ಗೃಹ ಜ್ಯೋತಿ ಪರಿಶೀಲನೆ ವೇಳೆ ಪ್ರವರ್ಗ ಮಾಹಿತಿ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಫಲಾನುಭವಿಯ ಪ್ರವರ್ಗ ಕುರಿತು ಕೇಳಿರುವ ಮಾಹಿತಿ ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷನಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದು, ಫಲಾನುಭವಿಯ ಪ್ರವರ್ಗದ (ಜಾತಿ ಪ್ರಮಾಣಪತ್ರ) ಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಫಲಾನುಭವಿಗಳ […]

ದೇಶದಲ್ಲಿ ಭೀಕರ ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು : “ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. “ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, […]

ರಾಮನಗರದಲ್ಲಿ SIR ವೇಳೆ ಬೃಹತ್ ಸ್ಕ್ಯಾಮ್ ವೀಡಿಯೋ ಸಹಿತ ಮಾಹಿತಿ ಬಿಚ್ಚಿಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ರಾಮನಗರದಲ್ಲಿ ಬೃಹತ್ ‘ಸ್ಕ್ಯಾಮ್’ ಅಂಟಿಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಡಿಯೋ ಸಮೇತವಾಗಿ ರಾಮನಗರದಲ್ಲಿ ನಡೆಯುತ್ತಿರುವ ಈ ಅಕ್ರಮವನ್ನು ಬಯಲು ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ ಸಚಿವರು; ರಾಮನಗರ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಾಳುಮಾಡಲು ಹೊರಟಿದೆ. ಅದಕ್ಕೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮವೇ ಸಾಕ್ಷಿ. ಕೂಡಲೇ ರಾಮನಗರ […]

₹1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಭೂಮಾಪಕ ಲೋಕಾಯುಕ್ತ ಬಲೆಗೆ!

ಮೈಸೂರು: ಜಮೀನಿನ ದುರಸ್ತಿ ಪೋಡ್ ಮಾಡಿಕೊಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ನಂಜನಗೂಡು ತಾಲ್ಲೂಕಿನ ಭೂಮಾಪಕ (ಸರ್ವೇಯರ್) ಜಯಪ್ರಕಾಶ್ ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮೈಸೂರಿನ ದಟ್ಟಗಳ್ಳಿಯ ಹೋಟೆಲ್ ಒಂದರ ಬಳಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಆತನನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಲಂಚಕ್ಕಾಗಿ ಬೇಡಿಕೆ ಮತ್ತು ಸಂಧಾನ ಜಮೀನಿನ ದುರಸ್ತಿ ಪೋಡ್ ಕೆಲಸವನ್ನು ಸುಲಭವಾಗಿ ಮಾಡಿಕೊಡಲು ಭೂಮಾಪಕ ಜಯಪ್ರಕಾಶ್ ಮೊದಲು ಬರೋಬ್ಬರಿ ₹1.50 […]

ಮಂಡ್ಯದಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಕೊ*ಲೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಕೌಟುಂಬಿಕ ಕಲಹವೊಂದು ದುರಂತದಲ್ಲಿ ಅಂತ್ಯವಾಗಿದ್ದು, ಹೆಂಡತಿಯ ನಡತೆಯನ್ನು ಸಂಶಯಿಸಿದ ವ್ಯಕ್ತಿಯೊಬ್ಬ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಆಲಗೂಡು ಗ್ರಾಮದ ನಿವಾಸಿ ರಶ್ಮಿ ಕೊಲೆಯಾದ ದುರ್ದೈವಿ ಮಹಿಳೆ. ಈಕೆಯ ಪತಿ ರಮೇಶ್ ಎಂಬಾತನೇ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ತೆಗೆದ ಘಾತಕ. ಶೀಲಶಂಕೆ ತಂದಿಟ್ಟ ಮಹಾವಿಪತ್ತು ಆಲಗೂಡು ನಿವಾಸಿಗಳಾದ ರಮೇಶ್ ಹಾಗೂ ರಶ್ಮಿ ದಂಪತಿಗಳ ನಡುವೆ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪತ್ನಿಯ […]

ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿಲ್ಲ, ಸ್ಥಳಾಂತರಿಸುತ್ತಿದ್ದೇವೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಂಬಂಧಿತ ಅಧಿಕಾರಿಗಳ ಜೊತೆ ನಡೆದ ವರ್ಚುವಲ್ ಸಭೆ(VC)ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಿಂದ ಬೀದಿ ಬದಿ ವ್ಯಾಪಾರಿಗಳಷ್ಟೇ ಅಲ್ಲದೆ, ವಿವಿಧ ಅಡೆತಡೆಗಳು, ಅನಾಥ ವಾಹನಗಳು ಹಾಗೂ ಅಕ್ರಮವಾಗಿ ನಿಲ್ಲಿಸಿರುವ ಪಾರ್ಕಿಂಗ್ […]

