ಕಾಗದದ ಮೇಲೆ 2,000 ಕೋಟಿ ವ್ಯವಹಾರ, ಲಾರಿಯಲ್ಲಿ ಬರೀ ಗಾಳಿ! ಬಯಲಾಯ್ತು ರಾಜ್ಯದ ಅತಿದೊಡ್ಡ ತೆರಿಗೆ ವಂಚನೆ ಜಾಲ!

ಬೆಂಗಳೂರು: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಸುಮಾರು 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಹಗರಣದ ತನಿಖೆಯ ಭಾಗವಾಗಿ ರಾಜ್ಯ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ್ದೆನ್ನಲಾದ ಪ್ರಸಿದ್ಧ ‘ನ್ಯಾಷನಲ್ ಟ್ರಾವೆಲ್ಸ್’ ಸಂಸ್ಥೆಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ನಕಲಿ ಬಿಲ್‌ಗಳ ಸಾಗಾಟಕ್ಕೆ ನ್ಯಾಷನಲ್ ಟ್ರಾವೆಲ್ಸ್‌ನ ಲಾರಿಗಳನ್ನು ಬಳಸಿಕೊಳ್ಳಲಾದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಾಂಶಗಳು: […]

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಖಾಸಗಿ ಬಸ್ ಪ್ರಯಾಣ ದರ ಭಾರಿ ಏರಿಕೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಿಸಿ ಈಗ ನೇರವಾಗಿ ಪ್ರಯಾಣಿಕರಿಗೆ ತಟ್ಟಲಾರಂಭಿಸಿದೆ. ಸತತವಾಗಿ ಹೆಚ್ಚುತ್ತಿರುವ ತೈಲ ಬೆಲೆಗಳಿಂದ ಕಂಗೆಟ್ಟಿರುವ ಕರ್ನಾಟಕದ ಖಾಸಗಿ ಬಸ್ ಮಾಲೀಕರ ಸಂಘವು ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಈ ಪರಿಷ್ಕೃತ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ತೈಲ ಬೆಲೆ ಏರಿಕೆಯೇ ದರ ಹೆಚ್ಚಳಕ್ಕೆ ಮುಖ್ಯ ಕಾರಣ ಕಳೆದ ಕೆಲವು ವಾರಗಳಿಂದ ಡೀಸೆಲ್ ದರದಲ್ಲಿ ಗಣನೀಯ ಏರಿಕೆಯಾಗುತ್ತಿರುವುದು ಸಾರಿಗೆ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಿದೆ. ಬಸ್ ನಿರ್ವಹಣಾ […]

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಬೆಂಗಳೂರು-ವಿಜಯಪುರ ವಿಶೇಷ ರೈಲು: ಸಚಿವ ಎಂ ಬಿ ಪಾಟೀಲ ಸಂತಸ

ಬೆಂಗಳೂರು: ವಿಜಯಪುರ ಮತ್ತು ಬೆಂಗಳೂರು ನಡುವೆ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಬೇಕು ಎಂಬ ತಮ್ಮ‌ ಮನವಿಗೆ ಕೇಂದ್ರ ಸರಕಾರ ಸ್ಪಂದಿಸಿರುವುದು ಸಂತಸ ತಂದಿದೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಹಾಯಕ ಸಚಿವ ವಿ.ಸೋಮಣ್ಣ ಅವರಿಗೆ ವಿಜಯಪುರ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳು ಸಲ್ಲುತ್ತವೆ. ಈ ರೈಲನ್ನು ಆದಷ್ಟು ತ್ವರಿತವಾಗಿ ಕಾಯಂ ರೈಲನ್ನಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ […]

ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ದರ ಏರಿಸಿ ಬಡವರ ಮೇಲೆ ಬರೆ: ಸಚಿವ ಈಶ್ವರ ಖಂಡ್ರೆ

ಬೀದರ್ : ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್.ಡಿ.ಎ. ಸರ್ಕಾರ, ಈಗ ಪ್ರತಿ ಲೀಟರ್ ಪೆಟ್ರೋಲ್ ಡೀಸೆಲ್ ದರವನ್ನು 3 ರೂ. ಹೆಚ್ಚಿಸಿದ್ದು ಬಡ, ಮಧ್ಯಮವರ್ಗದ ಮೇಲೆ ಗದಾ ಪ್ರಹಾರ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 12 ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ […]

ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ ಜೂನ್ 14ಕ್ಕೆ ಮುಂದಕ್ಕೆ: KEA

ಬೆಂಗಳೂರು: ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ ಗಳ ಪ್ರವೇಶ (ಪಿಜಿಸಿಇಟಿ) ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ.

CBSE 12ನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಇಂದು 12ನೇ ತರಗತಿಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಾಮಾನ್ಯವಾಗಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳಿಗೆ ತಮ್ಮ ರೋಲ್ ನಂಬರ್ (Roll Number) ಅತಿ ಅಗತ್ಯ. ಆದರೆ, ಒಂದು ವೇಳೆ ನಿಮ್ಮ ರೋಲ್ ನಂಬರ್ ಲಭ್ಯವಿಲ್ಲದಿದ್ದರೆ ಅಥವಾ ಮರೆತುಹೋಗಿದ್ದರೆ ಆತಂಕಪಡುವ ಅಗತ್ಯವಿಲ್ಲ. ರೋಲ್ ನಂಬರ್ ಇಲ್ಲದೆಯೂ ಫಲಿತಾಂಶ ಪಡೆಯಲು ಇರುವ ಸುಲಭ ಮಾರ್ಗಗಳು ಇಲ್ಲಿವೆ: 1. ಡಿಜಿಲಾಕರ್ (DigiLocker) ಮೂಲಕ ಫಲಿತಾಂಶ ರೋಲ್ ನಂಬರ್ ಇಲ್ಲದ ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಅತ್ಯಂತ ಸುರಕ್ಷಿತ ಮತ್ತು ಸುಲಭವಾದ […]

