ನಾಗೇಂದ್ರ ರಾಜೀನಾಮೆ ವಿಚಾರ: ಕಾಂಗ್ರೆಸ್ ಪಕ್ಷವೇ ಲೂಟಿ ಮಾಡುವಂತೆ ಹೇಳಿಕೊಡ್ತಾ? – ಆರ್. ಅಶೋಕ್

ಬೆಂಗಳೂರು: ನಾಗೇಂದ್ರ ರಾಜೀನಾಮೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ – ಜೆಡಿಎಸ್ ಹೋರಾಟದ ಫಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ವಿಪಕ್ಷ ನಾಯಕರು,ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಹೋರಾಟ ನಡೆಸಿದ್ದು, ನಮ್ಮ ಗುರಿ ಆರಂಭದಿಂದಲೂ ಸ್ಪಷ್ಟವಾಗಿತ್ತು ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ನಾಗೇಂದ್ರ ರಾಜೀನಾಮೆ ಪ್ರಕರಣ ಅಪರೂಪದ್ದು. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ನಾಗೇಂದ್ರ ವಿಚಾರವನ್ನು ವಿಧಾನಸಭೆಯಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿವೆ. […]
ನಮ್ಮ ದೇಶಕ್ಕೆ ಅಪಾಯ ಇರುವುದು RSS ನಿಂದಲ್ಲ, ಕಾಂಗ್ರೆಸ್ ನಿಂದ:ಕೈ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗರಂ

ಬೆಂಗಳೂರು: ನಮ್ಮ ದೇಶಕ್ಕೆ ಅಪಾಯ ಇರುವುದು RSS ನಿಂದಲ್ಲ, ಕಾಂಗ್ರೆಸ್ ನಿಂದ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿರುವ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಕ್ರಮವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಶಿಕ್ಷಕರು ಪಥಸಂಚಲನದಲ್ಲಿ ಭಾಗವಹಿಸಿದ್ದರಿಂದ ಕರ್ನಾಟಕದಲ್ಲಿ ಯಾವುದೇ ಹಾನಿ, ಹಿಂಸಾಚಾರ ಅಥವಾ ಅಡಚಣೆ ಉಂಟಾಗಿದೆಯೇ ಎಂದೂ ಅವರು ಪ್ರಶ್ನಿಸಿದ್ದಾರೆ. ರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದರಿಂದ ಅವರು ಮಾಡಿರುವ […]
‘Belonging: A Journey of Love’ ನ್ನು ಭಾರತದಲ್ಲಿ ಪ್ರಕಟಿಸುವ ವಿಚಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗುತ್ತಿದೆ-ಕಾಂಗ್ರೆಸ್ ಆರೋಪ

ಸೋನಿಯಾ ಗಾಂಧಿ ಅವರ ಆತ್ಮಕಥನ ‘Belonging: A Journey of Love’ ನ್ನು ಭಾರತದಲ್ಲಿ ಪ್ರಕಟಿಸುವ ವಿಚಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಕಾಂಗ್ರೆಸ್ ನ ಹಲವು ನಾಯಕರು ಹೇಳುತ್ತಿದ್ದಾರೆ. ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ ವಿರುದ್ಧ ಆರೋಪ ಮಾಡುತ್ತಿದ್ದು, ಕೆಲವರು ಪ್ರಕಾಶನ ಸಂಸ್ಥೆಯ ಮೇಲೆ ಸರ್ಕಾರದ ಒತ್ತಡವಿದೆಯೇ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ಪೆಂಗ್ವಿನ್ ಇಂಡಿಯಾ, ಸೋನಿಯಾ ಗಾಂಧಿ ಅವರ ಆತ್ಮಕಥನದ ಭಾರತೀಯ ಪ್ರಕಾಶಕರು ತಾವಲ್ಲ ಎಂದು ಸ್ಪಷ್ಟಪಡಿಸಿದ ಬಳಿಕ ಹಾಗೂ ಕಾಂಗ್ರೆಸ್ ನಾಯಕಿ ಸೂಚಿಸಲಾದ […]
Donald Trump : ವೆನೆಜುವೆಲಾ ಜತೆ ‘ವಿಶ್ವದ ಅತಿದೊಡ್ಡ ತೈಲ ಒಪ್ಪಂದ- 65 ಶತಕೋಟಿ ಬ್ಯಾರಲ್ ಕಚ್ಚಾ ತೈಲ ನಿಕ್ಷೇಪ ಮೇಲೆ ಅಮೆರಿಕ ಹಿಡಿತ – ಟ್ರಂಪ್

