ಸದನದ ಹೊರಗೆ ರಾಜಕೀಯ ಮಾಡೋಣ, ಸದನದ ಒಳಗೆ ಒಟ್ಟಾಗಿ ಜನರಿಗಾಗಿ ಕೆಲಸ ಮಾಡೋಣ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಜೂನ್ 3ರಂದು ನಮ್ಮ ಪಕ್ಷದ […]

ಸಚಿವ ಜಮೀರ್ ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರದ ನಿಜವಾದ ಮುಖ ಹಾಗೂ ನಮ್ಮ ಮಾತೃಭೂಮಿಯ ಬಗ್ಗೆ ಅದರ ಸಂಪೂರ್ಣ ಅಗೌರವವನ್ನು ನೋಡಿ, ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ಪತ್ರ ಬರೆದು, ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜಾರೋಹಣ ಮಾಡುವ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಇದು ನಮ್ಮ ಸಂವಿಧಾನಕ್ಕೆ ಸಂಪೂರ್ಣ ಅವಮಾನ ಮತ್ತು ಕೋಟ್ಯಂತರ ಭಾರತೀಯರಿಗೆ ನೇರ […]

Be careful when you judge someone : ಬೇರೆಯವ್ರ ಕಷ್ಟ ಕಂಡು ಕೇಕೆ ಹಾಕುವ ಮುನ್ನ, ಆ ಕಂಟಕ ನಿಮಗೂ ಕಿಕ್‌ ಕೊಡುತ್ತದೆ ಎಚ್ಚರ!

ಕಷ್ಟ ಎಲ್ಲರ ಜೀವನದಲ್ಲಿ ವಾಸ್ತವ ಪರಿಚಯಿಸುವ ಒಂದೊಳ್ಳೆಯ ಅನುಭವವಾಗಿದ್ದು, ಸಂತಸದಲ್ಲಿರುವಾಗ ಎಲ್ಲರೂ ನಮ್ಮತ್ತ ಇಣುಕಿ ನೋಡುತ್ತಾರೆ ಆದರೆ ದುಖಃದಲ್ಲಿ ಇದ್ದಾಗ, ಅಯ್ಯೋ ಇವರ ಗೋಳು ಇದ್ದದ್ದೇ ಎಂದು ನೋವಿಗೆ ಮತ್ತಷ್ಟು ಬರೆ ಎಳೆಯುತ್ತಾರೆ. ಹೀಗಿರುವಾಗ ನಾವು ಸಂಕಟಗಳನ್ನು ಹೀಯಾಳಿಸುತ್ತೇವೆ ಆದ್ರೆ ಆ ನೋವುಗಳೇ ನಮ್ಮವರು ಯಾರು ಎಂದು ಪರಿಚಯಿಸುತ್ತವೆ. ಈ ವಿಚಾರ ಎಲ್ಲರಿಗೂ ಗೊತ್ತೇ ಇರುತ್ತದೆ. ದಿನ ಬೆಳಗ್ಗೆ ಆದರೆ ಸಾಕು ಇನ್ನೊಬ್ಬರನ್ನು ಶಪಿಸುತ್ತಲೇ ಕಾಲ ಕಳೆಯುತ್ತಿದ್ದು ಪರರಿಗೆ ಕೆಟ್ಟದನ್ನು ಬಯಸುವುದರಲ್ಲಿ ಪಿಎಚ್‌ಡಿಯನ್ನು ಪಡೆದಿರುತ್ತೇವೆ. ಒಳ್ಳೆಯತನ ಎನ್ನುವುದು […]

152 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 400 ಹೊಸ ಬಸ್ ಕೊಳ್ಳಲು ಸಂಪುಟ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಜಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 469(iii)ರ ಘೋಷಣೆಯಂತೆ ಕೆಕೆಆರ್‌ಟಿಸಿಗೆ ಹಂಚಿಕೆಯಾಗಿರುವ 400 ಬಸ್‌ಗಳನ್ನು ಖರೀದಿಸಲು ಪ್ರತಿ ಬಸ್‌ಗೆ ಅಂದಾಜು ರೂ.38 ಲಕ್ಷ […]

ಪರಪ್ಪನ ಅಗ್ರಹಾರ ಜೈಲಿನ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ದೊರೆತ ಮೊಬೈಲ್ ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳು ಪತ್ತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಜೈಲಿನಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ದಿಢೀರ್ ಪರಿಶೀಲನೆ ವೇಳೆ ಈ ಸಾಧನ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಜೈಲು ಅಧಿಕಾರಿಯೊಬ್ಬರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಫೋನ್‌ನಲ್ಲಿ 80ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಲಭ್ಯ ಸಿಸಿಬಿ ಅಧಿಕಾರಿಗಳು ಉನ್ನತ ಮಟ್ಟದ […]

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್‌ಗೆ ಹೈಕೋರ್ಟ್ ಹಿನ್ನಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೊಂದು ಭಾರಿ ಮುಖಭಂಗವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿ ವಿಚಾರಣೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ 59ನೇ ಸಿಸಿಹೆಚ್‌ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹೈಕೋರ್ಟ್‌ನಲ್ಲಿ ನಡೆದ ಕಾವೇರಿದ ವಾದ-ಪ್ರತಿವಾದ: ವಿಚಾರಣೆ ವೇಳೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿ, “ನೈಸರ್ಗಿಕ ನ್ಯಾಯದ […]

ಆಗಸ್ಟ್ 15ರಂದು ವಿಧಾನಸೌಧ ಮೆಟ್ರೋ ನಿಲ್ದಾಣ ಬಂದ್!

