ದ್ವಿತೀಯ ನಿರ್ಬಂಧಗಳಿಗೆ ಅಂತರರಾಷ್ಟ್ರೀಯ ಕಾನೂನಿನಲ್ಲಿ ಯಾವುದೇ ಆಧಾರವಿಲ್ಲ- ಇರಾನ್ ಆಕ್ರೋಶ

ಅಮೆರಿಕ ಇರಾನ್‌ ಗೆ ಯಾರು ಸಹಾಯ ಮಾಡುತ್ತಾರೋ ಅವರ ವಿರುದ್ಧವೂ ಸಹ ಪ್ರತಿಕಾರ ತೀರಿಸಿಕೊಳ್ಳಲಿಉ ಸಜ್ಜಾಗಿದೆ. ಅಲ್ಲದೆ ಅಮೆರಿಕ ಇತ್ತೀಚೆಗೆ ಘೋಷಿಸಿರುವ ಹೊಸ ದ್ವಿತೀಯ ನಿರ್ಬಂಧಗಳ ವಿರುದ್ಧ ಇರಾನ್ ತೀವ್ರ ಆಕ್ರೋಶ ಹೊರಹಾಕಿದೆ. ಇರಾನ್ ಜೊತೆ ಕಾನೂನುಬದ್ಧವಾಗಿ ವ್ಯಾಪಾರ ನಡೆಸುವ ಇತರ ಸ್ವತಂತ್ರ ರಾಷ್ಟ್ರಗಳನ್ನು ಬಲವಂತವಾಗಿ ತಡೆಯುವ ಅಮೆರಿಕದ ಈ ನೀತಿಯು “ಸ್ಪಷ್ಟ ಮತ್ತು ಪೂರ್ಣ ಪ್ರಮಾಣದ ಹೊಸ ವಸಾಹತುಶಾಹಿ” ಎಂದು ಇರಾನ್ ಕಿಡಿಕಾರಿದೆ. ಅಮೆರಿಕದ ಕ್ರಮಗಳು “ಬಹಿರಂಗ ಹಾಗೂ ಸಂಪೂರ್ಣ ವಸಾಹತುಶಾಹಿ” ಮರಳುವ ಸಾಧ್ಯತೆಯನ್ನು ಸೃಷ್ಟಿಸಬಹುದು […]

ಬಿಜೆಪಿಗೆ ಸ್ವಲ್ಪವಾದರೂ ನಾಚಿಕೆಯಿದ್ದಿದ್ದರೆ, ಅವರು ಆಗಲೇ ಸ್ವತಂತ್ರ ತನಿಖೆಗೆ ಆದೇಶಿಸುತ್ತಿದ್ದರು: ಮೋದಿ, ಶಾಗೆ ಪ್ರಿಯಾಂಕ್ ಖರ್ಗೆ ಟಾಂಗ್‌

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆತೀವ್ರ ವಾಗ್ದಾಳಿ ನಡೆಸಿದ್ದಾರೆ, ‘ವಂದೇ ಮಾತರಂ’ ಕುರಿತಾದ ವಿವಾದವು ತುರ್ತು ಆರ್ಥಿಕ ಸಮಸ್ಯೆಗಳು, ನಿರುದ್ಯೋಗ ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸೃಷ್ಟಿಸಲಾದ ಉದ್ದೇಶಪೂರ್ವಕ ತಂತ್ರವಾಗಿದೆ’ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್‌ ಬಳಕೆ ಕುರಿತು ಎಫ್‌ಐಆರ್ ದಾಖಲಿಸಲು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯ ಪೊಲೀಸ್ […]

ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಔಪಚಾರಿಕ ವಹಿವಾಟಿನ ಪ್ರಮಾಣ ಹೆಚ್ಚಾಗಿದೆ: ಸಿಎಂ ಡಿಕೆ.ಶಿವಕುಮಾರ್

ಬೆಂಗಳೂರು: ದೇಶದ ಆರ್ಥಿಕತೆಗೆ ಕರ್ನಾಟಕದ ಕೊಡುಗೆಯನ್ನು ಸಿಎಂ ಡಿಕೆ ಶಿವಕುಮಾರ್ ಅವರು ಪ್ರಸ್ತಾಪಿಸಿದ್ದಾರೆ, ದಕ್ಷಿಣ ಭಾರತವು ಭಾರತದ ಪ್ರಗತಿಯನ್ನು ಮುನ್ನಡೆಸುವ ‘ಇಂಧನ’ ಎಂದು ಹೇಳಿದ್ದಾರೆ. ಬೆಣಗಳೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕವಾಗಿದ್ದು, ತನ್ನ ಕೊಡುಗೆಗೆ ಅನುಗುಣವಾಗಿ ರಾಜ್ಯಕ್ಕೆ ಸಂಪನ್ಮೂಲಗಳ ನ್ಯಾಯಯುತ ಪಾಲು ದೊರೆಯಬೇಕು ಎಂದು ತಿಳಿಸಿದರು. ಇತರ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಔಪಚಾರಿಕ ವಹಿವಾಟಿನ ಪ್ರಮಾಣ ಹೆಚ್ಚಾಗಿದೆ ಎಂದರು. ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಪ್ರತಿಕೂಲ ಪರಿಣಾಮ ಬೀರದಂತೆ […]