ವಾಷಿಂಗ್ಟನ್: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ಗಳಷ್ಟು ಪೆಟ್ರೋಲಿಯಂ ನಿಕ್ಷೇಪಗಳ ಮೇಲೆ ಅಮೆರಿಕಕ್ಕೆ ಬಹುಪಾಲು ನಿಯಂತ್ರಣ ನೀಡುವ ಬೃಹತ್ ತೈಲ ಒಪ್ಪಂದವನ್ನು ತಮ್ಮ ಆಡಳಿತ ಮಾಡಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮಹತ್ವದ ಒಪ್ಪಂದಕ್ಕಾಗಿ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮತ್ತು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹಾಗೂ ವೆನೆಜುವೆಲಾದ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದಾಗಿ ಹಾಗೂ ಈ ಒಪ್ಪಂದವು ಉಭಯ ದೇಶಗಳ ನಡುವಿನ ಸಂಬಂಧವನ್ನ ಮತ್ತಷ್ಟು ಬಲಪಡಿಸಲಿದೆ ಎಂದು […]
ನನ್ನ ಮುಂದೆ ಅತಿ ಜಾಣ್ಮೆ ತೋರಿಸಬೇಡಿ- ಅಧಿಕಾರಿಗಳ ಮೇಲೆ ಸಚಿವ ಕೃಷ್ಣ ಭೈರೇಗೌಡ ಗರಂ

ಬೆಂಗಳೂರು: ಎಂಜಿ ರಸ್ತೆಗೆ ಮತ್ತು ಕೊಳಗೇರಿ ಪ್ರದೇಶಕ್ಕೆ ವಾಣಿಜ್ಯ ತೆರಿಗೆ ಒಂದೇನಾ? ನನ್ನ ಮುಂದೆ ಅತಿಯಾದ ಜಾಣ್ಮೆ ತೋರಿಸಬೇಡಿ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಅವರು ವ್ಯಾಪ್ತಿಯ ಐದು ನಿಗಮಗಳ ಪರಿಶೀಲನಾ ಸಭೆಯಲ್ಲಿ ಚಾಮರಾಜಪೇಟೆ ಕಂದಾಯ ಕಚೇರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು,ಅಧಿಕಾರಿಗಳು ತಮ್ಮ ಎಲ್ಲ ನಿರ್ಧಾರಗಳು ಹಾಗೂ ಕಾರ್ಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಕೇಂದ್ರದಲ್ಲಿರಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಬೆಂಗಳೂರಿನ ಅಭಿವೃದ್ಧಿಗೆ ವೃತ್ತಿಪರ ಪ್ರಾಮಾಣಿಕತೆ, ಬಲಿಷ್ಠ ವ್ಯವಸ್ಥೆಗಳು ಹಾಗೂ ಉತ್ತಮ ಆಡಳಿತದ ಅಗತ್ಯವಿದೆ ಎಂದು […]
Yathindra Siddaramaiah: 50:50 ಸೈಟುಗಳು ಮತ್ತು ಸೈಟುಗಳಲ್ಲಿ ಮನೆ ಕಟ್ಟಿದವರ ಲಿಸ್ಟ್ ತರಿಸುತ್ತಿದ್ದೇನೆ – ಯತೀಂದ್ರ ಸಿದ್ದರಾಮಯ್ಯ

ಮೈಸೂರು: 2019 ರಿಂದ 2023ರ ವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಸೈಟು ಹಂಚಿಕೆ ಹಗರಣ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . 50:50 ಸೈಟುಗಳು ಮತ್ತು ಸೈಟುಗಳಲ್ಲಿ ಮನೆ ಕಟ್ಟಿದವರ ಲಿಸ್ಟ್ ತರಿಸುತ್ತಿದ್ದೇನೆ. 2019 ರಿಂದ 2023ರ ವರೆಗಿನ ಎಲ್ಲಾ 50:50 ಸೈಟುಗಳನ್ನ ರದ್ದುಪಡಿಸಲಾಗಿದೆ. 1,000 ಕ್ಕೂ ಹೆಚ್ಚು ಸೈಟುಗಳನ್ನ ರದ್ದುಮಾಡಲಾಗಿದೆ ಸದ್ಯಕ್ಕೆ ಎಲ್ಲವನ್ನೂ ರದ್ದು ಮಾಡಲಾಗಿದೆ. […]
ಇದು ಯಾವುದೇ ಸ್ಟಾರ್ ಪವರ್ ಅಥವಾ ಫ್ಯಾನ್ ಕ್ಲಬ್ ಸುತ್ತ ಕಟ್ಟುವ ಪಕ್ಷವಲ್ಲ, ಸಮ ಮತ್ತು ಸಮಾಜದ ಪಕ್ಷ : ಚೇತನ್ ಅಹಿಂಸಾ

