PM Narendra Modi: ಬಡವರು ಮತ್ತು ದೀನದಲಿತರ ಸಂಕಷ್ಟಗಳಿಗೆ ಅಗ್ರಸ್ಥಾನ ನೀಡುವ ಯುವ ಜನತೆಯನ್ನು ನಾವು ಬೆಂಬಲಿಸಬೇಕು- ಪ್ರಧಾನಿ ನರೇಂದ್ರ ಮೋದಿ

ಮೈಸೂರು : “ಎಲ್ಲರಿಗೂ ನನ್ನ ನಮಸ್ಕಾರಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಕನ್ನಡದಲ್ಲೇ ಭಾಷಣ ಮಾಡಿದರು. ಇದನ್ನು ಕಂಡು ಪ್ರೇಕ್ಷಕರು ಭಾರೀ ಚಪ್ಪಾಳಿ ತಟ್ಟಿದರು. ಮೈಸೂರಿನಲ್ಲಿ ವಿವೇಕ ಸ್ಮಾರಕವನ್ನು ಉದ್ಘಾಟನೆ ಮಾಡಿದ ಬಳಿಕ ರಾಮಕೃಷ್ಣ ಆಶ್ರಮದ ಆಡಿಟೋರಿಯಂನಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,“ಮೈಸೂರು ಭಾರತದ ಪ್ರಾಚೀನ ಸಾಂಸ್ಕೃತಿಕ ಪ್ರಜ್ಞೆಯ ಕೇಂದ್ರವಾಗಿದೆ. ಭಾರತದ ಪರಂಪರೆಯು ಈ ನಗರದ ಪ್ರತಿಯೊಂದು ಮೂಲೆಯಲ್ಲೂ ಹಾಸುಹೊಕ್ಕಿದೆ. ಮೈಸೂರು […]
ಕರ್ನಾಟಕದ ಕೆಲವು ಭಾಗಗಳಲ್ಲಿ ವರುಣ ಅಬ್ಬರ: ಎಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿತ್ತು, ಕೆಲವು ಕಡೆ ನಿರಂತರ ಮಳೆಗೆ ಜನ ಬೇಸತ್ತಿದ್ದಾರೆ. ಇನ್ನು ಕೆಲವು ಕಡೆ ರೈತರು ಮಳೆ ಬಂತು ಮಳೆ ಎಂದು ಸಂತಸ ಪಟ್ಟಿದ್ದಾರೆ. ಹಲವು ಭಾಗಗಳಲ್ಲಿ ವರುಣ ಅಬ್ಬರದಿಂದ ಕೆಲವು ಅನಾಹುತಗಳಾಗಿದೆ. ಇತ್ತ ದಕ್ಷಿಣ ಕನ್ನಡದ ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಯಿಲ ಗ್ರಾಮಕ್ಕೆ ಎನ್‌ಡಿಆರ್‌ಎಫ್ ತಂಡ ಆಗಮಿಸಿದೆ. 30 ಮಂದಿಯ ಎನ್‌ಡಿಆರ್‌ಎಫ್ ತಂಡ ಬೆಳ್ತಂಗಡಿಯಲ್ಲಿ ಬೀಡುಬಿಟ್ಟಿದೆ ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು ನಾಲ್ಕು ವರ್ಷದ […]
ರಾಜ್ಯದ ಅಭಿವೃದ್ಧಿಗೆ ಸಹಕರಿಸಿ: ಪ್ರಧಾನಿಗೆ ಮೋದಿಗೆ ಮನವಿ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು:ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಡಿ.ಕೆ. ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಮೈಸೂರಿನಲ್ಲಿವಿವೇಕ ಸ್ಮಾರಕ ಉದ್ಘಾಟನೆಗಾಗಿ ಬಂದಿದ್ದು, ಮೊದಲು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕವಾಗಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಕಲ ಜನರ ಅಭಿವೃದ್ಧಿ, ಸಮೃದ್ಧಿ ಹಾಗೂ ತಮ್ಮ ಸಾರ್ವಜನಿಕ ಜೀವನದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ. ಈ ಶುಭ ಸಂದರ್ಭದಲ್ಲಿ ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಅನಿಲ್ ಚಿಕ್ಕಮಾದು ಹಾಗೂ ರವಿಶಂಕರ್ […]