ಇರಾನ್‌ಗೆ ಆರ್ಥಿಕ ನೆರವು ನೀಡುವ ದೇಶಗಳ ವಿರುದ್ಧವೂ ನಿರ್ಬಂಧ ವಿಧಿಸುವ ಸಾಧ್ಯತೆ- ಸ್ಕಾಟ್ ಬೆಸೆಂಟ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಯಕಟ್ಟಿನ ಹಾರ್ಮುಜ್ ಜಲಸಂಧಿಯನ್ನು “ಅಮೆರಿಕದ ಭೂಭಾಗ” ಎಂದು ಘೋಷಿಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಜಲ, ಭೂಮಿ, ಆಕಾಶ್ ಮತ್ತು ಸೈಬರ್ ಮೂಲಕ “ವಿನಾಶಕಾರಿ” ಸೇನಾ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಸಿದೆ.ಹಾರ್ಮುಜ್ ಜಲಸಂಧಿಯ ವಿಚಾರದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ತೀವ್ರ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಘರ್ಷ ಏರ್ಪಟ್ಟಿದೆ. ಟೆಹ್ರಾನ್ ಮೇಲೆ ಒತ್ತಡ ಹೇರಲು ಹಾಗೂ ಅಲ್ಲಿನ ಆಡಳಿತವನ್ನು ಉರುಳಿಸಲು ಟ್ರಂಪ್ ಆಡಳಿತವು ಇತಿಹಾಸದಲ್ಲೇ ಅತ್ಯಂತ ಕಠಿಣ ಆರ್ಥಿಕ ನಿರ್ಬಂಧಗಳನ್ನು ವಿಧಿಸುವುದಾಗಿ ಘೋಷಿಸಿರುವ ಬೆನ್ನಲ್ಲೇ […]

ಆರೋಗ್ಯಕ್ಕೆ ಇಲ್ಲಿದೆ ಅದ್ಭುತ ಲಾಭ- ದಿನಕ್ಕೆ 15 ನಿಮಿಷ ಬರಿಗಾಲಲ್ಲಿ ನಡೆಯಬೇಕು ಯಾಕೆ ಗೊತ್ತೇ? ಇಲ್ಲಿದೆ ನೋಡಿ

ದಿನವೂ ಸ್ವಲ್ಪ ಹೊತ್ತು ಹುಲ್ಲು ಅಥವಾ ಮಣ್ಣಿನ ಮೇಲೆ ಬರಿಗಾಲಲ್ಲಿ ನಡೆದರೆ ಪಾದಗಳ ಸ್ನಾಯುಗಳು ಬಲಗೊಳ್ಳುತ್ತವೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ. ದಿನಕ್ಕೆ 15 ನಿಮಿಷ ಬರಿಗಾಲಿನಲ್ಲಿ ನಡೆಯುವುದರಿಂದ ದೇಹ ಮತ್ತು ಮನಸ್ಸಿಗೆ ನಂಬಲಾಗದ ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ನಮ್ಮ ಪಾದಗಳಲ್ಲಿ ಸಾವಿರಾರು ನರಗಳ ತುದಿಗಳಿರುತ್ತವೆ. ನಾವು ಬರಿಗಾಲಿನಲ್ಲಿ ನೆಲ, ಹಸಿರು ಹುಲ್ಲು ಅಥವಾ ಮಣ್ಣಿನ ಮೇಲೆ ನಡೆದಾಗ ಆ ನರಗಳು ಜಾಗೃತಗೊಂಡು ಇಡೀ ದೇಹದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ. ಬರಿಗಾಲಲ್ಲಿ ನಡೆದರೆ ಸಾಕಷ್ಟು ಲಾಭಗಳಿವೆ: […]

K.J. George – ಮಲೆನಾಡು ಪ್ರವಾಸೋದ್ಯಮ ಸಾಮರ್ಥ್ಯ ಸಮಗ್ರವಾಗಿ ಅಭಿವೃದ್ಧಿ : ಕೆ.ಜೆ. ಜಾರ್ಜ್‌

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಕರ್ನಾಟಕದ ಪ್ರವಾಸೋದ್ಯಮದ ಪ್ರಮುಖ ಆಸ್ತಿಗಳಾಗಿವೆ. ಇಲ್ಲಿನ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸ್ಥಳೀಯ ಅಗತ್ಯತೆಗಳು ಮತ್ತು ಜನಪ್ರತಿನಿಧಿಗಳ ಸಲಹೆಗಳನ್ನು ಒಳಗೊಂಡ ಸಮಗ್ರ ನೀತಿ ಅಗತ್ಯವಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. […]