ಶ್ರೀರಂಗಪಟ್ಟಣ: ಆಗಸ್ಟ್ 27ರ ಸಂಜೆ ಮಂಡ್ಯ ಭಾಗದ ರೈತ ಸಮಸ್ಯೆ ಮತ್ತು ಹೊಸ ಪ್ರಾದೇಶಿಕ ಪಕ್ಷದ ಕಲ್ಪನೆಯ ಕುರಿತು ನಟ-ಹೋರಾಟಗಾರ ಚೇತನ್ ಅಹಿಂಸಾ ಅವರು ಶ್ರೀರಂಗಪಟ್ಟಣದಲ್ಲಿ ಗುರುವಾರ ಪೊಲಿಟಿಕಲ್ ಪ್ರಿವ್ಯೂ ಮೀಟ್ಸ್ ನಲ್ಲಿ ಮಾತನಾಡಿದರು. ಶ್ರೀರಂಗಪಟ್ಟಣ ಪ್ರವಾಸಿ ಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲಾ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಜನವರಿಯಲ್ಲಿ ಹೊಸ ಪ್ರಾದೇಶಿಕ ಪಕ್ಷವನ್ನು ಅಧಿಕೃತವಾಗಿ ಆರಂಭಿಸಲಾಗುವುದು ಎಂದು ಮಂಗಳೂರಿನಲ್ಲಿ ಘೋಷಿಸಿದ್ದೆ, […]
ಸರ್ಕಾರಿ ನೌಕರರಿಗೆ ಗುಣಮಟ್ಟದ ಆರೋಗ್ಯ ಸೇವೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ,: ಜಿಲ್ಲೆಯಲ್ಲಿ ಈಗಾಗಲೇ 24 ಆಸ್ಪತ್ರೆಗಳು ಎಬಿ-ಆರ್ಕೆ ಯೋಜನೆಯಡಿ ನೋಂದಣಿಯಾಗಿವೆ. ಈ ಪೈಕಿ 20 ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿಯೂ ನೋಂದಣಿ ಆಗಿವೆ. ಉಳಿದ ನಾಲ್ಕು ಆಸ್ಪತ್ರೆಗಳು ನೋಂದಣಿ ಆಗಬೇಕಿದ್ದು, ಅರ್ಹತೆ ಹೊಂದಿರುವ ಇತರೆ ಆಸ್ಪತ್ರೆಗಳು ಯೋಜನೆಯಡಿ ಸೇರ್ಪಡೆಯಾಗಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಅವರು (ಅ.27) ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್, ಧಾರವಾಡ ಜಿಲ್ಲಾ ಘಟಕ […]
HD Kumaraswamy: ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ನೇಮಕಾತಿ ಅಕ್ರಮ- ಅಕ್ರಮ ನಡೆದಿದೆ ಎಂಬ ವರದಿ ಇದ್ದರೂ ಈ ಬಗ್ಗೆ ಸಚಿವರು ಏಕೆ ಮಾತನಾಡುತ್ತಿಲ್ಲ? : ಹೆಚ್ಡಿಕೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಅಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು, ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ಅಂದಿನ ಕೆಪಿಎಸ್ಸಿ ಕಾರ್ಯದರ್ಶಿ ಸೇರಿದಂತೆ ಹಲವು ಹಂತಗಳಲ್ಲಿ ಅಕ್ರಮ ನಡೆದಿದೆ. ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ಹೇಳಿದ ಅವರು, ನೈತಿಕ ಹೊಣೆ ಹೊತ್ತು […]
ವಿದ್ಯಾವಂತರಲ್ಲೇ ಜಾತಿ ಪ್ರೇಮ ಹೆಚ್ಚು :ವ್ಯವಸ್ಥೆ ಬದಲಾವಣೆಗೆ ಎಲ್ಲರ ಪ್ರಯತ್ನ ಅಗತ್ಯ – ಸಿದ್ದರಾಮಯ್ಯ

ಬೆಂಗಳೂರು: ಓದಿದ ವ್ಯಕ್ತಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಬದಲು ಜಾತಿವಾದ ಪಾಲಿಸುವುದು ಹಾಗೂ ಮೌಢ್ಯ ಮತ್ತು ಮೂಢನಂಬಿಕೆಗಳಿಗೆ ಬದ್ಧರಾಗಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಾಮಾಜಿಕ ಸಮಾನತೆ ಮತ್ತು ವೈಚಾರಿಕ ಚಿಂತನೆ ಪ್ರತಿಪಾದಿಸುವ ಶೂದ್ರ ಸೇವಾ ಸಂಸ್ಥೆ ಎಂಬ ಸಂಘಟನೆ ಉದ್ಘಾಟಿಸಿ ಮಾತನಾಡಿದ ಅವರು, ‘ಚಾತುರ್ವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕಾಗಿ ಸೃಷ್ಟಿಸಿದ್ದಾರೆ ಎಂದರು. ವಿದ್ಯಾವಂತ ಜನರು ಇನ್ನೂ ಸಂಪ್ರದಾಯವನ್ನು ಅನುಸರಿಸುತ್ತಾರೆ. ವ್ಯವಸ್ಥೆ ಬದಲಾವಣೆಗೆ ಎಲ್ಲರ ಪ್ರಯತ್ನ […]