಕ ಮಟ್ಟದಲ್ಲಿ ನಡೆದಿರುವ ಆ […]
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 13 ಸಾವಿರ ಜನರಿಗೆ ಕೋಟ್ಯಂತರ ವಂಚನೆ: ತಮಿಳುನಾಡು ಮೂಲದ ಕಿಂಗ್‌ಪಿನ್ ದಾವಣಗೆರೆ ಪೊಲೀಸರ ವಶಕ್ಕೆ

ದಾವಣಗೆರೆ: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸಿಇಎನ್ (ಸೈಬರ್ ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧಗಳು) ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ನಿವಾಸಿಯಾದ ಚೆಲ್ಲಪಂಡಿ ಸುಬ್ರಹ್ಮಣಿ (42) ಬಂಧಿತ ಮುಖ್ಯ ಆರೋಪಿಯಾಗಿದ್ದಾನೆ. ಈ ವಂಚನೆ ಜಾಲದಲ್ಲಿ ಭಾಗಿಯಾಗಿರುವ ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ವಂಚನೆಯ […]
The Founding of YouTube A Short History
YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing […]
ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಅವರಿಂದ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ, ಜೂನ್ 1 ರಂದು ಶಿವಮೊಗ್ಗದಲ್ಲಿ ನೂತನ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ (KPS) ಕಟ್ಟಡಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಪ್ರಾಂಶುಪಾಲರು, ಬಿ.ಇ.ಒ (BEO) ಹಾಗೂ ಎಸ್.ಡಿ.ಎಂ.ಸಿ (SDMC) ಸದಸ್ಯರೊಂದಿಗೆ ನಡೆಸಿದ […]
ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯದ ಅಧ್ಯಕ್ಷರು ಹಾಗೂ ಕೇಂದ್ರದ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದ ಮೇರೆಗೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಹಾಗೂ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್ಎಂ ರಮೇಶ್ ಗೌಡರು ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಪತ್ರಗಳನ್ನು ಹಸ್ತಾಂತರ ಮಾಡಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮುಂದಿನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು. ವಿವಿಧ ವಿಭಾಗಗಳ ಅಧ್ಯಕ್ಷರು: ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶೈಲಾ ಸಂತೋಜಿ […]
ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ”ವನ್ನು ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತ್ವರಿತ […]
ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ ಜಿಎಸ್‌ಟಿ ಕೈಬಿಡಿ: ನಿರ್ಮಲಾ ಸೀತಾರಾಮನ್ ಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು, ಮೇ 25: ವಿಶೇಷಚೇತನರು ಸ್ವತಂತ್ರ ಜೀವನ ನಡೆಸಲು ಸಹಾಯವಾಗುವ ಎಲ್ಲಾ ಸಾಧನ, ಸಲಕರಣೆಗಳ ಮೇಲಿನ ಜಿಎಸ್‌ಟಿ ವಿನಾಯಿತಿ ನೀಡುವಂತೆ ಇಲ್ಲವೇ ಜಿಎಸ್‌ಟಿಯನ್ನು ಸಂಪೂರ್ಣ ಮನ್ನಾ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಪತ್ರ ಬರೆದಿದ್ದಾರೆ. ವಿಶೇಷಚೇತನರಿಗೆ ಅಗತ್ಯವಾದ ಸಹಾಯಕ ಸಾಧನಗಳು, ಪುನರ್ವಸತಿ ಸಾಧನಗಳು, ಸಲಕರಣೆಗಳ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತದೆ. ಈ ಸಾಧನಗಳು ಐಷಾರಾಮಿ ವಸ್ತುಗಳಲ್ಲ, ಬದಲಾಗಿ ಅನಿವಾರ್ಯ ಅವಶ್ಯಕತೆಗಳಾಗಿದ್ದು ಜಿಎಸ್‌ಟಿ ವಿನಾಯಿತಿ ಅಥವಾ ಸಂಪೂರ್ಣ […]
ಜೂನ್ 1 ರಿಂದ ಹೊಸ ಶೈಕ್ಷಣಿಕ ವರ್ಷದ ಆರಂಭ: ದಾಖಲಾತಿ ಹೆಚ್ಚಳಕ್ಕೆ, ಕಲಿಕಾ ಸುಧಾರಣೆಗೆ ಇಲಾಖೆಯ ಹೊಸ ಮಾಸ್ಟರ್ ಪ್ಲಾನ್

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ವಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 1 ರಿಂದ ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ವ್ಯವಸ್ಥಿತವಾಗಿ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಹೊಸ ವರ್ಷದ ಪ್ರವೇಶಾತಿ ಪ್ರಕ್ರಿಯೆಗಳು ಜೂನ್ ತಿಂಗಳ ಪೂರ್ತಿ ನಡೆಯಲಿದ್ದು, ಇದಕ್ಕಾಗಿ ಮೇ 29 ರಂದೇ ಶಿಕ್ಷಕರು ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಮಳೆಗಾಲದ […]
ಪಾದಗಳ ಊತವನ್ನು ಲಘುವಾಗಿ ತಗೋಬೇಡಿ; ಇದು ಹೃದಯ ವೈಫಲ್ಯದ ಮೂಕ ಸಂಕೇತವಾಗಿರಬಹುದು!

ದಿನವಿಡೀ ಓಡಾಡುವ ನಮಗೆ ಸಂಜೆಯಾಗುವಾಗ ಪಾದಗಳು ಅಥವಾ ಹಿಮ್ಮಡಿಯ ಮೇಲ್ಭಾಗ (Ankles) ಕೊಂಚ ಬಾತುಕೊಂಡಂತೆ (ಊತ) ಅನಿಸುವುದು ಸಾಮಾನ್ಯ. ಸುದೀರ್ಘ ಪ್ರಯಾಣ ಮಾಡಿದಾಗ, ಹೆಚ್ಚು ಹೊತ್ತು ಒಂದೇ ಕಡೆ ಕುಳಿತಾಗ ಅಥವಾ ನಿಂತಾಗ ಹೀಗಾಗುವುದು ಸಹಜ ಎಂದು ನಾವು ಭಾವಿಸುತ್ತೇವೆ. ಆದರೆ, ವೈದ್ಯಕೀಯ ಸಂಶೋಧನೆಗಳ ಪ್ರಕಾರ, ಪಾದದ ಕೀಲುಗಳಲ್ಲಿ ಕಾಣಿಸಿಕೊಳ್ಳುವ ನಿರಂತರ ಊತ ಅಥವಾ ಬದಲಾವಣೆಗಳು ಕೇವಲ ದಣಿವನ್ನು ಸೂಚಿಸುವುದಿಲ್ಲ. ಬದಲಿಗೆ, ಅವು ದೇಹದ ಒಳಗಿರುವ ಎರಡು ಮಾರಣಾಂತಿಕ ಮತ್ತು ಪ್ರಾಣಾಪಾಯ ತರಬಲ್ಲ ಕಾಯಿಲೆಗಳ ಪ್ರಮುಖ ಮುನ್ಸೂಚನೆಗಳಾಗಿರಬಹುದು! […]