Priyank Kharge : ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ RSS ಏನ್ ಮಾಡಿದ್ದಾರೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ RSS ಏನ್ ಮಾಡಿದ್ದಾರೆ. ಇಷ್ಟೆಲ್ಲಾ‌ ಹೇಳ್ತಾ ಇದ್ದೀರಾ ಬೋಸ್, ನೆಹರೂ, ಸರ್ದಾರ್ ಪಟೇಲ್, ಟ್ಯಾಗೋರ್ ಅವರು ದೇಶ ದ್ರೋಹಿಗಳಾ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್ ಇಲ್ಲದೇ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ಕೊಡ್ತೀನಿ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಂದೇ ಮಾತರಂ ಗೀತೆ ಎರಡೇ ಪ್ಯಾರ ಹಾಡುವ ಕಾಂಗ್ರೆಸ್ ನಿರ್ಣಯದ […]

ಪಾಕ್-ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ-ಭಯೋತ್ಪಾದಕರ ರಕ್ಷಣೆಗೆ ವಿಶ್ವಸಂಸ್ಥೆ ವೇದಿಕೆ ಬಳಸದಿರಿ

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾರ್ಯವಿಧಾನಗಳ ಕುರಿತು ನಡೆದ ಮುಕ್ತ ಚರ್ಚೆಯಲ್ಲಿ ಭಾರತದ ರಾಯಭಾರಿ ಯೋಜನಾ ಪಟೇಲ್‌ ಮಾತನಾಡಿದ್ದಾರೆ. ಭದ್ರತಾ ಮಂಡಳಿಯ ಸದಸ್ಯತ್ವವನ್ನು ‘ಸಂಕುಚಿತ ರಾಜಕೀಯ ಹಿತಾಸಕ್ತಿಗಳನ್ನು ಮುಂದುವರಿಸಲು ಬಳಸಬಾರದು ಎಂದು ಹೇಳಿದ್ದಾರೆ. ಭಯೋತ್ಪಾದಕರನ್ನು ರಕ್ಷಿಸಲು ವಿಶ್ವಸಂಸ್ಥೆಯಂತಹ ಜಾಗತಿಕ ವೇದಿಕೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ರಾಷ್ಟ್ರಗಳ ವಿರುದ್ಧ ಭಾರತ ಕಠಿಣ ನಿಲುವು ತಳೆದಿದೆ. ಭದ್ರತಾ ಮಂಡಳಿಯ ಸದಸ್ಯತ್ವವನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು ಎಂದು ಪಾಕಿಸ್ತಾನ ಹಾಗೂ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದೆ. ಈ ವಿಚಾರದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ವಸ್ತುನಿಷ್ಠತೆ ಅಗತ್ಯ. […]

Prime Minister Modi-ನಮ್ಮ ಆಡಳಿತದಲ್ಲಿ ದೀರ್ಘಕಾಲೀನ ದೃಷ್ಟಿಕೋನ ಇರಲಿ: ಪ್ರಧಾನಿ ಮೋದಿ

ನವದೆಹಲಿ: ದತ್ತಾಂಶವು ರಾಷ್ಟ್ರೀಯ ಸಂಪತ್ತು ಹಾಗೂ ಭವಿಷ್ಯದ ಪ್ರಮುಖ ಸಂಪನ್ಮೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆ ನಡೆಸಿದರು. ಕೇಂದ್ರ ಸಚಿವ ಸಂಪುಟ ಸಭೆ ಬಳಿಕ, ಮಾತನಾಡಿದ್ದಾರೆ. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಹಾಗೂ ವಿದೇಶಾಂಗ ವ್ಯವಹಾರಗಳು ಮತ್ತು ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಹಾಗೂ ಇಲಾಖೆಗಳ ಮುಂದಿನ ಕಾರ್ಯಸೂಚಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಸಭೆಯಲ್ಲಿ ಇಲಾಖೆಗಳ ನಡುವಿನ ಪ್ರತ್ಯೇಕತೆ ಮನೋಭಾವವನ್ನು ನಿವಾರಿಸುವ ಸವಾಲಿನ ಕುರಿತು […]

Amit Shah: ಕಾಂಗ್ರೆಸ್‌ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ- ಕೈ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಚೆನ್ನೈ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ನಿರ್ಧಾರವನ್ನು ಅವರು ‘ದೇಶವಿರೋಧಿ’ ಎಂದು ಟೀಕಿಸಿದ್ದು, ಇದು ಕಾಂಗ್ರೆಸ್‌ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟಿನಲ್ಲಿ ಮಾತನಾಡಿದ ಅಮಿತ್ ಶಾ, ವಂದೇ ಮಾತರಂ’(ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬುಧವಾರ ನಡೆದ ಸಭೆಯಲ್ಲಿ, 1937ರ […]