ಸಿವಿಲ್ ಕಾನ್ ಸ್ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆಗೆ ಜುಲೈ 8ರವರೆಗೆ ಅವಕಾಶ

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ಕಾಲಾವಕಾಶವನ್ನು ಜುಲೈ 8ರ ಸಂಜೆ 4ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ನಂತರ, ಅರ್ಜಿ ತಿದ್ದುಪಡಿಗೆ ಜುಲೈ 10ರಿಂದ 13ರವರೆಗೆ ಸಮಯ ನೀಡಲಾಗುವುದು. ಈ ಮುನ್ನ ಅರ್ಜಿ ಸಲ್ಲಿಸಲು ಜುಲೈ 3ರವರೆಗೆ ಹಾಗೂ ಶುಲ್ಕ ಪಾವತಿಸಲು ಜುಲೈ 4 ಕಡೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ: ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ

ನವದೆಹಲಿ: ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು 2026ರ ಸಂಸತ್ತಿನ ಮುಂಗಾರು ಅಧಿವೇಶನವನ್ನು ಕರೆಯಲು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮುಂಬರುವ ಮುಂಗಾರು ಅಧಿವೇಶನವು 2026ರ ಜುಲೈ 20ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 13ರವರೆಗೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಮುಖ ವಿಷಯಗಳ ಕುರಿತು ಸಂಸತ್ತಿನ ಉಭಯ […]

BMTC ಬಸ್ಸಿನಲ್ಲಿರೋ ಕ್ಯೂ ಆರ್ ಕೋಡ್ ಮೂಲಕ ಟಿಕೆಟ್ ಖರೀದಿಗೆ ಬ್ರೇಕ್: ETM ಸ್ಕ್ಯಾನ್ ಮಾಡಲು ಅವಕಾಶ

ಬೆಂಗಳೂರು: ರಾಜಧಾನಿಯ ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ತನ್ನ ಬಸ್‌ಗಳಲ್ಲಿ ಪ್ರಯಾಣಿಸುವ ಜನರಿಗೆ ಡಿಜಿಟಲ್ ಪಾವತಿಯನ್ನು ಮತ್ತಷ್ಟು ಸುರಕ್ಷಿತ ಹಾಗೂ ಪಾರದರ್ಶಕಗೊಳಿಸಲು ಹೊಸದೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಮುಂದೆ ಬಸ್‌ಗಳಲ್ಲಿ ಯುಪಿಐ (UPI) ಮುಖಾಂತರ ಟಿಕೆಟ್ ಅಥವಾ ದಿನದ ಪಾಸ್‌ಗಳನ್ನು (ಡೇ ಪಾಸ್) ಖರೀದಿಸುವ ಪ್ರಯಾಣಿಕರಿಗಾಗಿ ಸಂಸ್ಥೆಯು ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಆನ್‌ಲೈನ್ ವಹಿವಾಟಿನಲ್ಲಿ ಯಾವುದೇ ರೀತಿಯ ಲೋಪದೋಷ ಅಥವಾ ವಂಚನೆಗಳು ನಡೆಯದಂತೆ ತಡೆಯಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಚಲೋ […]

ಇಂದು ಸಿಎಂ ಡಿ.ಕೆ ಶಿವಕುಮಾರ್ ನಡೆಸಿದ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು : ಎಲ್ ನಿನೊ (Elnino) ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹಣೆ ಮತ್ತು ಇತರೆ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಸೂಚನೆ ನೀಡಿದರು. ಮೊದಲ ಬಾರಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಏನೇನು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎನ್ನುವ ಬಗ್ಗೆ ವಿವರಗಳನ್ನು ಪಡೆದು ಸಾರ್ವಜನಿಕ ಬಳಕೆಗೆ […]

ಗೃಹ ಜ್ಯೋತಿ ಮನೆ ಮನೆ ತಪಾಸಣೆ: ಸಾರ್ವಜನಿಕರ ದೂರು, ಗೊಂದಲಗಳ ಪರಿಹಾರಕ್ಕೆ ಬೆಸ್ಕಾಂ ಹೆಲ್ಪ್‌ಡೆಸ್ಕ್ ಸ್ಥಾಪನೆ

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ವಿವರ ಸಂಗ್ರಹ ಮತ್ತು ಪರಿಶೀಲನಾ ಪ್ರಕ್ರಿಯೆಯು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಬಿರುಸಿನಿಂದ ಸಾಗುತ್ತಿದೆ. ಈ ಕಾರ್ಯಚರಣೆಯ ಹಿನ್ನೆಲೆಯಲ್ಲಿ ಗ್ರಾಹಕರಲ್ಲಿ ಉಂಟಾಗಬಹುದಾದ ತಾಂತ್ರಿಕ ಸಮಸ್ಯೆಗಳು, ಗೊಂದಲಗಳು ಹಾಗೂ ಪ್ರಶ್ನೆಗಳಿಗೆ ತಕ್ಷಣದ ಪರಿಹಾರ ಒದಗಿಸಲು ಬೆಸ್ಕಾಂ ತನ್ನ ಮುಖ್ಯ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ಘಟಕವನ್ನು ಮುಕ್ತಗೊಳಿಸಿದೆ. ಸಹಾಯವಾಣಿ ಸಂಪರ್ಕ ಸಂಖ್ಯೆಗಳು ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ನೆರವು ಅಥವಾ ದೂರುಗಳಿದ್ದಲ್ಲಿ ಕೆಳಗಿನ ಅಧಿಕೃತ ಮೊಬೈಲ್ ಸಂಖ್ಯೆಗಳಿಗೆ […]