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ರಾಜಧಾನಿ ಸಜ್ಜಾಗುತ್ತಿದ್ದು, ವಿಧಾನಸೌಧದಲ್ಲಿ ನಡೆಯಲಿರುವ ವೈವಿಧ್ಯಮಯ ‘ಫ್ರೀಡಂ ಹಬ್ಬ’ಕ್ಕೆ ಭಾರಿ ಭದ್ರತೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಆಗಸ್ಟ್ 15ರಂದು ‘ಡಾ. ಬಿ.ಆರ್. ಅಂಬೇಡ್ಕರ್ – ವಿಧಾನಸೌಧ’ ಮೆಟ್ರೋ ನಿಲ್ದಾಣದ ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ತರಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರ ಮಾರ್ಗದರ್ಶನದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸುರಕ್ಷತೆಯ ಹಿತದೃಷ್ಟಿಯಿಂದ ಈ ಕೆಳಗಿನ ನಿರ್ಧಾರಗಳನ್ನು ಪ್ರಕಟಿಸಿದೆ. ಮೆಟ್ರೋ ಸಂಚಾರದ ಪ್ರಮುಖ […]

ನಾಂದೇಡ್ ಗುರುದ್ವಾರದಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲವಾರ್ ದಾಳಿ: ಆಸ್ಪತ್ರೆಗೆ ದಾಖಲು!

ಮಹಾರಾಷ್ಟ್ರ: ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್ ಸಾಹಿಬ್ ಗುರುದ್ವಾರದಲ್ಲಿ ನಿಹಾಂಗ್ ಸಿಖ್‌ಗಳ ಗುಂಪೊಂದು ಭೀಕರ ದಾಳಿ ನಡೆಸಿದೆ. ಗುರುದ್ವಾರಕ್ಕೆ ಭೇಟಿ ನೀಡಿದ್ದ ವೇಳೆ ನಿಹಾಂಗನೊಬ್ಬ ತಲವಾರಿನಿಂದ (ಕಿರ್ಪಾಣ್) ಏಕಾಏಕಿ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಸುಖ್‌ಬೀರ್ ಬಾದಲ್ ಅವರ ಕೈ ಮತ್ತು ಹೆಗಲಿಗೆ ಗಾಯಗಳಾಗಿವೆ. ಪತ್ನಿ ಹರ್‌ಸಿಮ್ರತ್ ಕೌರ್ ಜೊತೆ ಆಗಮಿಸಿದ್ದ ವೇಳೆ ಕೃತ್ಯ! ಮಾಹಿತಿಯ ಪ್ರಕಾರ, ಸುಖ್‌ಬೀರ್ ಸಿಂಗ್ ಬಾದಲ್ ಅವರು ತಮ್ಮ […]

B Y Vijayendra: ನಾಗೇಂದ್ರಗೆ, ವಾಲ್ಮೀಕಿ ಸಮಾಜದ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ: ವಿಜಯೇಂದ್ರ

Click here ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಆರೋಪಿ ಹಾಗೂ ಸಚಿವ ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಸಮಾಜದ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಯಾಕೆ ಸಲ್ಲಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂ. ಲೂಟಿಯ ಹಗರಣದಲ್ಲಿ ನಾಗೇಂದ್ರ ಅವರು ಆರೋಪಿ. ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ತನಿಖೆ ಆರಂಭವಾಗಿದ್ದು, ತೆಲಂಗಾಣಕ್ಕೆ […]

Mallikarjun Kharge: ಈ ದೇಶದಲ್ಲಿ ದಲಿತರಿಗೆ ಜಾಗವಿಲ್ಲ , ಧರ್ಮದ ಹೆಸರಿನಲ್ಲಿ ಎಲ್ಲರನ್ನೂ ವಿಭಜಿಸಲಾಗುತ್ತಿದೆ – ಖರ್ಗೆ ಕಿಡಿ

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ್ದರು ಈ ಕಾರಣಕ್ಕೆ ರ‍್ಯಾಲಿ ನಡೆದ ಸ್ಥಳವನ್ನು ‘ಶುದ್ಧೀಕರಣ’ ಹೋಮ ಮಾಡಿದ್ದಾರೆ. ಈ ವಿಚಾರ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೆ ವಿಷಯಕ್ಕೆ ರಾಜ್ಯಸಭೆಯಲ್ಲಿ ಖರ್ಗೆ ಪ್ರತಿಕ್ರಿಯಿಸಿದ್ದಾರೆ , . ತಮ್ಮ ಭಾಷಣದಲ್ಲಿ ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಮಾತನಾಡಿಲ್ಲ. ಸರ್ಕಾರದ ಸಮಸ್ಯೆಗಳ ಬಗ್ಗೆ ಮಾತ್ರ ಪ್ರಸ್ತಾಪಿಸಿದ್ದೇನೆ. ಅನು ತಮ್ಮ ರ‍್ಯಾಲಿ ನಡೆಸಿದ ಸ್ಥಳವನ್ನು ಶುದ್ಧೀಕರಿಸಲು ಹೋಮ ಮಾಡಲಾಗಿದೆ ಎಂದು ಖರ್ಗೆ […]