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಬಿಟ್ಟು ಕಡಿಮೆ ಮಾಡಿ

ಲೈಂಗಿಕ ಶಕ್ತಿ ಮತ್ತು ಆಸಕ್ತಿಯು ಕೇವಲ ವಯಸ್ಸಿನ ಮೇಲೆ ಅವಲಂಬಿತವಾಗಿಲ್ಲ, ಅದು ನಾವು ಅನುಸರಿಸುವ ಜೀವನಶೈಲಿಯ ಮೇಲೂ ನಿಂತಿದೆ. ಈ ಕೆಳಗಿನ ಅಭ್ಯಾಸಗಳು ನಿಮ್ಮ ಸಂಬಂಧ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು: 1. ಅತಿಯಾದ ಒತ್ತಡ (Excessive Stress) ಕೆಲಸದ ಒತ್ತಡ ಅಥವಾ ವೈಯಕ್ತಿಕ ಚಿಂತೆಗಳು ಲೈಂಗಿಕ ಆಸಕ್ತಿಯನ್ನು (Libido) ಕುಂಠಿತಗೊಳಿಸುತ್ತವೆ. ಒತ್ತಡ ಉಂಟಾದಾಗ ದೇಹವು ‘ಕಾರ್ಟಿಸೋಲ್’ ಎಂಬ ಹಾರ್ಮೋನ್ ಬಿಡುಗಡೆ ಮಾಡುತ್ತದೆ, ಇದು ಲೈಂಗಿಕ ಹಾರ್ಮೋನ್‌ಗಳ ಸಮತೋಲನವನ್ನು ತಪ್ಪಿಸುತ್ತದೆ. 2. ನಿದ್ರೆಯ ಕೊರತೆ […]

ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಶೃಂಗೇರಿ ಶಾಸಕ ಸ್ಥಾನ ಮರುಸ್ಥಾಪನೆ

ನವದೆಹಲಿ: ಚುನಾವಣಾ ಅಕ್ರಮಗಳ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ನಿಂದ ಅನರ್ಹಗೊಂಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಸಮಾಧಾನ ನೀಡಿದೆ. “ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ನಾವು ಬಿಡುವುದಿಲ್ಲ” ಎಂದು ಹೇಳುವ ಮೂಲಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ರಾಜೇಗೌಡರ ಶಾಸಕ ಸ್ಥಾನವನ್ನು ಸದ್ಯಕ್ಕೆ ಮರುಸ್ಥಾಪಿಸಿದೆ. ಹಿನ್ನೆಲೆ ಏನು? 2023ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಜಯಗಳಿಸಿದ್ದರು. ಆದರೆ, […]

ಇನ್ಮುಂದೆ ಕರ್ನಾಟಕದಲ್ಲಿ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟಕ್ಕೆ ಬ್ರೇಕ್: ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿ, ಪ್ಲಾಸ್ಟಿಕ್ ಕ್ಯಾನ್ ಹಾಗೂ ಹಾನಿಕಾರಕ ಕಂಟೈನರ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುವುದನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಕಿ ಅವಘಡಗಳನ್ನು ತಡೆಗಟ್ಟುವ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸುರಕ್ಷತೆಯೇ ಮೊದಲ ಆದ್ಯತೆ ಬಾಟಲಿಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹಿಸುವುದು ಮತ್ತು ಸಾಗಿಸುವುದು ಅತ್ಯಂತ ಅಪಾಯಕಾರಿ. ಇದು ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆಯಿದ್ದು, ದೊಡ್ಡ ಮಟ್ಟದ ಅನಾಹುತಗಳಿಗೆ ಕಾರಣವಾಗಬಹುದು. ಅಲ್ಲದೆ, […]

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ: ತುಟ್ಟಿಭತ್ಯೆ ಶೇ 15.75ಕ್ಕೆ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತ ವೇತನದಾರರಿಗೆ ಕರ್ನಾಟಕ ಸರ್ಕಾರವು ಹೊಸ ವರ್ಷದ ಆರಂಭದಲ್ಲೇ ಮಹತ್ವದ ಸಿಹಿ ಸುದ್ದಿ ನೀಡಿದೆ. ಹಣದುಬ್ಬರ ಮತ್ತು ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ನೌಕರರ ತುಟ್ಟಿಭತ್ಯೆಯನ್ನು (DA) ಹೆಚ್ಚಿಸಿ ಆರ್ಥಿಕ ಇಲಾಖೆಯು ಇಂದು (ಮೇ 11, 2026) ಅಧಿಕೃತ ಆದೇಶ ಹೊರಡಿಸಿದೆ. ತುಟ್ಟಿಭತ್ಯೆ ದರದಲ್ಲಿ ಶೇ 1.50 ಹೆಚ್ಚಳ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಅನ್ವಯವಾಗುವಂತೆ, ತುಟ್ಟಿಭತ್ಯೆಯ ದರವನ್ನು ಪ್ರಸ್ತುತ ಮೂಲ ವೇತನದ ಶೇಕಡ […]