ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಬೆಂಗಳೂರಿಗೆ ಹೆಬ್ಬಾಗಿಲಿನಂತೆ ಹೆಬ್ಬಾಳ ಆಗೋಗಿದೆ. ಹೆಬ್ಬಾಳ ಭಾಗದ ಸಂಚಾರ ದಟ್ಟಣೆಗೆ ಒಂದಷ್ಟು ಮುಕ್ತಿ ನೀಡಿದ್ದೇವೆ. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದೇ ನಮ್ಮ ಉದ್ದೇಶ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೇಖ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್ ವರೆಗೂ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಹೆಬ್ಬಾಳ ಜಂಕ್ಷನ್ ನಲ್ಲಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. “2.5 ಕಿಲೋ ಮೀಟರ್ ಉದ್ದದ ಕಟ್ ಅಂಡ್ ಕವರ್ ಟನಲ್ ಇದಾಗಿದ್ದು. […]
ಕೀಲುಗಳ ಆರೋಗ್ಯ ಹೆಚ್ಚಿಸಲು ಈ ಪುಡ್ ನಿಮ್ಮ ಆಹಾರದ ಜೊತೆಗಿರಲಿ

ವಯಸ್ಸಾಗುತ್ತಿದ್ದಂತೆ ದೇಹದ ಮೂಳೆಗಳು ಮತ್ತು ಕೀಲುಗಳ (Joints) ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ. ತಪ್ಪು ಆಹಾರ ಪದ್ಧತಿ ಮತ್ತು ದೈಹಿಕ ಶ್ರಮದ ಕೊರತೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿಯೂ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೀಲುಗಳನ್ನು ದೀರ್ಘಕಾಲದವರೆಗೆ ಗಟ್ಟಿಯಾಗಿ ಮತ್ತು ಆರೋಗ್ಯವಾಗಿಡಲು ನಮ್ಮ ದೈನಂದಿನ ಆಹಾರದಲ್ಲಿ ಕೆಲವು ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇರಿಸಿಕೊಳ್ಳುವುದು ಅತ್ಯಗತ್ಯ. ಕೀಲುಗಳ ಬಲವನ್ನು ಹೆಚ್ಚಿಸುವ ಅಂತಹ 6 ಪ್ರಮುಖ ಆಹಾರಗಳು ಇಲ್ಲಿವೆ: 1. ಒಮೆಗಾ-3 ಸಮೃದ್ಧವಾಗಿರುವ ಕೊಬ್ಬಿನ ಮೀನುಗಳು (Fatty Fish) […]
ಭೈರಮಂಗಲ ಸಭೆಗೆ ಬರದ ಸಿಎಂ ಡಿಕೆಶಿ; ಒಬ್ಬರೇ ರೈತರೊಂದಿಗೆ ಸಂವಾದ ನಡೆಸಿದ ತೆರಳಿದ HDK

ಬಿಡದಿ : ಬಿಡದಿ ಹೋಬಳಿಯ ಫಲವತ್ತಾದ ಕೃಷಿ ಭೂಮಿ ಲೂಟಿ ಹೊಡೆಯಲು ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನೇಕ ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾದು ಕುಳಿತು ಸಂಚು ರೂಪಿಸಿದ್ದರು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಬಿಡದಿಯ ಬೈರಮಂಗಲದಲ್ಲಿ ರೈತರ ಸಮ್ಮುಖದಲ್ಲಿ ಚರ್ಚೆಗೆ ಬರುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಕೇಂದ್ರ ಸಚಿವರು ಪತ್ರ ಬರೆದು ವಿನಂತಿ ಮಾಡಿದ್ದರು. ಆದರೆ ಚರ್ಚೆಗೆ ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದರು. ಹಿನ್ನೆಲೆಯಲ್ಲಿ ಕೇಂದ್ರ ಸಚಿವರು […]
ರಾಜ್ಯದಲ್ಲಿ ಭೂ ಮಾಲೀಕರ ತ್ಯಾಗ ಸ್ಮರಣೆಗೆ ವಾಲ್ ಆಫ್ ಗ್ರ್ಯಾಟಿಟ್ಯೂಡ್: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಕೈಗಾರಿಕಾ ಪ್ರದೇಶ, ಶಾಲೆಗಳು, ಕೆರೆ, ರಸ್ತೆ ನಿರ್ಮಾಣ ಸೇರಿದಂತೆ ಜನಪರ ಯೋಜನೆಗಳಿಗೆ ಯಾವುದೇ ತಕರಾರು ಮಾಡದೇ ಜಾಗ ನೀಡುವ ಭೂ ಮಾಲೀಕರ ಹೆಸರನ್ನು ವಾಲ್ ಆಫ್ ಗ್ರಾಟಿಟ್ಯೂಡ್ (ಕೃತಜ್ಞತಾ ಫಲಕ) ನಲ್ಲಿ ಸೇರಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಭೂ ಮಾಲೀಕರ ತ್ಯಾಗ ಸ್ಮರಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ನಿರ್ಮಿಸುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಶನಿವಾರ ನಡೆದ 517 ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು […]
ಹೆದ್ದಾರಿಯಲ್ಲೇ ನಾಡಬಾಂಬ್ ಸ್ಪೋಟಿಸಿಕೊಂಡು ಕಾರಿನಲ್ಲೇ ಯುವಕ ಆತ್ಮಹ*ತ್ಯೆ!

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸೀಮೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬೆಂಗಳೂರಿನಿಂದ ಯುವತಿಯೊಬ್ಬಳನ್ನು ಅಪಹರಿಸಿಕೊಂಡು ಬಂದಿದ್ದ ಎನ್ನಲಾದ ನಾಗೇಂದ್ರ ಎಂಬ ಯುವಕ, ಮಾರ್ಗಮಧ್ಯೆ ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಮಧ್ಯಾಹ್ನ 1.30ರ ಸುಮಾರಿಗೆ ಚಲಿಸುತ್ತಿದ್ದ ವಾಹನದಲ್ಲೇ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನಾಗೇಂದ್ರ ಯುವತಿಗೆ ಚಾಕುವಿನಿಂದ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಕಂಗಾಲಾದ ಆಕೆ ತಕ್ಷಣವೇ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದು ರಕ್ಷಣೆಗಾಗಿ ಕಿರುಚಾಡಿದ್ದಾಳೆ. ಚಾಲಕ […]
ಸ್ಯಾಂಡಲ್‌ವುಡ್‌ನಲ್ಲಿ ಸೂತಕ: ಚಾರಣದ ವೇಳೆ ನಿರ್ಮಾಪಕ ಭಾಮಾ ಹರೀಶ್ ಪುತ್ರ ವಿಧಿವಶ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಸ್ಯಾಂಡಲ್‌ವುಡ್‌ನ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಭಾಮಾ ಹರೀಶ್ ಅವರ ಕುಟುಂಬದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಅವರ 29 ವರ್ಷದ ಮಗ ಉಲ್ಲಾಸ್ ಅವರು ಶಿವಮೊಗ್ಗ ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಶ್ರೇಣಿಯಲ್ಲಿ ಹಠಾತ್ತನೆ ಸಾವನ್ನಪ್ಪಿದ್ದಾರೆ. ಗಮ್ಯಸ್ಥಾನ ತಲುಪುವ ಮುನ್ನವೇ ನಿಂತ ಹೃದಯ ಬಡಿತ ವಾರಾಂತ್ಯದ ರಜೆಯ ನಿಮಿತ್ತ ಉಲ್ಲಾಸ್ ಅವರು ತಮ್ಮ ಆಪ್ತ ಸ್ನೇಹಿತರ ಬಳಗದೊಂದಿಗೆ ಕೊಡಚಾದ್ರಿ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದರು. ಆದರೆ […]
ಮುತ್ತತ್ತಿ ಕಾವೇರಿ ನದಿಯಲ್ಲಿ ಸಾವುಗಳನ್ನು ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆಗೆ HDK ಪತ್ರ

ಬೆಂಗಳೂರು: ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಿರುವ ಮುತ್ತತ್ತಿಯಲ್ಲಿರುವ ಕಾವೇರಿ ನದಿಯಲ್ಲಿ ನಿರಂತರವಾಗಿ ಪ್ರವಾಸಿಗರು ನದಿಯ ನೀರಿನ ಸುಳಿಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಮುತ್ತತ್ತಿಯಲ್ಲಿ ಪೊಲೀಸ್ ಉಪಠಾಣೆ ತೆರೆಯುವ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಮುತ್ತತ್ತಿಯ ಕಾವೇರಿ ನದಿ ಬಾಗದ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು, ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕು ಮತ್ತು ನದಿಗೆ ಇಳಿಯದಂತೆ ತಡೆಯಲು ದಂಡೆಯ ಉದ್ದಕ್ಕೂ […]
ನಮ್ಮ ಮೆಟ್ರೋ ಪಿಲ್ಲರ್ ಲೈಟಿಂಗ್ ಕೆಲಸದ ವೇಳೆ ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾ*ವು

ಬೆಂಗಳೂರು: ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿ ವಿದ್ಯುತ್‌ಗೆ ಸಂಬಂಧಿಸಿದ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗೆ ಕಾರ್ಮಿಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ಈ ಬೇಸರದ ಸಂಗತಿ ಸಂಭವಿಸಿದೆ. ನೆಲದ ಅಡಿಯಲ್ಲಿ ಕೆಲಸ ಮಾಡುವಾಗ ತಗುಲಿದ ಶಾಕ್ ನಮ್ಮ ಮೆಟ್ರೋ ಪಿಲ್ಲರ್‌ಗಳಿಗೆ ಆಕರ್ಷಕ ಬೆಳಕಿನ ವ್ಯವಸ್ಥೆ (Pillars Lighting Works) ಕಲ್ಪಿಸುವ ಕಾಮಗಾರಿಯನ್ನು ‘ಎಂ/ಎಸ್ ಎಂ.ಆರ್. ಎಲೆಕ್ಟ್ರಿಕಲ್ಸ್’ ಎಂಬ ಖಾಸಗಿ ಸಂಸ್ಥೆಗೆ ವಹಿಸಲಾಗಿತ್ತು. ಈ ಸಂಸ್ಥೆಯ […]
9ನೇ ತರಗತಿ ಪುಸ್ತಕದಲ್ಲಿ ದೇಶದ ಚುನಾವಣಾ ವ್ಯವಸ್ಥೆ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಹೊಸ ಪಾಠ ಸೇರ್ಪಡೆಗೊಳಿಸಿದ NCERT

ನವದೆಹಲಿ: ದೇಶದ ಶಾಲಾ ವಿದ್ಯಾರ್ಥಿಗಳಿಗೆ ಭಾರತದ ಪ್ರಜಾಪ್ರಭುತ್ವ ಮತ್ತು ಮತದಾನ ಪ್ರಕ್ರಿಯೆಯ ಬಗ್ಗೆ ಆರಂಭಿಕ ಹಂತದಲ್ಲೇ ಪ್ರಾಯೋಗಿಕ ಅರಿವು ಮೂಡಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಹೊಸ ವಿವರಗಳನ್ನು ಸೇರಿಸಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯ ತಿಳಿಸಿಕೊಡುವ ಪ್ರಯತ್ನ ‘ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: […]
ಶೀಘ್ರವೇ 72,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು: 72,000 ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು, ನಾವು ಪ್ರಣಾಳಿಕೆಯಲ್ಲಿ ನಮ್ಮ ಸರ್ಕಾರ ಬರುವಾಗ 2.5 ಲಕ್ಷ ಹುದ್ದೆಗಳು ಖಾಲಿಯಿದ್ದಾವೆ, ಹಂತ ಹಂತವಾಗಿ ನಾವು ಅದನ್ನು ತುಂಬುತ್ತೇವೆ ಎಂದು ಹೇಳಿದ್ದೆವು. ಅನೇಕ ಕಾರಣಗಳಿಂದ ಅದು ವಿಳಂಬವಾಯಿತು. ಒಳಮೀಸಲಾತಿ ವಿಚಾರ ಬಗೆಹರಿಯದೆ ಇದ್ದದ್ದು ಸಮಸ್ಯೆಯಾಗಿ ಪರಿಣಮಿಸಿತ್ತು. ಹೀಗಾಗಿ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಸಮಿತಿಯ ವರದಿ ಆಧಾರದ ಮೇಲೆ ಕೂಲಂಕಷವಾಗಿ ಪರಿಶೀಲನೆ ಮಾಡಿ ಒಳಮೀಸಲಾತಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಬಳಿಕ ಬಜೆಟ್‌ನಲ್ಲಿಯೇ […]