ಜುಲೈ 20ರೊಳಗೆ ‘ಮರು-ನೀಟ್ ಯುಜಿ’ ಫಲಿತಾಂಶ ಪ್ರಕಟ: ಶೈಕ್ಷಣಿಕ ವೇಳಾಪಟ್ಟಿಗೆ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದ NTA

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜುಲೈ 20ರ ಒಳಗಾಗಿ ಮರು-ನೀಟ್ ಯುಜಿ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ಪ್ರಕಟಿಸಿದೆ. ಈ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು, ಫಲಿತಾಂಶ ವಿಳಂಬದಿಂದ ವೈದ್ಯಕೀಯ ಶೈಕ್ಷಣಿಕ ವರ್ಷದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೇ 3 ರಂದು ನಡೆದಿದ್ದ ಮೂಲ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದಾಗಿದ್ದರಿಂದ, ಸುಮಾರು 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಿತದೃಷ್ಟಿಯಿಂದ ಜೂನ್ 21 ರಂದು ಈ […]

ಜುಲೈ.15ರವರೆಗೆ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ (General Transfer) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮತ್ತೊಂದು ಮಹತ್ತರ ನಿರ್ಧಾರ ಪ್ರಕಟಿಸಿದೆ. ಆಡಳಿತಾತ್ಮಕ ಹಿತದೃಷ್ಟಿ ಹಾಗೂ ಅಗತ್ಯತೆಗಳನ್ನು ಪರಿಗಣಿಸಿ, ವರ್ಗಾವಣೆ ಕೈಗೊಳ್ಳುವ ನಿಗದಿತ ಅವಧಿಯನ್ನು ಜುಲೈ 15, 2026ರವರೆಗೆ ವಿಸ್ತರಿಸಿ ಸರ್ಕಾರ ಇಂದೇ (ಜೂನ್ 30) ಹೊಸ ಆದೇಶ ಹೊರಡಿಸಿದೆ. ಇದು ಎರಡನೇ ಬಾರಿ ಅವಧಿ ವಿಸ್ತರಣೆ! ಪ್ರಸಕ್ತ ವರ್ಷದ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ಅವಧಿಯನ್ನು ವಿಸ್ತರಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. […]

VTU ಹೊಸ ದಾಖಲೆ: ಪರೀಕ್ಷೆ ಮುಗಿದ 5 ನಿಮಿಷದಲ್ಲೇ ಫಲಿತಾಂಶ ಪ್ರಕಟ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ಎಲ್ಲಾ ದಾಖಲೆಗಳನ್ನು ವಿಟಿಯು ಮುರಿದಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಗಳವಾರ ಸಂಜೆ 5.30ಕ್ಕೆ ಪರೀಕ್ಷೆ […]

ಸೀ-ಪುಡ್ ಪ್ರಿಯರಿಗೆ ಗುಡ್ ನ್ಯೂಸ್: ತಾಜಾ, ಸ್ವಚ್ಛ ಮತ್ತು ಸಿದ್ಧ-ಅಡುಗೆ ಸೀ-ಫುಡ್‌ ಮನೆಬಾಗಿಲಿಗೆ ತಲುಪಿಸಲು KFDC ಸಜ್ಜು

ಬೆಂಗಳೂರು : ರಾಜ್ಯದ ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಮಹತ್ವಾಕಾಂಕ್ಷಿ ಯೋಜನೆಯಾಗಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ (KFDC) ತನ್ನ ‘ಸೀಫುಡ್ ಅಟ್ ಡೋರ್‌ಸ್ಟೆಪ್ಸ್’ (Seafood at Doorsteps) ಡಿಜಿಟಲ್ ಇ-ಕಾಮರ್ಸ್ ವೇದಿಕೆಯನ್ನು ಲೋಕಾರ್ಪಣೆಗೊಳಿಸಲು ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ವೇದಿಕೆಯ ಮೂಲಕ ನೇರವಾಗಿ ಗ್ರಾಹಕರ ಮನೆಬಾಗಿಲಿಗೆ ತಾಜಾ, ಸ್ವಚ್ಛ, ಗುಣಮಟ್ಟದ ಹಾಗೂ ಸಿದ್ಧ-ಅಡುಗೆ ಸಮುದ್ರಾಹಾರವನ್ನು (ಸೀ-ಫುಡ್‌) ತಲುಪಿಸುವ ಯೋಜನೆ ಇದಾಗಿದೆ. ಈ ಮಹತ್ವಾಕಾಂಕ್ಷಿ ವೇದಿಕೆಯು ಮೀನುಗಾರರು ಹಾಗೂ ಗ್ರಾಹಕರ ನಡುವೆ ನೇರ ಮಾರುಕಟ್ಟೆ ಸಂಪರ್ಕವನ್ನು […]