ಬೆಂಗಳೂರಲ್ಲಿ ಪಾದಚಾರಿ ಮಾರ್ಗಗಳ ಮಧ್ಯದಲ್ಲಿರುವ ಪರಿವರ್ತಕಗಳ ಸ್ಥಳಾಂತರಕ್ಕೆ ಸಚಿವ ಕೆ.ಜೆ ಜಾರ್ಜ್ ಚಾಲನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಯೋಜಿಸಿರುವ ಒಂದು ತಿಂಗಳ ಅವಧಿಯ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನದಲ್ಲಿ ಬೆಸ್ಕಾಂ ಕೈಜೊಡಿಸಿದ್ದು, ಪರಿವರ್ಕತಗಳ ಸ್ಥಳಾಂತರದಿಂದ “ಸುರಕ್ಷಿತ ನಡಿಗೆ”ಯ ಗ್ಯಾರಂಟಿ ನೀಡಲಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಬಿಎ ಘೋಷಿಸಿರುವ ಒಂದು ತಿಂಗಳ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನದಲ್ಲಿ ಕೈಜೋಡಿಸಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಶನಿವಾರ ಹಮ್ಮಿಕೊಂಡಿದ್ದ ಪಾದಾಚಾರಿ ಮಾರ್ಗಗಳಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ವೀಕ್ಷಿಸಿದ ಸಚಿವ ಕೆ.ಜೆ.ಜಾರ್ಜ್ ಅವರು, […]
ನಾಳೆ ಪೊಲೀಸ್ ಕಾನ್ ಟೇಬಲ್ ನೇಮಕಾತಿಗೆ ಪರೀಕ್ಷೆ: ಬೆಂಗಳೂರು ಸೇರಿ ಎಂಟು ಜಿಲ್ಲೆಗಳ ಮೇಲೆ ಕೆಇಎ ಕಮಾಂಡ್ ಸೆಂಟರ್ ನಿಗಾ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಭಾನುವಾರ (ಆ.2) ನಡೆಸುತ್ತಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಮೇಲೆ ಹದ್ದಿನ ಕಣ್ಣಿಡಲು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಅದರ ಕೊನೆ ಕ್ಷಣದ ತಯಾರಿಯನ್ನು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಶನಿವಾರ ರಾತ್ರಿ ಪರಿಶೀಲಿಸಿದರು. ರಾಜ್ಯದಲ್ಲಿ 884 ಕೇಂದ್ರಗಳಲ್ಲಿ 4,54,532 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 149 ಪರೀಕ್ಷಾ ಕೇಂದ್ರಗಳು ಇದ್ದು ವೆಬ್ ಕಾಸ್ಟಿಂಗ್ […]
ಮೈಸೂರಿನ ವಿವೇಕ ಸ್ಮಾರಕವು ಸಾಧಕರು, ಶ್ರದ್ಧಾಳುಗಳ ಕೇಂದ್ರವಾಗಲಿ: ಪ್ರಧಾನಿ ಮೋದಿ

ಮೈಸೂರು: ಮೈಸೂರು ಪ್ರಮುಖ ಸಾಂಸ್ಕೃತಿಕ ಕೇಂದ್ರ ಎಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ತಿಳಿಸಿದರು. ವಿವೇಕ ಸ್ಮಾರಕವು ಸಾಧಕರು ಮತ್ತು ಶ್ರದ್ಧಾಳುಗಳ ಕೇಂದ್ರ ಆಗಲಿ ಎಂದು ಆಶಿಸಿದರು. ಶ್ರೀ ರಾಮಕೃಷ್ಣ ಮಠದಿಂದ ನಿರ್ಮಿಸಿದ ವಿವೇಕ ಸ್ಮಾರಕವನ್ನು ಇಂದು ಉದ್ಘಾಟಿಸಿದ ಬಳಿಕ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. 7 ಸಂಪುಟಗಳ ರಾಮಾಯಣ, ಬದುಕು ಬೆಳಕು ಪುಸ್ತಕಗಳನ್ನು ಅವರು ಇದೇವೇಳೆ ಬಿಡುಗಡೆ ಮಾಡಿದರು. ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್‍ನ ಸ್ವಾಮೀಜಿಗಳು ಸಂತರು, ಗುರುಬಂಧುಗಳನ್ನು ಭೇಟಿ ಮಾಡುವ ಅವಕಾಶ ಮತ್ತೆ ನನಗಿಂದು […]
Karnataka Dam Water: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ – 13 ಜಲಾಯಶಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ಜಲಾಯಶಗಳ ಮಟ್ಟ ಏರಿಕೆಯಾಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಪೂರ್ವ ವಿದರ್ಭ ಮತ್ತು ಪಕ್ಕದ ಪಶ್ಚಿಮ-ಮಧ್ಯ ಛತ್ತೀಸ್‌ಗಢದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕಳೆದ 6 ಗಂಟೆಗಳಲ್ಲಿ ಗಂಟೆಗೆ 15 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯುವ್ಯಕ್ಕೆ ಚಲಿಸಿದೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆʻ ಪಶ್ಚಿಮ ವಿದರ್ಭ ಮತ್ತು ಪಕ್ಕದ ದಕ್ಷಿಣ ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಸರಾಸರಿ ಸಮುದ್ರಮಟ್ಟದಲ್ಲಿ ಇರುವ […]
ಕಾಮನ್‌ವೆಲ್ತ್ ಗೇಮ್ಸ್ 2026: ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್, ಜೈಸ್ಮಿನ್ ಲಂಬೋರಿಯಾಗೆ ಚಿನ್ನದ ಪದಕ

ಗ್ಲಾಸ್ಗೋ: ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಭರ್ಜರಿ ಪದಕ ಬೇಟೆ ಮುಂದುವರಿಸಿದ್ದಾರೆ. ಒಂದೇ ದಿನ ಭಾರತಕ್ಕೆ ಬರೋಬ್ಬರಿ ಎರಡು ಚಿನ್ನದ ಪದಕಗಳು ಹರಿದುಬಂದಿದ್ದು, ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ಅವರು ನೀಡಿದ ಅದ್ಭುತ ಪ್ರದರ್ಶನದಿಂದ ಭಾರತದ ಒಟ್ಟು ಸ್ವರ್ಣ ಪದಕಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಾಕ್ಸಿಂಗ್‌ನಲ್ಲಿ ಭಾರತದ ‘ಗೋಲ್ಡನ್ ಡಬಲ್’ ಪಂಚ್! ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತೀಯ ಪಟುಗಳು ಸಂಪೂರ್ಣ ಪಾರಮ್ಯ ಮೆರೆದಿದ್ದಾರೆ: ಟ್ರಿಪಲ್ ಜಂಪ್‌ನಲ್ಲಿ ಐತಿಹಾಸಿಕ ‘ಡಬಲ್ ಪೋಡಿಯಂ’ ಮತ್ತೊಂದೆಡೆ […]
76 ಕಲ್ಯಾಣ ಕರ್ನಾಟಕ ಪಿಡಿಓಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಹುದ್ದೆ, ಅಧಿಕಾರ, ದರ್ಪ ಚಲಾವಣೆಗೆ ಅಲ್ಲ, ಬದಲಾಗಿ ಅದು ಜನಸೇವೆ ಮಾಡಲು ಸಿಕ್ಕ ಅವಕಾಶ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ವೃಂದದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಹೊಸದಾಗಿ ನೇಮಕಗೊಂಡಿರುವ 66 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿ, ಪ್ರಾಮಾಣಿಕತೆ, ದಕ್ಷತೆ ಮತ್ತು ನಿಷ್ಠೆಯ ಪ್ರಮಾಣ ವಚನ ಭೋಧಿಸಿ ಮಾತನಾಡಿ ಅವರು, ರಾಜ್ಯದಲ್ಲಿರುವ ಎಲ್ಲ 5927 ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಸ್ವಾರ್ಥ […]
ಯುಜಿ ನೀಟ್: ಆ.4ರಿಂದ 8ರವರೆಗೆ ದಾಖಲೆ ಪರಿಶೀಲನೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಇದುವರೆಗೂ ದಾಖಲೆ ಪರಿಶೀಲನೆ ಮಾಡಿಕೊಳ್ಳದವರ ದಾಖಲೆ ಪರಿಶೀಲನೆ ಆಗಸ್ಟ್ 4ರಿಂದ 8ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಆಗಸ್ಟ್ 2ರಂದು ಬಿಡುಗಡೆ ಮಾಡುವ ಲಿಂಕ್ ಮೂಲಕ ಸ್ಲಾಟ್ ಬುಕ್ ಮಾಡಿಕೊಂಡೇ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಯಾರೆಲ್ಲ ದಾಖಲೆ ಪರಿಶೀಲನೆಗೆ ಬರಬೇಕು? ಎನ್ ಆರ್ ಐ ವಾರ್ಡ್, ಎನ್ […]