ಬೆಂಗಳೂರಿನ ಇಸ್ರೋ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಇಸ್ರೋ ಮುಖ್ಯ ಕಚೇರಿಗೆ ಸ್ಫೋಟಕ ಇಟ್ಟಿರುವುದಾಗಿ ಇ-ಮೇಲ್ ಮುಖಾಂತರ ಸೃಷ್ಟಿಸಲಾಗಿದ್ದ ಬಾಂಬ್ ಆತಂಕದ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆದರಿಕೆ ಸಂದೇಶ ಬಂದ ಕೇವಲ ಒಂದು ದಿನದ ಒಳಗಾಗಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಜಯ್ ನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ ಬಾಹ್ಯಾಕಾಶ ಸಂಸ್ಥೆಗೆ ಬಂದಿದ್ದ ಇ-ಮೇಲ್ ಜಾಡು ಹಿಡಿದು ತನಿಖೆ ಆರಂಭಿಸಿದ್ದ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಸಿಬ್ಬಂದಿ ಉತ್ತರ ಪ್ರದೇಶದಲ್ಲಿ ತಪಾಸಣೆ ನಡೆಸಿದ್ದರು. ಈ ಹುಸಿ ಬಾಂಬ್ […]

ಬೆಂಗಳೂರಿನ ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ SIR ಅಕ್ರಮ; HDK ಗಂಭೀರ ಆರೋಪ, ವೀಡಿಯೋ ರಿಲೀಸ್

ಬೆಂಗಳೂರು: ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ರಾಜ್ಯ ಸರಕಾರ ಕೇಂದ್ರೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅಲ್ಲದೆ, ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ದೂರಿದ ಸಚಿವರು; ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಖುದ್ದು ನಾನೇ ಹೋಗಿ ದೂರು […]

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು: ತನಿಖೆ ಚುರುಕುಗೊಳಿಸಲು ಟ್ರಸ್ಟ್‌ಗೆ ಆರ್‌ಎಸ್‌ಎಸ್ ಕಟ್ಟುನಿಟ್ಟಿನ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕೊನೆಗೂ ತನ್ನ ಮೌನ ಮುರಿದಿದೆ. ಈ ದುರದೃಷ್ಟಕರ ಘಟನೆಯ ಸುತ್ತ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲ ಮತ್ತು ಅನಿಶ್ಚಿತತೆಯ ವಾತಾವರಣಕ್ಕೆ ತಕ್ಷಣವೇ ತೆರೆ ಎಳೆಯಬೇಕು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಮಂದಿರದ ಆಡಳಿತ ಮಂಡಳಿಯನ್ನು ಕಟ್ಟುನಿಟ್ಟಾಗಿ ಒತ್ತಾಯಿಸಿದ್ದಾರೆ. ಭಕ್ತರ ಭಾವನೆಗೆ ಧಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ರಾಮಭಕ್ತರು ಶ್ರದ್ಧೆಯಿಂದ ನೀಡಿದ ದೇಣಿಗೆಯನ್ನು […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆಗೆ ಅರ್ಹವಲ್ಲ ಎಂದು ನಟ ದರ್ಶನ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್

ನವದೆಹಲಿ: ರೇಣುಕಾಸ್ವಾಮಿ ಅವರ ನೃಶಂಸ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಒಂದು ವರ್ಷದ ಅವಧಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ತಮಗೆ ವಿಧಿಸಲಾಗಿದ್ದ ಸುಪ್ರೀಂ ಕೋರ್ಟ್‌ನ ಹಳೆಯ ಆದೇಶದಲ್ಲಿ ಬದಲಾವಣೆ ತರಬೇಕೆಂದು ದರ್ಶನ್ ಕೋರಿದ್ದರು. ಆದರೆ, ಈ ಮನವಿಯನ್ನು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಅವರು ತಳ್ಳಿಹಾಕಿದ್ದಾರೆ. ಅರ್ಜಿ ಲಿಸ್ಟ್ ಮಾಡಲು ರಿಜಿಸ್ಟ್ರಾರ್ ನಿರಾಕರಣೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿರುವ ದರ್ಶನ್ ಮತ್ತು ಅವರ ಗ್ಯಾಂಗ್‌ಗೆ, ಒಂದು […]

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ ರೂಪಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು, ಈ ನೀತಿಯಲ್ಲಿ ಕ್ರೂಸ್‌ ಪ್ರವಾಸೋದ್ಯಮ, ಬೀಚ್‌ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ […]