ವೈಭವ್ ಸೂರ್ಯವಂಶಿಯನ್ನು ಶ್ಲಾಘಿಸಿದ ಪಾಕ್ ದಿಗ್ಗಜ ಆಟಗಾರ ವಾಸಿಮ್ ಅಕ್ರಮ್

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಪಾಕಿಸ್ತಾನ ಸೂಪರ್ ಲೀಗ್ ನಡುವಿನ ಬೆಳವಣಿಗೆಯನ್ನು ಹೋಲಿಸುವಾಗ ಭಾರತದ ಪ್ರತಿಭಾವಂತ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು ಪಾಕಿಸ್ತಾನದ ದಿಗ್ಗಜ ಆಟಗಾರ ವಾಸಿಮ್ ಅಕ್ರಮ್ ಉಲ್ಲೇಖಿಸಿದ್ದಾರೆ. ಐಪಿಎಲ್‌ನಲ್ಲಿ ಸತತ ಎರಡು ಅತ್ಯುತ್ತಮ ಆವೃತ್ತಿಗಳ ನಂತರ, ಅವರು ಇಂಗ್ಲೆಂಡ್ ವಿರುದ್ಧ ಭಾರತ ತಂಡಕ್ಕೆ ಎಂಟ್ರಿ ಕೊಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕೇವಲ 15 ವರ್ಷ ವಯಸ್ಸಿನ ಸೂರ್ಯವಂಶಿ, ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ […]

ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಶಾಶ್ವತ ಪರಿಹಾರ ಹಾಗೂ ರಾಜ್ಯವು ತನ್ನ ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ವಿಷಯದ ಕುರಿತು ಮಾತನಾಡಿದ ಅವರು, ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಸುಮ್ಮನೆ ಕೂರುವುದಿಲ್ಲ; ನಾವು ಪ್ರಯತ್ನಿಸುತ್ತಿದ್ದೇವೆ. ನಾವು ಪರಿಣಾಮಕಾರಿಯಾಗಿ ವಾದ ಮಂಡಿಸಿದ್ದೇವೆ. ಕಳೆದ 40 ವರ್ಷಗಳಲ್ಲಿ ನಮಗೆ ಕಡಿಮೆ ಪ್ರಮಾಣದ ನೀರು ಸಿಕ್ಕಿರುವುದು ಇದೇ ಮೊದಲು. ಸೋಮವಾರದ ನಂತರವಷ್ಟೇ […]

ಬಿಜೆಪಿ ನಾಯಕರ ಮೇಲೆ ಏಕೆ ಇಡಿ ದಾಳಿ ನಡೆಯುತ್ತಿಲ್ಲ: ಡಿ ಕೆ ಶಿವಕುಮಾರ್

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ಮತ್ತೆ ದಾಳಿ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಟ್ರಾಪ್ ಮಾಡೋದಕ್ಕೆ ಇಡಿ ಅಧಿಕಾರಿಗಳು ತಯಾರಿ ನಡೆಸಿದ್ದು, ಇನ್ನೂ 3-4 ಮಂದಿ ಮೇಲೆ ದಾಳಿ ಆಗೋ ಸಾಧ್ಯತೆ ಇದೆ ಅಂತ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ ಅಂತ ಪ್ರಶ್ನೆ ಮಾಡಿದ್ದಾರೆ. ಇದಕ್ಕೂ ಮುನ್ನವೇ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ದಾಳಿ ಬಗ್ಗೆ […]

ಬ್ರಿಕ್ಸ್‌ನ ಆರ್ಥಿಕ ಶಕ್ತಿ ವಿಶ್ವದ ಉಳಿದ ಭಾಗಕ್ಕಿಂತ, ಎರಡು ಪಟ್ಟು ವೇಗದಲ್ಲಿ ಬೆಳೆಯುತ್ತಿದೆ : ಮೋದಿ

ನವದೆಹಲಿ: ವಿಸ್ತರಿತ ಬ್ರಿಕ್ಸ್‌ ಗುಂಪಿನೊಳಗೆ ವ್ಯಾಪಾರವನ್ನು ಮತ್ತಷ್ಟು ಗಾಢಗೊಳಿಸಲು ಮೂರು ಆಧಾರಸ್ತಂಭಗಳ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬ್ರಿಕ್ಸ್ ಶೃಂಗಸಭೆ ಆರಂಭದ ದಿನ ಮಾತನಾಡಿದ ಅವರು, ಸುರಕ್ಷಿತ ಸಮುದ್ರ ಮಾರ್ಗಗಳು, ಮುಕ್ತ ಪೂರೈಕೆ ಮಾರ್ಗಗಳು ಹಾಗೂ ನಾವಿಕರ ಸುರಕ್ಷತೆ ಖಚಿತಪಡಿಸಿಕೊಳ್ಳುವುದು ಬಲಿಷ್ಠ ಆರ್ಥಿಕ ಏಕೀಕರಣಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿದರು. ಭೌಗೋಳಿಕ-ರಾಜಕೀಯ ಸಂಘರ್ಷಗಳು ಜಾಗತಿಕ ವಾಣಿಜ್ಯಕ್ಕೆ ಪದೇಪದೇ ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹೆಚ್ಚುತ್ತಿರುವ ರಕ್ಷಣಾತ್ಮಕ ವ್ಯಾಪಾರ ನೀತಿಗಳು, ನಿರ್ಬಂಧಗಳು ಮತ್ತು […]

ಎಚ್ಚರಿಕೆ ಎಚ್ಚರಿಕೆ! 80ರ ಪೋಟೋ ಟ್ರೆಂಡ್‌ನ ಹಿಂದಿರುವ ಕರಾಳ ಮುಖ- ಟ್ರೆಂಡ್‌ಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ

ಒಂದು ಪೋಟೋ, ಸೈಬರ್ ಅಪರಾಧಿಗಳಿಗೆ ಬಂಡವಾಳವಾಗಬಹುದು ಎನ್ನುವುದನ್ನುನಾವು ಯಾವತ್ತು ಮರೆಯಬಾರದು. ಯಾವುದೇ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು.ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಪೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾದನಾಯಕನಹಳ್ಳಿ ಪೊಲೀಸರು ಸೂಚಿಸಿದ್ದಾರೆ. 80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಪೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್‌ಗಳು ಹಾಗೂ ಆನ್‌ಲೈನ್‌ ಲಿಂಕ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಅಪರಿಚಿತ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ಅನುಮಾನಾಸ್ಪದ ಲಿಂಕ್‌ಗಳನ್ನು ತೆರೆಯುವುದರಿಂದ ಸೈಬರ್ […]

ಕೈ ಸರ್ಕಾರದಿಂದ ತುಷ್ಟೀಕರಣ ರಾಜಕಾರಣ; ಬಡವರಿಗೆ 5 ಕೆಜಿ ಅಕ್ಕಿ ಕೊಡ್ತಿರೋದು ಮೋದಿ – ಪ್ರಹ್ಲಾದ ಜೋಶಿ

ಬಳ್ಳಾರಿ: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶಭಕ್ತಿಯ ಕಿಚ್ಚು ಹಚ್ಚಿದ ವಂದೇ ಮಾತರಂ ಹಾಡನ್ನು ಮೊಟಕುಗೊಳಿಸುವ ಕೆಲಸವನ್ನು ಡಿ.ಕೆ. ಶಿವಕುಮಾರ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು,ಅಲ್ಪಸಂಖ್ಯಾತರ ಓಲೈಕೆಗಾಗಿ ಹಾಡಿಗೆ ಕತ್ತರಿ ಹಾಕಲಾಗುತ್ತಿದೆಯೇ? ನಿಮ್ಮ ದೇಶಪ್ರೇಮ ಎಲ್ಲಿದೆ?ಈ ಸರ್ಕಾರವನ್ನು ಕಿತ್ತೊಗೆಯಲು “ವಂದೇ ಮಾತರಂ” ವಿಚಾರವೂ ಒಂದು ಕಾರಣವಾಗಲಿದೆ’ ಎಂದು ಹೇಳಿದರು. ವಂದೇ ಮಾತರಂ ಗೀತೆಯ ಸಂಪೂರ್ಣ ಆರು ನುಡಿ ಹೇಳಲು ಒಮರ್‌ ಅಬ್ದುಲ್ಲಾ ಸರ್ಕಾರ ಸಿದ್ಧವಿದ್ದರೆ, ರಾಹುಲ್‌ ಗಾಂಧಿ ವಿರೋಧಿಸುತ್ತಿದ್ದಾರೆ. ಇದರಲ್ಲೂ […]

ಭ್ರಾತೃತ್ವದ ಸೌರಭ ಸ್ವಾಮಿ ವಿವೇಕಾನಂದರ ಚಿಕಾಗೋ ಸಂದೇಶ ಇಂದಿಗೇಕೆ ಪ್ರಸ್ತುತ? ಇಲ್ಲಿದೆ ನೋಡಿ ಮಾಹಿತಿ

ಅಮೆರಿಕದ ಸಹೋದರಿಯರೇ ಮತ್ತು ಸಹೋದರರೇ” 11, ಸೆಪ್ಟೆಂಬರ್, 1893, ಚಿಕಾಗೋ. ವಿಶ್ವ ಧರ್ಮ ಸಮ್ಮೇಳನದಲ್ಲಿ ಒಬ್ಬ 30 ವರ್ಷದ ಕೇಸರಿ ವಸ್ತ್ರಧಾರಿ ಯುವ ಸನ್ಯಾಸಿ ವೇದಿಕೆ ಏರುತ್ತಾರೆ. ಅವರ ಮೊದಲ ಐದು ಪದಗಳು ಇಡೀ ಸಭೆಯನ್ನು ಎರಡು ನಿಮಿಷಗಳ ಕಾಲ ಚಪ್ಪಾಳೆಯಿಂದ ತುಂಬಿಸುತ್ತವೆ. ಆ ಐದು ಪದಗಳು ಕೇವಲ ಸಂಬೋಧನೆಯಾಗಿರಲಿಲ್ಲ, ಅದು ಒಂದು ತತ್ತ್ವಶಾಸ್ತ್ರವಾಗಿತ್ತು. ಆ ತತ್ತ್ವವೇ ಭ್ರಾತೃತ್ವ. ಆ ದಿನ ಸ್ವಾಮಿ ವಿವೇಕಾನಂದರು ಜಗತ್ತಿಗೆ ಹೇಳಿದ್ದು “ಎಲ್ಲ ಧರ್ಮಗಳೂ ಒಂದೇ ಸತ್ಯದ ಬೇರೆ ಬೇರೆ ಹೊಳೆಗಳು” […]

Priyank Kharge : ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯವಾಗಿದೆ. ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ ಭಾರತದ ವಿದೇಶಾಂಗ ನೀತಿಯ ವೈಫಲ್ಯಗಳ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಂದೇ ಮಾತರಂ ಗೀತೆಯ 2 ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, […]

ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ; ಚಿಂದಿ ಆಯುವವರು ಕೂಡ ಅದನ್ನು ತಗೊಳ್ಳಲ್ಲ- ಶ್ರೀರಾಮುಲು

ಬಳ್ಳಾರಿ: ಮಧು ಬಂಗಾರಪ್ಪನವರು ದಿನಕ್ಕೊಂದು ಹೊಸ ಶೂ ಬದಲಾಯಿಸ್ತಾರೆ. ಆದರೆ ಶಾಲಾ ಮಕ್ಕಳಿಗೆ ಕೊಡುವ ಶೂ ಚಿಂದಿ ಆಯುವವರು ಕೂಡ ತಗೋಳಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರು ನನಗೆ ಶತ್ರುವಲ್ಲ, ಅವರ ಮೇಲೆ ಯಾವುದೇ ದ್ವೇಷವಿಲ್ಲ ಎಂದರು. ಸಿಎಂ ಡಿ.ಕೆ.ಶಿವಕುಮಾರ್ ಅವರು ಅರಮನೆಯಲ್ಲಿದ್ದು, ಜನರನ್ನು ಬೀದಿಗೆ ನಿಲ್ಲಿಸುವ ಕೆಲಸ ಮಾಡಿದ್ದಾರೆ ಎಂದು […]

ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿ – ಈರುಳ್ಳಿ ಬೆಲೆ ಇಳಿಸಲು ಕೇಂದ್ರದ ಮಾಸ್ಟರ್‌ಪ್ಲ್ಯಾನ್

ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊರೆ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣಕ್ಕೆ ಮುಂದಾಗಿದೆ. ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ ಆರಂಭಿಸಿದ್ದು, ಮೊದಲ 10 ದಿನಗಳಲ್ಲೇ 17 ನಗರಗಳಲ್ಲಿ ಸುಮಾರು 4,000 ಟನ್ ಬಫರ್ ಈರುಳ್ಳಿಯನ್ನು ಮಾರಾಟ ಮಾಡಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ನಿಧಿ ಖರೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರ 2026ರ ಸಾಲಿಗೆ 1.21 ಲಕ್ಷ ಟನ್ ಈರುಳ್ಳಿಯನ್ನು ಬಫರ್ ಸ್ಟಾಕ್‌ ಆಗಿ ಸಂಗ್ರಹಿಸಿದೆ. ಎನ್‌ಸಿಸಿಎಫ್ ಮತ್ತು ಎನ್ಎಎಫ್ಇಡಿ ಮೂಲಕ ಈ […]